ದೇವೇಗೌಡ, ಕುಮಾರಸ್ವಾಮಿ ಜತೆ ಸುಧಾಕರ್ ಲೋಕಸಭೆ ಚರ್ಚೆ

By Kannadaprabha NewsFirst Published Jan 16, 2024, 6:40 AM IST
Highlights

ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ ಎನ್ನಲಾಗಿದೆ. ಟಿಕೆಟ್ ನೀಡುವ ವಿಚಾರ ಬಿಜೆಪಿ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಜೆಡಿಎಸ್ ಕೆಲಸ ಮಾಡಲಿದೆ ಎಂಬ ಮನವರಿಕೆಯನ್ನು ದೇವೇಗೌಡ ಮಾಡಿ ಕೊಟ್ಟಿದ್ದಾರೆಂದು ಮೂಲಗಳು ಹೇಳಿವೆ.

ಬೆಂಗಳೂರು(ಜ.16):  ವಿಧಾನಸಭಾ ಚುನಾವಣೆಯಲ್ಲಿ ಸೋಲ ನುಭವಿಸಿದ ಬಳಿಕ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ಳದ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಇದೀಗ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ವನ್ನುಂಟು ಮಾಡಿದೆ.

ಸೋಮವಾರ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಸುಧಾಕ‌ರ್ ಅವರು ದೇವೇಗೌಡ ಅವರನ್ನು ಭೇಟಿ ಮಾಡಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ನಾಡಿನ ರೈತರು, ಕೃಷಿ ಕಾರ್ಮಿಕರ ಬಗ್ಗೆ ಈ ಇಳಿವಯಸ್ಸಿನಲ್ಲಿಯೂ ದೇವೇಗೌಡ ಅವರಿಗೆ ಇರುವ ಕಳಕಳಿ ಅನುಕರಣೀಯ ಎಂದು ಬಣ್ಣಿಸಿದರು. ಈ ವೇಳೆ ಲೋಕಸಭೆ ಚುನಾವಣೆ ಕುರಿತು ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.

Latest Videos

ಮೇಕೆದಾಟು ಯೋಜನೆ: ತಮಿಳ್ನಾಡು ಕ್ಯಾತೆಗೆ ಮಾಜಿ ಪ್ರಧಾನಿ ದೇವೇಗೌಡ ಕಿಡಿ

ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ ಎನ್ನಲಾಗಿದೆ. ಟಿಕೆಟ್ ನೀಡುವ ವಿಚಾರ ಬಿಜೆಪಿ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಜೆಡಿಎಸ್ ಕೆಲಸ ಮಾಡಲಿದೆ ಎಂಬ ಮನವರಿಕೆಯನ್ನು ದೇವೇಗೌಡ ಮಾಡಿ ಕೊಟ್ಟಿದ್ದಾರೆಂದು ಮೂಲಗಳು ಹೇಳಿವೆ.

ಎಚ್‌ಡಿಕೆ ಜತೆ ಚರ್ಚೆ: 

ದೇವೇಗೌಡರನ್ನು ಭೇಟಿ ಮಾಡುವ ಮುನ್ನ ಸುಧಾಕರ್ ಬಿಡದಿಗೆ ತೆರಳಿ ಮಾಜಿಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

click me!