ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಕೊಡಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

By Kannadaprabha News  |  First Published Jun 30, 2023, 3:00 AM IST

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮನವಿ ಮಾಡಿದರು. 


ಬೆಳಗಾವಿ (ಜೂ.30): ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮನವಿ ಮಾಡಿದರು. ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರುಪಾಯಿ ಕೂಡ ಖರ್ಚಿಲ್ಲದೆ ಮಹಿಳೆಯರಿಗೆ ಹಣ ನೀಡಬೇಕೆನ್ನುವುದು ಸರ್ಕಾರದ ಉದ್ದೇಶ. 

ಹಾಗಾಗಿ ಸೇವೆ ನೀಡುವ ಕೇಂದ್ರ ಮತ್ತು ವ್ಯಕ್ತಿಗಳಿಗೆ ಸರ್ಕಾರವೇ ಸೇವಾ ಶುಲ್ಕ ಎಂದು ಒಂದು ಅರ್ಜಿಗೆ 20 ನೀಡಲು ನಿರ್ಧರಿಸಿದೆ. ಹಾಗಾಗಿ ಯಾರಾದರೂ ಬಂದು ಹಣ ಕೊಡಿ ಎಂದು ಕೇಳಿದರೆ ಕೊಡಬೇಡಿ ಎಂದು ವಿನಂತಿಸಿದರು. ಕೆಲವು ಕಡೆ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ದೇನೆ. ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಮಹಿಳೆಯರ ಖಾತೆಗೆ ಹಣ ತಲುಪಬೇಕು ಎನ್ನುವುದು ನಮ್ಮ ಉದ್ದೇಶ. ಇದಕ್ಕೆ ಯಾರೂ ಅವಕಾಶ ಕೊಡಬಾರದು. 

Tap to resize

Latest Videos

ನಾನು ಗ್ರಾನೈಟ್‌ ವಿದೇಶಕ್ಕೆ ರಫ್ತು ಮಾಡಲಿಲ್ಲ: ಡಿಕೆಶಿ ವಿರುದ್ಧ ಎಚ್‌ಡಿಕೆ ಪರೋಕ್ಷ ವಾಗ್ದಾಳಿ

ಅರ್ಜಿ ಸಲ್ಲಿಸಲು ಯಾವುದೇ ಸಮಯ ಮಿತಿ ಇಲ್ಲದಿರುವುದರಿಂದ ಯಾವುದೇ ಅವಸರವಿಲ್ಲದೆ ನಿಧಾನವಾಗಿ ಅರ್ಜಿ ಹಾಕಲು ಅವಕಾಶ ನೀಡಲಾಗುವುದು. ಹಾಗಾಗಿ ಯಾರೂ ಹಣ ಕಳೆದುಕೊಳ್ಳಬಾರದು ಎಂದು ಹೇಳಿದರು. ಕಳೆದ 4 ತಿಂಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಾಲಿನ ಪೌಡರ್‌ ಪೂರೈಕೆಯಾಗುತ್ತಿಲ್ಲ. ದರ ಹೆಚ್ಚಳವಾಗಿದ್ದರಿಂದ ಹಾಲು ಪೂರೈಸಲು ಸಾಧ್ಯವಿಲ್ಲ ಎಂದು ಕೆಎಂಎಫ್‌ನವರು ನಿಲ್ಲಿಸಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಗೃಹಲಕ್ಷ್ಮಿ ಹೆಸರಲ್ಲಿ ವಂಚನೆ: ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ನೆಪದಲ್ಲಿ ಹಣ ಪಡೆಯುತ್ತಿದ್ದ ನಗರದ ಖಾಸಗಿ ಏಜೆನ್ಸಿಯವರನ್ನು ಮಹಿಳೆಯರೇ ತೀವ್ರ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ಜರುಗಿದೆ. ಗೃಹಲಕ್ಷ್ಮಿ ಯೋಜನೆಗೆ ಇನ್ನೂ ನೋಂದಣಿ ಪ್ರಕ್ರಿಯೆಯೇ ಆರಂಭಗೊಂಡಿಲ್ಲ. ಅದಾಗಲೇ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಭರ್ತಿ ಮಾಡಿ ನೋಂದಣಿ ಮಾಡಿ ಕೊಡುವುದಾಗಿ ‘ದಿಶಾ ಒನ್‌’ಎಂಬ ಹೆಸರಿನಲ್ಲಿ ಕೆಲವರು ನಗರದ ಮಹಿಳೆಯರಿಂದ .150 ಹಣ ಪಡೆಯುತ್ತಿದ್ದು, ಫಲಾನುಭವಿಗಳಿಗೆ ರಶೀದಿಯನ್ನೂ ನೀಡಿದ್ದಾರೆ. 

ಕೇಂದ್ರ ಸರ್ಕಾರದಿಂದ ಪ್ರತಿ ಗ್ರಾಪಂಗಳಿಗೆ ಶೇ.80 ಅನುದಾನ: ಸಂಸದ ಮುನಿಸ್ವಾಮಿ

ವಿವಿಧ ಯೋಜನೆ ಗಳಿಗೆ ನಾವೇ ಅರ್ಜಿಯನ್ನು ತುಂಬಿಕೊಡುತ್ತೇವೆ. ನಾವು ನೀಡಿದ ರಶೀದಿಯನ್ನು ತೋರಿಸಿದ ಬಳಿಕವಷ್ಟೆಅರ್ಜಿ ನೋಂದಣಿಯಾಗಲಿದೆ ಎಂದು ನಂಬಿಸಿದ್ದಾರೆ. ಈ ಬಗ್ಗೆ ಗುಮಾನಿಗೊಂಡ ಕೆಲವರು, ವಿಚಾರಣೆ ನಡೆಸಿದ ಬಳಿಕ ದಿಶಾ ಏಜೆನ್ಸಿ ಹೆಸರಿನಲ್ಲಿ ಕೆಲವರು ಮಹಿಳೆಯರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ವಂಚಕರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

click me!