ಸಿದ್ದರಾಮಯ್ಯಗೆ ಬೆಂಬಲಿಸದಿದ್ರೆ ಮೂರ್ಖರಾಗ್ತೀವಿ: ಗೃಹ ಸಚಿವ ಪರಮೇಶ್ವರ್

Published : Jul 28, 2025, 08:07 AM ISTUpdated : Jul 29, 2025, 06:19 PM IST
Parameshwar

ಸಾರಾಂಶ

ಸಾಮಾಜಿಕವಾಗಿ ನೊಂದ, ಆರ್ಥಿಕ ಶಕ್ತಿ, ಧ್ವನಿ ಇಲ್ಲದ ಕೆಳಸ್ಥರದ, ಶೋಷಿತ ಸಮುದಾಯಗಳು ಬದಲಾವಣೆ ಕಾಣಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಿಸದಿದ್ದರೆ ನಾವೇ ಮೂರ್ಖರಾಗುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ದಾವಣಗೆರೆ (ಜು.28): ಸಾಮಾಜಿಕವಾಗಿ ನೊಂದ, ಆರ್ಥಿಕ ಶಕ್ತಿ, ಧ್ವನಿ ಇಲ್ಲದ ಕೆಳಸ್ಥರದ, ಶೋಷಿತ ಸಮುದಾಯಗಳು ಬದಲಾವಣೆ ಕಾಣಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಿಸದಿದ್ದರೆ ನಾವೇ ಮೂರ್ಖರಾಗುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ನಗರದ ಬಿಐಇಟಿ ಕಾಲೇಜಿನ ಎಸ್‌.ಎಸ್‌. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾ ಛಲವಾದಿ ಮಹಾಸಭಾದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಮೊನ್ನೆ ನಡೆದ ಎಐಸಿಸಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಂಡಾಡಿದ್ದು, ಒಬ್ಬ ವ್ಯಕ್ತಿಯನ್ನು ಯಾವ ಕಾರಣಕ್ಕೆ ಅಷ್ಟೊಂದು ಕೊಂಡಾಡಿರಬಹುದೆಂಬ ಪ್ರಶ್ನೆ ಮೂಡುತ್ತದೆ ಎಂದರು.

ಮೆಹರ್‌ಗಳ ಶೌರ್ಯ ನೆನಪಿಸಿಕೊಳ್ಳಿ: ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಮೀಸಲಾತಿ ಕೊಡದೇ ಇದ್ದಿದ್ದರೆ ನಾವು ಹೇಗೆ ಇರುತ್ತಿದ್ದೆವೋ ಗೊತ್ತಿಲ್ಲ. ಆದರೆ, ಸಂವಿಧಾನ ರಕ್ಷಣೆ ಮಾಡಲು ನಾವಿದ್ದೇವೆ. ಸಹಸ್ರಾರು ಪೇಶ್ವೆಗಳನ್ನು ಕೇವಲ 100 ಜನ ಮೆಹರ್‌ಗಳು ಮುಗಿಸಿದ ಶೌರ್ಯದ ದಿನಗಳಲ್ಲಿ ನೆನಪು ಮಾಡಿಕೊಳ್ಳಿ. ನಾವು ಯಾರಿಗೂ ಕಡಿಮೆ ಇಲ್ಲವೆಂಬ ಮನೋಭಾವ ಮೈಗೂಡಿಸಿಕೊಳ್ಳಿ. ಜಾತಿ ಸಂಘರ್ಷ ಇಡೀ ವಿಶ್ವವನ್ನೇ ಆವರಿಸಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತೋಟದ ಮನೆಯೊಂದರಲ್ಲಿ ಎಡ-ಬಲ ನಾವಿಬ್ಬರೂ ಒಂದೇ ಅಂತಾ ಘೋಷಣೆ ಮಾಡಿದ್ದೇವೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಾವು ಹೇಳಿದ್ದಂತೆ ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತೇವೆ. ಆದಷ್ಟು ಬೇಗನೆ ಒಳ ಮೀಸಲಾತಿ ಜಾರಿಗೊಳಿಸುತ್ತೇವೆ ಎಂದರು.

ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮಾತನಾಡಿ, ವಿದ್ಯೆಯಿಂದಲೇ ಎಲ್ಲಾ ಸವಾಲು, ಸಂಕಷ್ಟಗಳನ್ನು ಮೆಟ್ಟಿ ನಿಂತವರು ಅಂಬೇಡ್ಕರ್. ದೇಶದಲ್ಲಿ ಅಂಬೇಡ್ಕರ್, ಪೆರಿಯಾರ್‌, ನಾರಾಯಣ ಗುರುಗಳು ತುಳಿತಕ್ಕೊಳಗಾದ ಜನರೇ ಇತಿಹಾಸ ನಿರ್ಮಿಸಿದ್ದಾರೆ. ಜೀವನದ ಮೌಲ್ಯ ಗೊತ್ತಿರುವುದೇ ಇಂತಹ ಸಮುದಾಯಕ್ಕೆ. ತಂತ್ರಜ್ಞಾನ ಬೆಳವಣಿಗೆ ಹೊಂದುಂತ್ತಿರುವ ಇಂದಿನ ದಿನಗಳಲ್ಲಿ ಶಿಕ್ಷಣದಿಂದ ಮಾತ್ರ ಅಧಿಕಾರಕ್ಕೆ ಬರಲು ಸಾಧ್ಯ. ಹಾಗಾಗಿ, ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಅಧಿಕಾರದ ನಿರ್ಣಾಯಕ ಸ್ಥಾನದಲ್ಲಿ ನಮ್ಮ ಮಕ್ಕಳು ಕುಳಿತುಕೊಳ್ಳುವಂತಹ ಅವಕಾಶ ಪಡೆಯಬೇಕು ಎಂದು ತಿಳಿಸಿದರು.

ಮೈಸೂರಿನ ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಛಲವಾದಿ ಮಹಾಸಭಾ ಅಧ್ಯಕ್ಷ ಎನ್.ರುದ್ರಮುನಿ ಅಧ್ಯಕ್ಷತೆ ವಹಿಸಿದ್ದರು. ಸಮಾಜದ 82 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಫ್.ಎಚ್. ಜಕ್ಕಪ್ಪ, ಬಿ.ಎಸ್. ವಿಜಯಕುಮಾರ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಸಮಾಜದ ಮುಖಂಡರಾದ ಎಚ್.ಬಿ. ಜಯಪ್ರಕಾಶ, ರಾಣೇಬೆನ್ನೂರು ಸಿಪಿಐ ಡಾ. ಎಸ್.ಕೆ. ಶಂಕರ, ಎಸ್.ಶೇಖರಪ್ಪ, ಕಾಂಗ್ರೆಸ್ ಮುಖಂಡ ಡಿ.ಬಸವರಾಜ್ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!