ಕೇಂದ್ರ ಸರ್ಕಾರದಿಂದ ಶೀಘ್ರ ಬರ ಪರಿಹಾರ ಹಣ ಬರಲಿದೆ: ಸಚಿವ ಚಲುವರಾಯಸ್ವಾಮಿ

By Kannadaprabha NewsFirst Published Dec 23, 2023, 7:43 AM IST
Highlights

ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾರಿಗೆ ಮನವರಿಕೆ ಮಾಡಿದ್ದೇವೆ. ಕೇಂದ್ರದಿಂದ ಆದಷ್ಟು ಬೇಗ ಬರ ಪರಿಹಾರ ಹಣ ಬರಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಶ್ರೀರಂಗಪಟ್ಟಣ (ಡಿ.23): ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾರಿಗೆ ಮನವರಿಕೆ ಮಾಡಿದ್ದೇವೆ. ಕೇಂದ್ರದಿಂದ ಆದಷ್ಟು ಬೇಗ ಬರ ಪರಿಹಾರ ಹಣ ಬರಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಸಚಿವರು ಪ್ರಧಾನಿ ಸೇರಿದಂತೆ ಕೇಂದ್ರದ ಗೃಹ ಸಚಿವರು, ಸಂಬಂಧಪಟ್ಟ ಇಲಾಖೆ ಸಚಿವರಿಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿದ್ದೇವೆ. ಸಮಿತಿ ಮುಖ್ಯಸ್ಥರಾಗಿರುವ ಅಮಿತ್ ಶಾ ನಮ್ಮ ಮನವಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಬರ ಪರಿಹಾರದ ಹಣ ಬಿಡುಗಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಿಂದ ಹಣ ಬಿಡುಗಡೆ ವಿಳಂಬವಾಗಿದ್ದರಿಂದ ರಾಜ್ಯ ಸರ್ಕಾರ ರಾಜ್ಯದ ರೈತರ ಪ್ರತಿ ಹೆಕ್ಟೇರ್‌ಗೆ 2 ಸಾವಿರ ಬರ ಪರಿಹಾರ ನೀಡಲು ಘೋಷಣೆ ಮಾಡಲಾಯಿತು. ಉಳಿದಂತೆ ಕೇಂದ್ರದಿಂದ ಹಣ ಬಂದ ಕೂಡಲೇ ರೈತರ ಅಕೌಂಟ್ ಗೆ ತಲುಪಲಿದೆ ಎಂದರು. ರೈತರು ಯಾವ ವಿಚಾರವಾಗಿ ಧರಣಿ ಮುಂದುವರೆಸಿದ್ದಾರೋ ಗೊತ್ತಿಲ್ಲ. ಕಾವೇರಿ ಚಳವಳಿ ಸ್ಥಳಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ನಾನು, ಜಿಲ್ಲಾ ಮಟ್ಟದ ಅಧಿಕಾರಿಗಳು ರೈತರ ಮನವಿ ಆಲಿಸಿ ಚಳವಳಿ ಕೈ ಬಿಡುವಂತೆ ಮನವಿ ಮಾಡಿದ್ದೇವೆ. ಆದರೂ ಧರಣಿ ಮುಂದುವರೆಸಿದ್ದಾರೆ ಎಂದರು.

Latest Videos

ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿ?: ಸಚಿವ ಸಂತೋಷ್‌ ಲಾಡ್‌

ಎರಡು ತಿಂಗಳಿಂದ ತಮಿಳುನಾಡಿಗೆ ನೀರು ಬಿಡುತ್ತಿಲ್ಲ. ಅಣೆಕಟ್ಟೆಯಲ್ಲಿ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡುಲು ಹೇಗೆ ಸಾಧ್ಯ. ಎರಡು ತಿಂಗಳಿಂದ ತಮಿಳುನಾಡಿಗೆ ಒಂದು ಹನಿ ನೀರು ಬಿಟ್ಟಿಲ್ಲ. ಧರಣಿ ಕೈ ಬಿಡುವಂತೆ , ನಮ್ಮ ಜೊತೆ ಚರ್ಚೆ ನಡೆಸುವಂತೆ ಕೋರಿದ್ದೇವೆ. ಹೋರಾಟಗಾರರು ಮಾತ್ರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯ ಎಲ್ಲೆಡೆ ಭತ್ತ ಕಟಾವು ನಡೆಯುತ್ತಿದೆ. ದಲ್ಲಾಳಿಗಳು ರೈತರ ಜಮೀನಿನಲ್ಲೇ ಭತ್ತ ಖರೀದಿಸುತ್ತಿದ್ದಾರೆ. ರೈತರಿಗೆ ಲಾಭವಾದರೆ ನಮ್ಮ ಅಭ್ಯಂತರವಿಲ್ಲ. ಈಗಾಗಲೇ ಜಿಲ್ಲೆಯಲ್ಲಿ 13 ಕಡೆ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. ಬಯೋಮೆಟ್ರಿಕ್ ನಲ್ಲಿ ತಾಂತ್ರಿಕ ಸಮಸ್ಯೆಯಿಂದ ಕೆಲವೆಡೆ ವಿಳಂಬವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

click me!