ಸುಳ್ಳು, ಕುಟಿಲತನ, ಸಹಾಯ ಮಾಡಿದವರ ಬೆನ್ನಿಗೆ ಚೂರಿ ಹಾಕುವುದು ಸಿದ್ದರಾಮಯ್ಯರ ಮೂರು ಗುಣಗಳು, ಇವತ್ತು ಅವರು ಅವರನ್ನು ಬೆಂಬಲಿಸಿದ ರಾಜ್ಯದ ಜನತೆಗೆ ದ್ರೋಹ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಅವರದು ಸಂಸ್ಕಾರವಿಲ್ಲದ ನಾಲಿಗೆ ಮತ್ತು ವ್ಯಕ್ತಿತ್ವ: ಡಾ. ಶರಣಭೂಪಾಲರೆಡ್ಡಿ ನಾಯ್ಕಲ್
ಯಾದಗಿರಿ(ಜ.07): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನಾಯಿ ಕುರಿತ ಟೀಕೆ ಆಕ್ಷೇಪಾರ್ಹ, ಇದು ಅಸಂಸದೀಪ ಪದದ ಬಳಕೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಶರಣಭೂಪಾಲರೆಡ್ಡಿ ನಾಯ್ಕಲ್ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಎಂದು ಟೀಕಿಸಿರುವುದನ್ನು ಬಿಜೆಪಿ ಯಾದಗಿರಿ ಜಿಲ್ಲಾ ಘಟಕ ಖಂಡಿಸುತ್ತದೆ ಎಂದರು.
undefined
ಬಿಜೆಪಿಗೆ ನಾಯಿ ಪದದ ಬಗ್ಗೆ ಗೌರವವಿದೆ. ನಾಯಿ ಅತ್ಯಂತ ನಂಬಿಗಸ್ಥ ಪ್ರಾಣಿ. ಬಿಜೆಪಿಗೆ ಇದು ಅನ್ವರ್ಥ, ಬಿಜೆಪಿ ಕೂಡ ಯಾವತ್ತೂ ದೇಶನಿಷ್ಠೆ, ಸಮಾಜ ನಿಷ್ಠೆ ಉಳ್ಳದ್ದಾ ಗಿದ್ದು, ನಾವು ಒಂದು ರೀತಿ ಸಮಾಜ ಕಾಯುವ ನಾಯಿಗಳಾಗಿದ್ದೇವೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ. ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿಯರಿಂದ ವಿಧಾನಸೌಧ ವರ್ಲ್ಡ್ ಬಿಗ್ಗೆಸ್ಟ್ ಶಾಪಿಂಗ್ ಮಾಲ್ ಆಗಿದೆ: ಪ್ರಿಯಾಂಕ್ ಖರ್ಗೆ
ಪರಸ್ಪರ ಒಬ್ಬರನ್ನೊಬ್ಬರು ಗೌರವಿಸಬೇಕು ಎಂದ ಅವರು, ಈ ಹಿಂದೆ ದೇಶದಲ್ಲಿ ಪ್ರಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಬಿಜೆಪಿ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ಇಂದಿರಾ ಗಾಂಧಿಯವರಿಗೆ ಪತ್ರ ಬರೆದು ‘ಇಂದಿರಾಜಿ’ ಎಂದು ಸಂಬೋಧಿಸಿದ್ದರು. ಇದು ಅವರ ಮೌಲ್ಯಯುತ ಭಾಷೆಯ ಬಳಕೆಗೆ ನಿದರ್ಶನವಾಗಿದೆ.
ಸುಳ್ಳು, ಕುಟಿಲತನ, ಸಹಾಯ ಮಾಡಿದವರ ಬೆನ್ನಿಗೆ ಚೂರಿ ಹಾಕುವುದು ಸಿದ್ದರಾಮಯ್ಯರ ಮೂರು ಗುಣಗಳು, ಇವತ್ತು ಅವರು ಅವರನ್ನು ಬೆಂಬಲಿಸಿದ ರಾಜ್ಯದ ಜನತೆಗೆ ದ್ರೋಹ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಅವರದು ಸಂಸ್ಕಾರವಿಲ್ಲದ ನಾಲಿಗೆ ಮತ್ತು ವ್ಯಕ್ತಿತ್ವ. ಅವರ ಗುಣಧರ್ಮದಲ್ಲಿ ಹಾಸು ಹೊಕ್ಕಾಗಿದೆ. ಅವರು ಹಿಂದೂ ಧರ್ಮ ಒಡೆದು ವೀರಶೈವ ಧರ್ಮ ಸ್ಥಾಪಿಸಲು ಮುಂದಾಗಿದ್ದರು. ಪ್ರಧಾನಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು, ಅವರು ಸಂಸ್ಕಾರ ಹೀನ ಮನುಷ್ಯ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಮಂಜುನಾಥ ಜಡಿ, ಷಣ್ಮುಖಪ್ಪ ಸಾಹು ಇದ್ದರು.