ಒಬ್ಬರಿಂದ ಒಬ್ಬರಂತೆ ಕರ್ನಾಟಕದ ಜನಪ್ರತಿನಿಧಿಗಳಿಗೂ ಕೊರೋನಾ ಶಾಕ್ ಕೊಡುತ್ತಿದೆ. ಇದೀಗ ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಸೋಂಕು ತಗುಲಿದೆ.
ಬೆಂಗಳೂರು, (ಅ.05): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ಗೂ ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಸ್ವತಃ ಅವರೇ ಸುರೇಶ್ ಕುಮಾರ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ.
undefined
ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ, ನಾಯಕರಿಗೆ ಅಂಟಿಕೊಂಡ ಪಕ್ಷಾಂತರ ಗಾಳಿ; ಅ.5ರ ಟಾಪ್ 10 ಸುದ್ದಿ!
ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೂ ಕೊವಿಡ್-19 ಸೋಂಕು ಇರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಯಾವುದೇ ಆತಂಕವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.
ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ.
ಸಚಿವ ಸುರೇಶ್ ಕುಮಾರ್ ಅವರು ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಕಾರ್ಯನಿಮಿತ್ತ ಭೇಟಿ ಕೊಡುತ್ತಲೇ ಇದ್ದಾರೆ. ಎರಡು ದಿನಗಳ ಹಿಂದಷ್ಟೇ ಚಾಮರಾಜನಗರದ ಜಿಲ್ಲೆಗೆ ಭೇಟಿ ನೀಡಿದ್ದರು.