ರಾಜ್ಯದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಗೃಹ ಸಚಿವ ಪರಮೇಶ್ವರ್

Published : Oct 03, 2025, 07:59 AM IST
Dr G Parameshwar

ಸಾರಾಂಶ

ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆಂದು ಹೇಳಿದವರು ಯಾರು? ರಾಜ್ಯದಲ್ಲಿ ಯಾವುದೇ ಕ್ರಾಂತಿ ಇಲ್ಲ. ಎಲ್ಲವೂ ಶಾಂತಿ. ಹೈಕಮಾಂಡ್ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರು (ಅ.03): ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆಂದು ಹೇಳಿದವರು ಯಾರು? ರಾಜ್ಯದಲ್ಲಿ ಯಾವುದೇ ಕ್ರಾಂತಿ ಇಲ್ಲ. ಎಲ್ಲವೂ ಶಾಂತಿ. ಹೈಕಮಾಂಡ್ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. 5 ವರ್ಷವೂ ಅವರೇ ಸಿಎಂ ಆಗಿ ಇರುತ್ತಾರೆಂದು ಅಂದುಕೊಂಡಿದ್ದೇವೆ. ಅವರು ಕೂಡ ಅದನ್ನೇ ಹೇಳಿದ್ದಾರೆ. ಇಷ್ಟೆಲ್ಲಾ ಹೇಳಿಯೂ ನಮ್ಮಲ್ಲಿ ಹೈಕಮಾಂಡ್ ಇದೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದ್ದು, ಸ್ವಲ್ಪ ಉಸಿರಾಟ ತೊಂದರೆ ಇದೆ. ನಾನು ರಾಮಯ್ಯ ಆಸ್ಪತ್ರೆಗೆ ಹೋಗಿ ನೋಡಿ ಬಂದೆ ಎಂದರು. ಅವರಿಗೆ ಪೇಸ್ ಮೇಕರ್ ಹಾಕಿದ್ದಾರೆ. 10-15 ನಿಮಿಷ ಅವರ ಜೊತೆ ಮಾತನಾಡಿಕೊಂಡು ಬಂದೆ. ಅವರು ಆರೋಗ್ಯವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದರು. ಹಿಂದೂಗಳು ಆತ್ಮ ರಕ್ಷಣೆಗೆ ಆಯುಧಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಹೇಳಿಕೆ ನನ್ನ ದೃಷ್ಟಿಯಲ್ಲಿ ಬಹಳ ದೊಡ್ಡ ತಪ್ಪು. ಆ ರೀತಿಯ ಪ್ರಚೋದನಕಾರಿ ಹೇಳಿಕೆ ಯಾರೂ ಕೊಡಬಾರದು. ಅದಕ್ಕಾಗಿ ಕಾನೂನುಗಳಿವೆ.‌‌‌‌‌‌ ಇಲ್ಲಿ ಆತ್ಮ ರಕ್ಷಣೆ ಪ್ರಶ್ನೆಗಳು ಬರೋದಿಲ್ಲ ಎಂದರು.

ಸೂರ್ಯ ಚಂದ್ರರಿರುವರೆಗೂ ಗಾಂಧೀಜಿ, ಶಾಸ್ತ್ರೀಜಿ ಶಾಶ್ವತ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ ಎಂದು ತಿಳಿಸಿದರು. ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಸರಳ ಜೀವನ, ಅಹಿಂಸೆ, ಸತ್ಯ, ಶಾಂತಿ, ತತ್ವಾದರ್ಶಗಳು ಸೂರ್ಯ- ಚಂದ್ರ ಇರುವವರೆಗೂ ಪ್ರಸ್ತುತವಾಗಿರುತ್ತವೆ. ಈ ಮಹನೀಯರ ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು. ಗಾಂಧೀಜಿಯವರಲ್ಲಿದ್ದ ನಡೆ- ನುಡಿ, ಬದ್ಧತೆ, ದೂರದೃಷ್ಟಿ ಗುಣಗಳು ಪ್ರಪಂಚದ ಯಾವುದೇ ದೇಶದ ನಾಯಕರಿಗೆ ಹೋಲಿಸಲು ಸಾಧ್ಯವಿಲ್ಲ. ಅವರ ಹುಟ್ಟು, ವಿದ್ಯಾಭ್ಯಾಸ, ದೇಶದ ಸ್ವಾತಂತ್ರ್ಯ್ಯಕ್ಕಾಗಿ ನಡೆಸಿದ ಹೋರಾಟಗಳ ಕುರಿತು ಪುಸ್ತಕಗಳಿಂದ ತಿಳಿದುಕೊಂಡಿದ್ದೇವೆ.

ಸುಮಾರು 2500 ವರ್ಷಗಳ ಹಿಂದೆ ಭಗವಾನ್ ಬುದ್ಧನು ಸತ್ಯಾನ್ವೇಷಣೆಗಾಗಿ ತನ್ನ ಚಕ್ರವರ್ತಿ ಸ್ಥಾನವನ್ನೇ ತ್ಯಾಗ ಮಾಡಿದಂತೆ ಗಾಂಧೀಜಿಯವರೂ ಸಹ ಸತ್ಯ, ಅಹಿಂಸೆ, ಶಾಂತಿ, ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದು ಹೇಳಿದರು. ಸತ್ಯದ ಮಾರ್ಗ ಪ್ರತಿಯೊಬ್ಬರ ಸಂಗಾತಿಯಾಗಬೇಕು. ಇತ್ತೀಚೆಗೆ ಸಮಾಜದಲ್ಲಿ ಸತ್ಯವನ್ನು ದುರ್ಬಲಗೊಳಿಸಲಾಗುತ್ತಿರುವುದು ವಿಪರ್ಯಾಸ. ಸತ್ಯದ ಮೇಲೆ ಸಮಾಜ ನಿಂತಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರಲ್ಲದೆ, ಯಾರ ಮನಸ್ಸಿಗೂ ನೋವುಂಟು ಮಾಡಬಾರದೆಂಬ ಅವರ ಅಹಿಂಸಾ ಮಾರ್ಗವನ್ನು ಸಂಯುಕ್ತ ರಾಷ್ಟ್ರಗಳು ಒಪ್ಪಿಕೊಂಡು ಗಾಂಧಿ ಜಯಂತಿ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸುತ್ತಿದ್ದು, ಗಾಂಧೀಜಿ ನಮ್ಮವರು ಎನ್ನಲು ಹೆಮ್ಮೆಯಾಗುತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!