ಗ್ರಾಮ ಪಂಚಾಯತಿ ಚುನಾವಣೆ: ಕಂದಾಯ ಇಲಾಖೆಗೆ ಚುನಾವಣಾ ಆಯೋಗ ಮಹತ್ವದ ಸೂಚನೆ

Published : Sep 15, 2020, 05:21 PM ISTUpdated : Sep 15, 2020, 05:25 PM IST
ಗ್ರಾಮ ಪಂಚಾಯತಿ ಚುನಾವಣೆ: ಕಂದಾಯ ಇಲಾಖೆಗೆ ಚುನಾವಣಾ ಆಯೋಗ ಮಹತ್ವದ ಸೂಚನೆ

ಸಾರಾಂಶ

ಕರ್ನಾಟಕದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಿದೆ. ಇದರಿಂದ ರಾಜ್ಯ ಚುನಾವಣೆ ಆಯೋಗವು ಕಂದಾಯ ಇಲಾಖೆಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ.

ಬೆಂಗಳೂರು, (ಸೆ.15): ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು.

 ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.

ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್

ಕಂದಾಯ ಇಲಾಖೆಗೆ ಮಹತ್ವದ ಸೂಚನೆ
ಕಂದಾಯ ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಚುನಾವಣೆ ಆಯೋಗ ಬ್ರೆಕ್‌ ಹಾಕಿದೆ. ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಸಿದ್ದತಾ ಕಾರ್ಯ, ಚುನಾವಣಾ ಪೂರ್ವಭಾವಿ  ತಾಯಾರಿಗಳನ್ನ ಮಾಡಿಕೊಳ್ಳಬೇಕಿರುವುದರಿಂದ
ಕಂದಾಯ ಇಲಾಖೆಯಲ್ಲಿ ಯಾವುದೇ ಅಧಿಕಾರಿಗಳನ್ನ ಅಥಾವ ಸಿಬ್ಬಂದಿಗಳ ವರ್ಗವಾಣೆ ಮಾಡದಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ರವಾನಿಸಿದೆ.

 ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ತಾಲೂಕು ಹಾಗೂ ಜಿಲ್ಲೆಗಳಲ್ಲಿ ಪೂರ್ವಭಾವಿ ತಯಾರಿಗಳು ನಡೆಯುತ್ತಿವೆ. ಈ ಕಾರ್ಯಗಳಿಗೆ ತೊಡಕಾಗದಂತೆ  2020 ಸೆಪ್ಟೆಂಬರ್ 25ರ ನಂತರ ಕಂದಾಯ ಇಲಾಖೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆ ಆದೇಶ ಹೊರಡಿಸದಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಚುನಾವಣೆ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಎಲೆಕ್ಷನ್: ಪಕ್ಷಗಳ ಗಲಾಟೆ ಮಧ್ಯೆ ಚುನಾವಣೆ ಆಯೋಗದಿಂದ ಪ್ರಕಟಣೆ

ಅಕ್ಟೋಬರ್‌ ಕೊನೆಯಲ್ಲಿ ಎಲೆಕ್ಷನ್..?
ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಘೋಷಿಸುವ ಸಂಬಂಧ 2020ರ ಅಕ್ಟೋಬರ್‌ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಈಗಾಗಲೇ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.

ಅದರಂತೆ ಈಗ ವಾರ್ಡ್‌ಗಳ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಚುನಾವಣೆ ಎಲ್ಲಾ ತಯಾರಿ ನಡೆಸಿದೆ. ಇತ್ತ ರಾಜಕೀಯ ನಾಯರು ಸಹ ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಮೀಸಲಾತಿ ಪ್ರಕಾರ ಅಭ್ಯರ್ಥಿಗಳ ಹುಡುಕಾಟ ನಡೆಸಿದ್ದಾರೆ.  

ಎಲ್ಲವೂ ಅಂದುಕೊಂಡಂತೆ ಆದ್ರೆ ಅಕ್ಟೋಬರ್‌ನಲ್ಲೇ ಚುನಾವಣೆ ನಡೆಯುವುದು ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಕೊರೋನಾ ಮಾರ್ಗಸೂಚಿಗಳನ್ನ ಸಹ ಈಗಾಗಲೇ ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ