ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಸಹ ಕೌಂಟರ್ ಕೊಟ್ಟಿದೆ.
ಬೆಂಗಳೂರು/ಮಡಿಕೇರಿ, (ಆಗಸ್ಟ್ .21): ಮಾಜಿ ಸಿಎಂ ಸಿದ್ಧರಾಮಯ್ಯನವರ ಕಾರಿ ಮೇಲೆ ಮೊಟ್ಟೆ ಎಸೆದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿ ಚಲೋಗೆ ಕರೆ ನೀಡಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಸಹ ಕೌಂಟರ್ ನೀಡಿದ್ದು, 26ರಂದೇ ಜಾಗೃತಿ ಸಮಾವೇಶಕ್ಕೆ ಮಡಿಕೇರಿ ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ. ಹಿನ್ನೆಲೆಯಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.
undefined
ಜನಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ದದ ಹಲವು ಅಂಶಗಳ ಪ್ರಸ್ತಾಪ ಮಾಡಲಾಗಿದೆ. ಸಿದ್ದರಾಮಯ್ಯ ಗೋಮಾಂಸ ಭಕ್ಷಣೆ ಹೇಳಿಕೆ ವಿರುದ್ದವೂ ಜನ ಜಾಗೃತಿ ಮಾಡಲು ಬಿಜೆಪಿ ಕರೆ ನೀಡಿದೆ. ಇದರಿಂದ ಆಗಸ್ಟ್ 26ರಂದು ಮಡಿಕೇರಿಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗುಡಾಯಿಸುವ ಸಾಧ್ಯತೆ ಇದೆ.
ಮೊಟ್ಟೆ ಪ್ರತಿಭಟನೆ ಬಿಸಿ: ಸಿದ್ದರಾಮಯ್ಯ ತವರೂರಿಗೆ ಆಗಮಿಸಲು ಸಿಎಂ ಬೊಮ್ಮಾಯಿ ಹಿಂದೇಟು!
ಮಡಿಕೇರಿ ಚಲೋಗೆ ಕಾಂಗ್ರೆಸ್ ಕರೆ
ಮಡಿಕೇರಿ ಪ್ರವಾಸದ ವೇಳೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಅಧಿಕೃತ ಸೂಚನೆ ನೀಡಿದ್ದಾರೆ. ಆ.26ರಂದು ಮಡಿಕೇರಿ ಚಲೋಗೆ ಕಾಂಗ್ರೆಸ್ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.
ಮಡಿಕೇರಿಗೆ ಪಾದಯಾತ್ರೆ
ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ ಗೆ ಮೊಟ್ಟೆ ಹೊಡೆದ ಹಿನ್ನೆಲೆ ಮೈಸೂರಿನಿಂದ 23ರಂದು ಪಾದಯಾತ್ರೆ ಹೊರಡಲು ಸಿದ್ದು ಫ್ಯಾನ್ಸ್ ತಯಾರಿ ನಡೆಸಿದ್ದಾರೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಸಭೆಯಲ್ಲಿ ರೂಪುರೆಷೆ ರಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನೇ ಸೇರಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಿಂದ ಪಾದಯಾತ್ರೆ ಹೊರಡಲಿರುವ ಪದಾಧಿಕಾರಿಗಳು, ಮೊದಲಿಗೆ ಮಾಜಿ ಸಿಎಂ ದಿ, ಡಿ ದೇವರಾಜ ಅರಸ್ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ.ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಎಸ್ ಶಿವರಾಮ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ.
ಘಟನೆ ಹಿನ್ನೆಲೆ
ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಆಗಸ್ಟ 18 ರಂದು ಮಲೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತರಳುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.
ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತ ಸಂಪತ್ ಎಂದು ತಿಳಿದುಬಂದಿದೆ. ಇನ್ನು ಈ ಸಂಪತ್ ಶಾಸಕ ಅಪ್ಪಚ್ಚು ರಂಜನ್ ಜೊತೆ ಇರುವ ಫೋಟೋಗಳು ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.