
ಬೆಳಗಾವಿ(ಏ.14): ರಾಜ್ಯದಲ್ಲಿ ಆದಷ್ಟು ಶೀಘ್ರ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಡಬಲ್ ಇಂಜಿನ್ ಸರ್ಕಾರ ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಶನಿವಾರ ನಡೆದ ಭೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗಳಿಗೆ ಯಾರೂ ಬಲಿಯಾಗಬೇಡಿ. ಗ್ಯಾರಂಟಿ ನಂಬಿ ಕೆಟ್ಟ ಸರ್ಕಾರವನ್ನು ತಂದಿದ್ದೀರಿ. ಚುನಾವಣೆ ನಂತರ ಕರೆಂಟ್ ಹೋಗುತ್ತದೆ, ಬಸ್ ನಿಲ್ಲುತ್ತದೆ. ಎರಡು ಸಾವಿರ ರು. ಬಂದ್ ಆಗುತ್ತದೆ ಎಂದು ವ್ಯಂಗ್ಯವಾಡಿದರು.
ನಾನು ಈ ಚುನಾವಣೆಯಲ್ಲಿ ಮಾತನಾಡುವುದಿಲ್ಲ ಎಂದು, ನನ್ನ ತಮ್ಮ ಬಾಲಚಂದ್ರನಿಗೆ ಮಾತು ಕೊಟ್ಟಿದ್ದೇನೆ. ಅದಕ್ಕೆ ಹೆಚ್ಚಿಗೆ ಮಾತಾಡುವುದಿಲ್ಲ. ಹೆದರಿ ಮಾತಾಡೋದನ್ನು ಬಿಟ್ಟಿಲ್ಲ. ಚುನಾವಣೆ ಫಲಿತಾಂಶದ ಬಳಿಕ ಎಲ್ಲವನ್ನೂ ಮಾತಾಡುತ್ತೇನೆ ಎಂದರು.
ಕಾಂಗ್ರೆಸ್‌ಗೆ ಪ್ರಧಾನಿ ಯಾರಂತ ಗೊತ್ತಿಲ್ಲ: ಜಗದೀಶ ಶೆಟ್ಟರ್
ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಇರುವುದರಿಂದ ಬೆಳಗಾವಿ ಪಶ್ಚಿಮ ಭಾಗದಲ್ಲಿ ನೀರಾವರಿ ಯೋಜನೆ ಮಾಡುವುದಿದೆ. ಬೆಳಗಾವಿ ಗ್ರಾಮೀಣ ಭಾಗದಲ್ಲಿ ಇಪ್ಪತ್ತೈದು ಸಾವಿರ ಲೀಡ್ ಆಗುತ್ತದೆ. ಶೆಟ್ಟರ್ ಅವರು ಎರಡರಿಂದ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ವ್ಯಂಗ್ಯವಾಡಿ, ನಾವು ನಮ್ಮ ನಾಯಕರು ಮೋದಿಯವರು ಅಂತಾ ಹೇಳುತ್ತೇವೆ. ಕಾಂಗ್ರೆಸ್‌ನವರಿಗೆ ಪ್ರಧಾನಿ ಯಾರು ಅಂತಾ ಗೊತ್ತಿಲ್ಲ. ಐಎನ್‌ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುತ್ತಿಲ್ಲ. ಕಾಂಗ್ರೆಸ್‌ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.
Lok Sabha Election 2024: ರಾಮನ ಬೀದಿಗೆ ತಂದ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ
ಕಾಂಗ್ರೆಸ್ ದಿನದಿಂದ ದಿನಕ್ಕೆ ಅವನತಿಯ ಹಾದಿ ಹಿಡಿಯುತ್ತಿದೆ ಎಂದು ಆರೋಪಿಸಿದ ಅವರು, ಜಮ್ಮು ಕಾಶ್ಮೀರದಲ್ಲಿ ಇನ್ನೊಂದು ಕಪ್ಪು ಚುಕ್ಕೆ ಇದೆ ಪಿಓಕೆ. 400 ಸೀಟ್ ಗೆದ್ದ ಬಳಿಕ ಪಾಕ್ ಆಕ್ರಮಿತ ಕಾಶ್ಮೀರವನ್ನು ಕೂಡ ವಾಪಸ್ ಪಡೆಯುತ್ತಾರೆ. ಇಡೀ ದೇಶದಲ್ಲಿರುವ ಎಲ್ಲಾ ನಾಯಕರಿಗೆ ಒಂದೇ ಕಾನೂನು ಮಾಡುತ್ತಾರೆ. ಈ ಕಾರಣಕ್ಕೆ ದೇಶಕ್ಕೆ ಇಂದು ನರೇಂದ್ರ ಮೋದಿಯವರು ಅವಶ್ಯ ಇದೆ. ಅವರೇ ಮೂರನೇ ಬಾರಿಗೆ ದೇಶದ ಪ್ರಧಾನಿ ಆಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವೆ ಹೆಬ್ಬಾಳ್ಕರ್ ಒಂದು ಎಕ್ಸ್‌ಸ್ಟ್ರಾ ಪೆಗ್ ಹೊಡಿಬೇಕು!
ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಮಾಜಿ ಶಾಸಕ ಸಂಜಯ ಪಾಟೀಲ ನಾಲಿಗೆ ಹರಿಬಿಟ್ಟಿದ್ದಾರೆ. ಇಂದು ರಾತ್ರಿ ಹೆಬ್ಬಾಳಕರ ಒಂದು ಎಕ್ಸ್‌ಸ್ಟ್ರಾ ಪೆಗ್ ಹೊಡೆಯಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು, ಸಮಾವೇಶದಲ್ಲಿ ಇಷ್ಟೊಂದು ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಸೇರಿಕೊಂಡಿರುುದನ್ನು ನೋಡಿದರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ಇಂದು ರಾತ್ರಿ ನಿದ್ದೆ ಮಾಡುವುದಿಲ್ಲ. ನಿದ್ದೆ ಮಾತ್ರೆ ತೆಗೆದುಕೊಂಡು ಮಲಬೇಕಾಗುತ್ತದೆ. ಸಮಾವೇಶಕ್ಕೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಂದಿರುವುದನ್ನು ನೋಡಿದರೆ ಅವರಿಗೆ ಕಷ್ಟ ಆಗುತ್ತದೆ. ಇಂದು ರಾತ್ರಿ ಹೆಬ್ಬಾಳಕರ ಒಂದು ಎಸ್ಟ್ರಾ ಪೆಗ್ ಹೊಡೆಯಬೇಕಾಗುತ್ತದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.