ಜಲಜೀವನ ಮಿಷನ್, ಜಲಧಾರೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ಕೇಂದ್ರ ಸಚಿವ ಸೋಮಣ್ಣ

By Kannadaprabha NewsFirst Published Sep 6, 2024, 5:27 PM IST
Highlights

ಕೇಂದ್ರ ಸರ್ಕಾರದ ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೂಚಿಸಿದರು. 
 

ಯಾದಗಿರಿ (ಸೆ.06): ಕೇಂದ್ರ ಸರ್ಕಾರದ ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಯೋಜನೆಯಡಿ 438 ಕಾಮಗಾರಿಗಳನ್ನು ಪೂರ್ಣಗೊಳಿಸಿ, ಶೇ.63 ರಷ್ಟು ಪ್ರಗತಿ ಸಾಧಿಸಲಾಗಿದೆ. ಅದರಂತೆ ಜಲಧಾರೆ ಯೋಜನೆಯಡಿ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಜಾಕ್ವೆಲ್ ಮತ್ತು ಇತರೆ ಕಾಮಗಾರಿಗಳಲ್ಲಿ 40 ರಷ್ಟು ಪ್ರಗತಿ ಸಾಧಿಸಿದ್ದು, ಅಧಿಕಾರಿಗಳು ಇನ್ನು ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಸೂಕ್ತ ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಕೃಷಿ ಸಿಂಚನ ಯೋಜನೆ , ಮಕ್ಕಳ ಅಪೌಷ್ಟಿಕತೆ ನಿವಾರಣೆ, ರಸ್ತೆಗಳ ದುರಸ್ತಿ, ಸ್ವಚ್ಛ ಭಾರತ ಮಿಷನ್ ಯೋಜನೆಗಳಲ್ಲಿ ಅವಶ್ಯಕ ಪ್ರಗತಿ ಸಾಧಿಸುವಂತೆ ತಿಳಿಸಿದರು. ಯಾದಗಿರಿ ಜಿಲ್ಲೆ, ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅತ್ಯಂತ ಹಿಂದೆ ಇದ್ದು, ಫಲಿತಾಂಶ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು. ಜನರ ಜೀವನಮಟ್ಟ ಸುಧಾರಣೆಯಲ್ಲಿ ಅವಶ್ಯಕ ಗಮನ ನೀಡುವಂತೆ ಅವರು ಸಲಹೆ ನೀಡಿದರು. ರೈಲ್ವೆ ಇಲಾಖೆ, ರಕ್ಷಣಾ ಇಲಾಖೆ ರೀತಿಯಲ್ಲಿ ಸೂಕ್ಷ್ಮವಾಗಿ ಇರುವುದರಿಂದ ಇದರ ನಿರ್ವಹಣೆ ಅತ್ಯಂತ ಮಹತ್ವದ್ದಾಗಿದೆ. 

Latest Videos

ಇಲ್ಲಿಯ ಜನರ ಬೇಡಿಕೆಗಳಿಗೆ ಮತ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಕೆಲವು ನಿಂತು ಹೋಗಿರುವಂತಹ ಎಕ್ಸ್ ಪ್ರೆಸ್ ರೈಲು ನಿಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು. ಜಿಲ್ಲೆಯ ಆರೋಗ್ಯ ವ್ಯವಸ್ಥೆ ಸುಧಾರಿಸಲು ಸಲಹೆ ನೀಡಿದ ಸಚಿವರು, ವೈದ್ಯರಿಗೆ ಸರ್ಕಾರ ತೃಪ್ತಿಕರವಾದ ವೇತನಗಳನ್ನು ನೀಡುತ್ತಿರುವುದರಿಂದ ಬಡವರಿಗೆ ಸಕಾಲಕ್ಕೆ ಸ್ಪಂದಿಸಬೇಕು. ಮಹತ್ವಾಕಾಂಕ್ಷೆ ಜಿಲ್ಲೆಯ ಆಕಾಂಕ್ಷೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯಗಳಿಗೂ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ತಮಗೆ ಸಲ್ಲಿಸಬಹುದಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಹೈಕೋರ್ಟ್ ತೀರ್ಪೋ, ಅಜೆಂಡಾವೋ: ಸರ್ಕಾರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಅಮೃತ್‌ ಭಾರತ ಸ್ಟೇಷನ್ ಕಾಮಗಾರಿ ಪರಿಶೀಲಿಸುವರು. ಅದರಂತೆ ಯಾದಗಿರಿ-ವಾಡಿ-ವಿಕಾರಾಬಾದ್- ಸಿಕಂದರಾಬಾದ್ ರೈಲು ಸೆಕ್ಷನ್ ವಿಂಡೋ ಟ್ರೆಲಿಂಗ್ ಪರಿಶೀಲಿಸಿದರು. ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು, ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ವಿಜಯ ಕುಮಾರ ಮಡ್ಡೆ ಇದ್ದರು.

click me!