ಅಕ್ರಮ ಕಟ್ಟಡ, ಸೈಟಿಗೆ ದುಪ್ಪಟ್ಟು ಆಸ್ತಿ ತೆರಿಗೆ?: ಸಚಿವ ಈಶ್ವರ ಖಂಡ್ರೆ

By Kannadaprabha News  |  First Published Aug 26, 2023, 7:01 AM IST

ರಾಜ್ಯದ ಇತರೆ ಮಹಾನಗರ ಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ಕಟ್ಟಡ ಮತ್ತು ಅನಧಿಕೃತ ಕಂದಾಯ ನಿವೇಶನಗಳಿಂದ ದುಪ್ಪಟ್ಟು ಆಸ್ತಿ ತೆರಿಗೆ ಸಂಗ್ರಹಿಸುವ ಬಗ್ಗೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. 


ಬೆಂಗಳೂರು (ಆ.26): ರಾಜ್ಯದ ಇತರೆ ಮಹಾನಗರ ಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ಕಟ್ಟಡ ಮತ್ತು ಅನಧಿಕೃತ ಕಂದಾಯ ನಿವೇಶನಗಳಿಂದ ದುಪ್ಪಟ್ಟು ಆಸ್ತಿ ತೆರಿಗೆ ಸಂಗ್ರಹಿಸುವ ಬಗ್ಗೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಈಶ್ವರ ಖಂಡ್ರೆ ಅಧ್ಯಕ್ಷತೆಯ ಉಪ ಸಮಿತಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬಿ.ಎಸ್‌. ಸುರೇಶ್‌, ಪೌರಾಡಳಿತ ಇಲಾಖೆ ಸಚಿವ ರಹೀಂ ಖಾನ್‌ ಸದಸ್ಯರಾಗಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಕಲಂ 144 (6) ಮತ್ತು (21)ರ ಅಂಶವನ್ನು ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ-1976 ಹಾಗೂ ಕರ್ನಾಟಕ ಪುರಸಭೆಗಳ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಈ ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ. ಬಿಬಿಎಂಪಿ ಕಾಯ್ದೆ-2020ರ 144(6) ನಿಯಮದ ಅಡಿ ಅನಧಿಕೃತ ಕಟ್ಟಡಗಳಿಗೂ ತೆರಿಗೆ ವಿಧಿಸಬಹುದು. ಇದಕ್ಕೆ ಪ್ರತ್ಯೇಕ ಖಾತಾ ನಿರ್ವಹಣೆ ಮಾಡಿ ದುಪ್ಪಟ್ಟು ಆಸ್ತಿ ತೆರಿಗೆ ವಿಧಿಸಲಾಗುವುದು. 

Tap to resize

Latest Videos

ಬರ ವಿಚಾರದಲ್ಲಿ ಬೊಮ್ಮಾಯಿ ರಾಜಕೀಯ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

ಸರ್ಕಾರವು ಆಸ್ತಿ ತೆರಿಗೆ ಸಂಗ್ರಹ ಮಾಡುವುದರಿಂದ ಆ ಅನಧಿಕೃತ ಕಟ್ಟಡ ಅಥವಾ ನಿವೇಶನ ಕಾನೂನು ಬದ್ಧವಾಗುವುದಿಲ್ಲ. ಬದಲಿಗೆ ಯಾವುದೇ ವೇಳೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ ಎಂಬ ಅಂಶವನ್ನು ಈ ಕಾಯಿದೆ ಹೊಂದಿದೆ. ಅನಧಿಕೃತ ಕಟ್ಟಡ, ಕಟ್ಟಡ ನಕ್ಷೆ ಉಲ್ಲಂಘಿಸಿ ಕಟ್ಟಿರುವ ಕಟ್ಟಡ, ಅನಧಿಕೃತ ಕಂದಾಯ ಬಡಾವಣೆ, ಸ್ವಾಧೀನಾನುಭವ ಪತ್ರ ಪಡೆಯದೆ ವಾಸಿಸುತ್ತಿರುವ ಕಟ್ಟಡಗಳಿಂದ ಆಸ್ತಿ ತೆರಿಗೆ ಸಂಗ್ರಹಿಸಬಹುದು. ಆದರೆ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಿರುವ ಕಟ್ಟಡಗಳಿಂದ ತೆರಿಗೆ ಸಂಗ್ರಹ ಮಾಡುವಂತಿಲ್ಲ ಎಂದು ಬಿಬಿಎಂಪಿ ಕಾಯ್ದೆಯಲ್ಲಿದೆ.

click me!