ಚುನಾವಣಾ ಬಾಂಡ್ ಹಗರಣವು ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ಅನುಮಾನ ಹುಟ್ಟಿಸಿದೆ. ಚುನಾವಣಾ ಬಾಂಡ್ ಎನ್ನುವುದು ಬಿಜೆಪಿ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರ ಎಂಬಂತಾಗಿದೆ.
ಬೆಂಗಳೂರು (ಮಾ.17): 'ಚುನಾವಣಾ ಬಾಂಡ್ ಹಗರಣವು ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ಅನುಮಾನ ಹುಟ್ಟಿಸಿದೆ. ಚುನಾವಣಾ ಬಾಂಡ್ ಎನ್ನುವುದು ಬಿಜೆಪಿ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರ ಎಂಬಂತಾಗಿದೆ. ಈ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಉನ್ನತಾಧಿಕಾರಿ ಸಮಿತಿಯನ್ನು ರಚಿಸಿ ಹಗರಣದ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ?
ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ ಎಂದು ಹೇಳಿದ್ದಿರಿ. ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರ ದೂಡಿದಿರಿ. ಇದೀಗ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಎಸ್‌ಬಿಐ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಬಾಂಡ್ ಮಾರಾಟ, ಖರೀದಿಕಾನೂನುಬದ್ಧವಾಗಿ ನಡೆದಿದ್ದರೆ ಮಾಹಿತಿ ಮುಚ್ಚಿಡಲು ಪ್ರಯತ್ನ ಏಕೆ ಎಂದು ಸಿಎಂ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್‌ನಿಂದ ಮತ್ತೆರಡು ಗ್ಯಾರಂಟಿ ಘೋಷಣೆ: ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯಗೆ ಬಡವರ ಬಗ್ಗೆ ಹೆಚ್ಚು ಕಾಳಜಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಹೆಚ್ಚು ಕಾಳಜಿ ಇರುವುದರಿಂದ ಪ್ರತಿ ಮನೆಗೆ 5 ಲಕ್ಷ ಸಬ್ಸಿಡಿ ನೀಡಿ 8,500 ಕೋಟಿ ರು. ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಲಲಿತಾದ್ರಿಪುರದಲ್ಲಿ ಕರ್ನಾಟಕ ಸರ್ಕಾರ ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಜಿಲ್ಲಾಡಳಿತ ಮೈಸೂರು ಜಿಲ್ಲೆ, ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1,440 ಗುಂಪು ಮನೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, ನೆರವೇರಿಸಿ ಅವರು ಮಾತನಾಡಿದರು.
ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ: ಪುನೀತ್ ಹುಟ್ಟಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ಶಿವಣ್ಣ!
ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು. ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಮ್ಮ ಸರ್ಕಾರವಿದ್ದಾಗ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ಬಡವರಿಗಾಗಿ ಕಟ್ಟಿದ್ದೇವೆ. ಈಗ ಕೃಷ್ಣರಾಜ ಕ್ಷೇತ್ರದ ಫಲಾನುಭವಿಗಳಿಗೆ 940 ಮನೆ, ವರುಣ ಕ್ಷೇತ್ರದ ಫಲಾನುಭವಿಗಳಿಗೆ 500 ಮನೆಗಳನ್ನು ಕಟ್ಟಿಕೊಡಲಾಗುವುದು, ನಮ್ಮ ಸರ್ಕಾರ ಬಂದ ಮೇಲೆ ವರುಣ ಕ್ಷೇತ್ರಕ್ಕೆ ವಸತಿ ಸಚಿವರು ಮೂರು ಸಾವಿರ ಮನೆ ಮಂಜೂರು ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ದೀನ ದಲಿತರ ಪರವಿರುವ ಸರ್ಕಾರವಾಗಿದೆ ಎಂದರು.