ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದು, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಪ್ರತಿಯೊಬ್ಬ ಕಾರ್ಯಕರ್ತರು ಕೂಡ ಅವರಿಗೆ ಬೆಂಬಲ ನೀಡಬೇಕು ಎಂದ ನಳಿನ್ ಕುಮಾರ್ ಕಟೀಲ್
ಮಂಗಳೂರು(ಮಾ.14): ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವ ಮೂಲಕ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಪಕ್ಷದ ಯಾರೇ ಕಾರ್ಯಕರ್ತರಿಗೂ ಲೋಕಸಭೆಯ ಟಿಕೆಟ್ ನೀಡಿದರೂ ಖುಷಿ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕ್ಯಾ.ಬೃಜೇಶ್ ಚೌಟ ಅವರ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ದಕ್ಷಿಣ ಕನ್ನಡ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದು, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಪ್ರತಿಯೊಬ್ಬ ಕಾರ್ಯಕರ್ತರು ಕೂಡ ಅವರಿಗೆ ಬೆಂಬಲ ನೀಡಬೇಕು ಎಂದರು.
ನನಗೆ ಟಿಕೆಟ್ ಸಿಕ್ಕಿದ್ದು ಕಾರ್ಯಕರ್ತರಿಗೆ ಸಿಕ್ಕಂತೆ: ವಿಜಯಪುರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹರ್ಷ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಸುದೀರ್ಘ 15 ವರ್ಷಗಳ ಕಾಲ ಸೇವೆ ಸಲ್ಲಿಸುವ ಭಾಗ್ಯ ದೊರೆತಿದೆ. ನನ್ನ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಾಗಿವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಯುವಕರು ಬರಬೇಕು:
ಪಕ್ಷಕ್ಕೆ ಹೊಸ ಯುವಕರು ಬರಬೇಕು. ಹಿರಿಯರು ಯುವನಾಯಕರನ್ನು ಗುರುತಿಸಿ ಅವಕಾಶ ನೀಡುತ್ತಿದ್ದಾರೆ. ಕ್ಯಾ.ಬೃಜೇಶ್ ಚೌಟ ಅವರನ್ನು ಪಕ್ಷ ಗುರುತಿಸಿ ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವ ಅವಕಾಶ ನೀಡಿದೆ. ಅವರ ಗೆಲುವಿಗೆ ಒಟ್ಟಾಗಿ ಶ್ರಮಿಸಲಿದ್ದೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.