
ಬೆಂಗಳೂರು, (ಸೆ.12) : ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
"
ಕುಮಾರಸ್ವಾಮಿ ಸಹಿತ ಕೊಲಂಬೋಗೆ ಹೋಗಿದ್ದೆ ಎಂದು ಮಾಜಿ ಶಿಷ್ಯ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಎಚ್‌ಡಿಕೆ ಸರಣಿ ಟ್ವಿಟ್ ಮಾಡಿ ಅಂದು ಶ್ರೀಲಂಕಾಗೆ ಹೋಗಿರುವ ಬಗ್ಗೆ ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ. ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದಿದ್ದಾರೆ.
ಕೊನೆಗೂ ಕೊಲಂಬೋ ಭೇಟಿ ಒಪ್ಪಿಕೊಂಡ ಕಾಂಗ್ರೆಸ್ ಶಾಸಕ ಜಮೀರ್...!
2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆಗೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂಬುದಾಗಿ ತಿಳಿಸಿದ್ದಾರೆ.
2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ.
ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.
ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ, ನೀಚ ಬುದ್ಧಿಯ ಬಿಡು ನಾಲಿಗೆ, ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ, ಚಾಚಿ ಕೊಂಡಿರುವಂತ ನಾಲಿಗೆ, ಸತತವು ನುಡಿ ಕಂಡ್ಯ ನಾಲಿಗೆ, ಚಾಡಿ ಹೇಳಲು ಬೇಡ ನಾಲಿಗೆ, ಪುರಂದರ ದಾಸರು ಎಂಬುದಾಗಿ ಉದ್ಗರಿಸಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.