ಕೋವಿಡ್‌ ಹಗರಣ ನಡೆದಿದ್ದರೆ ಬಿಎಸ್‌ವೈ ಎಂಬ ಮುಲಾಜು ತೋರಬೇಡಿ: ವಿಜಯೇಂದ್ರ ಹೇಳಿದ್ದೇನು?

Published : Dec 31, 2023, 04:00 AM IST
ಕೋವಿಡ್‌ ಹಗರಣ ನಡೆದಿದ್ದರೆ ಬಿಎಸ್‌ವೈ ಎಂಬ ಮುಲಾಜು ತೋರಬೇಡಿ: ವಿಜಯೇಂದ್ರ ಹೇಳಿದ್ದೇನು?

ಸಾರಾಂಶ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸರ್ಕಾರಾವಧಿಯಲ್ಲಿ 40 ಸಾವಿರ ಕೋಟಿ ರು. ಕೋವಿಡ್‌ ಹಗರಣ ನಡೆದಿದೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಆರೋಪ ಆಡಳಿತ ಮತ್ತು ಪ್ರತಿಪಕ್ಷ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿರುವ ನಡುವೆಯೇ, ಈ ಕುರಿತು ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. 

ವಿಜಯಪುರ (ಡಿ.31): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸರ್ಕಾರಾವಧಿಯಲ್ಲಿ 40 ಸಾವಿರ ಕೋಟಿ ರು. ಕೋವಿಡ್‌ ಹಗರಣ ನಡೆದಿದೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಆರೋಪ ಆಡಳಿತ ಮತ್ತು ಪ್ರತಿಪಕ್ಷ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿರುವ ನಡುವೆಯೇ, ಈ ಕುರಿತು ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಜತೆಗೆ, ಆರೋಪಕ್ಕೆ ಗುರಿಯಾಗಿರುವವರು ಯಡಿಯೂರಪ್ಪ ಅವರು ಎಂಬ ಮುಲಾಜೂ ನೋಡದೆ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಆರೋಪದಲ್ಲಿ ಗಂಭೀರತೆ ಇದ್ದರೆ ಮಾತ್ರ ಅದಕ್ಕೆ ಪ್ರತಿಕ್ರಿಯಿಸಬೇಕು. ಆದರೆ ಯಡಿಯೂರಪ್ಪ ಅವರ ಮೇಲೆ ಯತ್ನಾಳ ಮಾಡಿರುವ ಕೋವಿಡ್ ಹಗರಣದ ಆರೋಪ ಸತ್ಯಕ್ಕೆ ದೂರವಾದದ್ದು. ಇಂಥ ಹುಡುಗಾಟಿಕೆ ಆರೋಪಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಆರೋಪ ಮಾಡಿದವರು ಸೂಕ್ತ ದಾಖಲೆಗಳನ್ನೂ ಕೊಡಲಿ ಎಂದು ಯತ್ನಾಳ್‌ಗೆ ತಿರುಗೇಟು ನೀಡಿದರು.

ದೂರು ನೀಡಿಲ್ಲ-ವಿಜಯೇಂದ್ರ: ಇದೇ ವೇಳೆ ಯಡಿಯೂರಪ್ಪ ಮತ್ತು ಅವರ ಕುಟುಂಬದ ಮೇಲೆ ಪದೇ ಪದೆ ಬಹಿರಂಗ ಟೀಕೆ ಮಾಡುತ್ತಿರುವವರ ಮೇಲೆ ವರಿಷ್ಠರಿಗೆ ಯಾವುದೇ ದೂರು ನೀಡಿಲ್ಲ ಎಂದು ಯತ್ನಾಳ ಹೆಸರೆತ್ತದೆ ಇದೇ ವೇಳೆ ವಿಜಯೇಂದ್ರ ಸ್ಪಷ್ಟನೆ ನೀಡಿದರು. ''ನಾನಾಗಲಿ, ಪಕ್ಷದ ಮುಖಂಡರಾಗಲಿ ಕೇಂದ್ರಕ್ಕೆ ಹೋಗಿ ಯಾರ ಬಗ್ಗೆಯೂ ಚಾಡಿ ಹೇಳುವುದಾಗಲಿ, ದೂರು ನೀಡುವುದಾಗಲಿ ಮಾಡಿಲ್ಲ. ಶಿಸ್ತು ಕ್ರಮಕ್ಕೂ ಒತ್ತಾಯಿಸಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ. ಆದರೆ ಮುಂದೆ ಸಂದರ್ಭ ಹೇಗೆ ಸೃಷ್ಟಿಯಾಗುತ್ತದೆ ಅದರ ಮೇಲೆ ಕೇಂದ್ರ ವರಿಷ್ಠರು ಬಹಿರಂಗ ಹೇಳಿಕೆ ನೀಡುವವರ ಕುರಿತು ತಿರ್ಮಾನ ಮಾಡುತ್ತಾರೆ'' ಎಂದು ವಿಜಯೇಂದ್ರ ಹೇಳಿದರು.

ಯತ್ನಾಳ ತಮಗಾದ ಅನ್ಯಾಯದ ಬಗ್ಗೆ ಮಾತಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ವರಿಷ್ಠರ ಬಳಿ ಯಾರ ಬಗ್ಗೆಯೂ ಚಾಡಿ ಹೇಳಿಲ್ಲ: ನಾನು ದೆಹಲಿಗೆ ಹೋಗಿ ಯಾರ ಬಗ್ಗೆಯೂ ಚಾಡಿ ಹೇಳುವುದಾಗಲಿ, ದೂರು ನೀಡುವುದಾಗಲಿ ಮಾಡಿಲ್ಲ. ಶಿಸ್ತು ಕ್ರಮಕ್ಕೂ ಒತ್ತಾಯಿಸಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ. ಸಂದರ್ಭಾನುಸಾರ ಕೇಂದ್ರದ ವರಿಷ್ಠರೇ ಬಹಿರಂಗ ಹೇಳಿಕೆ ನೀಡುವವರ ಕುರಿತು ತೀರ್ಮಾನ ಮಾಡುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ