'ಈ ಫೋಟೋ ಏನನ್ನು ಹೇಳುತ್ತೆ? ಜನ್ಮಜನ್ಮಾಂತರದ ಸಂಬಂಧ ಅನ್ನುತ್ತೆ'

Published : Sep 14, 2020, 03:30 PM ISTUpdated : Sep 14, 2020, 03:35 PM IST
'ಈ ಫೋಟೋ ಏನನ್ನು ಹೇಳುತ್ತೆ? ಜನ್ಮಜನ್ಮಾಂತರದ ಸಂಬಂಧ ಅನ್ನುತ್ತೆ'

ಸಾರಾಂಶ

 ಡ್ರಗ್ಸ್​ ಕೇಸ್​ನಲ್ಲಿ ತಲೆಮರೆಸಿಕೊಂಡಿರುವ ಶೇಖ್​ ಫಾಝಿಲ್​ ಜತೆಗೆ ಶಾಸಕ ಜಮೀರ್​ ಅಹ್ಮದ್​ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಇರುವ ಫೋಟೋ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಪಕ್ಷದ ನಾಯಕರು ಹಿಗ್ಗಾಮುಗ್ಗಾ ಜಾಡಿಸುತ್ತಿದ್ದಾರೆ.  

ಬೆಂಗಳೂರು, (ಸೆ.14): ಡ್ರಗ್ಸ್​ ಕೇಸ್​ನಲ್ಲಿ ತಲೆಮರೆಸಿಕೊಂಡಿರುವ ಶೇಖ್ ಶಾಸಕ ಜಮೀರ್​ ಅಹ್ಮದ್​ ಖಾನ್ ಆಪ್ತ ಡ್ರಗ್ಸ್ ಪೆಡ್ಲರ್ ಶೇಖ್​ ಫಾಝಿಲ್. ಈತನ ಜತೆಗೆ ಜಮೀರ್​ ಮತ್ತು ಸಿದ್ದರಾಮಯ್ಯ ಒಟ್ಟಾಗಿ ಕಾಣಿಸಿಕೊಂಡಿರುವ ಫೋಟೋವನ್ನು ಸಚಿವ ಸಿ.ಟಿ.ರವಿ ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು.

ಬಳಿಕ ಮಾತನಾಡಿದ ಸಿಟಿ ರವಿ, ಈ ಫೋಟೋ ಏನನ್ನು ಹೇಳುತ್ತೆ?' ಎಂದು ಪ್ರಶ್ನಿಸಿದರು. ಅಲ್ಲದೆ 'ಈ ಫೋಟೋ ಜನ್ಮಜನ್ಮಾಂತರದ ಸಂಬಂಧ ಎನ್ನುತ್ತಿದೆ ಎಂದು ಕಿಚಾಯಿಸಿದರು.

ಜಮೀರ್ ಆಪ್ತನ ಐಷಾರಾಮಿ ಜೀವನಕ್ಕೆ ಸಿಸಿಬಿಯೆ 'ಶೇಖ್'; ಜಮೀರ್‌ಗೂ ನಡುಕ ಶುರು! 

'ಈ ಫೋಟೋದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಇದ್ದಾರೆ. ಇದು ಬಹಳ ಆತ್ಮೀಯ ಸಂಬಂಧ ಎಂದು ಈ ಮುಖಭಾವ ಹೇಳುತ್ತೆ. ಇದು ಯಾವುದೋ ಕುಟುಂಬದ ಕಾರ್ಯಕ್ರಮ. ಇದು ಅಪರಿಚಿತರ ಜತೆ ತೆಗೆಸಿಕೊಂಡ ಫೋಟೋ ಅಂತೂ ಅಲ್ಲ' ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.

'ಅಲ್ಪಸಂಖ್ಯಾತರ ಗುರಾಣಿ ಹಿಡಿದು ತಪ್ಪಿಸಿಕೊಳ್ಳೋದು ಬೇಡ. ಷಡ್ಯಂತ್ರದ ಗುರಾಣಿ ಹಿಡಿಯೋದೂ ಬೇಡ. ಕಳ್ಳನ ಹೆಂಡತಿ ಯಾವತ್ತಿದ್ದರೂ ಒಂದು ದಿನ… (ಡ್ಯಾಷ್) ಆಗಲೇಬೇಕು' ಎಂದು ಜಮೀರ್ ವಿರುದ್ಧ ಸಿ.ಟಿ. ರವಿ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರಲ್ಲೇ ಮಾತನಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯ ಹಿಂದಿನ ರಹಸ್ಯವೇನು?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ