ರಾಗಾ ಬ್ರಿಟನ್‌ ಪ್ರಜೆ ಎಂದ ಕನ್ನಡಿಗನಿಗೆ ಇ.ಡಿ. ಸಮನ್ಸ್‌

Kannadaprabha News   | Kannada Prabha
Published : Sep 07, 2025, 04:33 AM IST
Rahul Gandhi

ಸಾರಾಂಶ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬ್ರಿಟನ್‌ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್‌ ಶಿಶಿರ್‌ಗೆ ಜಾರಿ ನಿರ್ದೇಶನಾಲಯದ ನೋಟಿಸ್‌ ಜಾರಿ ಮಾಡಿದೆ.

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬ್ರಿಟನ್‌ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್‌ ಶಿಶಿರ್‌ಗೆ ಜಾರಿ ನಿರ್ದೇಶನಾಲಯದ ನೋಟಿಸ್‌ ಜಾರಿ ಮಾಡಿದೆ.

ನೀವು ಮಾಡಿದ ಆರೋಪ ಸಾಬೀತುಪಡಿಸುವ ಎಲ್ಲಾ ದಾಖಲೆಗಳೊಂದಿಗೆ ಸೆ.9ಕ್ಕೆ ವಿಚಾರಣೆಗೆ ಹಾಜರಾಗಿ ಎಂದು ಇ.ಡಿ. ನೋಟಿಸ್ ನೀಡಿದೆ.

ರಾಹುಲ್‌ ಗಾಂಧಿ, ಬ್ರಿಟನ್‌ ಪೌರತ್ವ ಹೊಂದಿದ್ದಾರೆ ಎಂದು ಸಾಬೀತುಪಡಿಸುವ ಕೆಲ ದಾಖಲೆಗಳು ಮತ್ತು ಬ್ರಿಟನ್‌ ಸರ್ಕಾರದ ಇ ಮೇಲ್‌ ಮಾಹಿತಿ ತಮ್ಮ ಬಳಿ ಇದೆ. ಅವರು ಬ್ರಿಟನ್‌ ಪ್ರಜೆಯಾದ ಕಾರಣ ಅವರು ಭಾರತದ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಹೇಳಿ ಶಿಶಿರ್‌ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಆ.30ರಂದು ಮಧ್ಯಂತರ ಆದೇಶ ಹೊರಡಿಸಿದ್ದ ಕೋರ್ಟ್‌, ಮೇಲ್ನೋಟಕ್ಕೆ ಅರ್ಜಿ ವಿಚಾರಣೆಗೆ ಅರ್ಹ ಎಂದು ಕಂಡುಬರುತ್ತಿದೆ ಎಂದು ಹೇಳಿತ್ತು. ಜೊತೆಗೆ ಶಿಶಿರ್‌ಗೆ ದಿನದ 24 ಗಂಟೆಯೂ ಭದ್ರತೆ ನೀಡುವಂತೆ ಸೂಚಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು