
ಕಾರವಾರ(ಮೇ.02): ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಚುನಾವಣಾ ಆಯೋಗದ ಇಂಟರ್‌ವಿಂಗ್‌ನವರು ಅವರ ಚಲನವಲನದ ಮೇಲೆ ನಿಗಾ ಇಡಬೇಕು. ಅವರ ಸ್ಥಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ ಮಾಡಿದ್ದಾರೆ.
ಇಂದು(ಗುರುವಾರ) ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಹೇಮಂತ್ ನಿಂಬಾಳ್ಕರ್ ಪೊಲೀಸ್ ಅಧಿಕಾರಿಯಾಗಿದ್ದಾಗ IMA ಕೇಸ್ ಆಗಿದೆ. ಹೇಗೆ ಸರ್ಕಾರದ ಅಧಿಕಾರ ಬಳಸಿ ಹೊರಬಂದ್ರು ಎಂದು ಎಲ್ಲರಿಗೂ ಗೊತ್ತಿದೆ. ಪತ್ನಿಗೆ ಟಿಕೆಟ್ ಕೊಡಿಸಲು ಹಿಂದಿನಿಂದಲೂ ಕಾಂಗ್ರೆಸ್ ಪರ ಕೆಲಸ ಮಾಡಿದ್ದಾರೆ. ಗಲಾಟೆಯಲ್ಲಿ ಅವರ ಕಾರನ್ನು ರಕ್ಷಿಸಿಕೊಳ್ಳಲಾಗದ ದುರ್ಬಲ ಐಜಿ ಆಗಿದ್ದರು ಎಂದು ಕಿಡಿ ಕಾರಿದ್ದಾರೆ.
ರಾಮಲಲ್ಲಾನಿಗೆ ಅಪಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ತಕ್ಕ ಪಾಠ: ನರೇಂದ್ರ ಮೋದಿ ವಿಶ್ವಾಸ
ಪರೇಶ್ ಮೇಸ್ತಾ ಹತ್ಯೆ ಆದಾಗ ಕ್ಷೇತ್ರದಲ್ಲೇ ಇದ್ದರೂ ಅವರ ಮನೆಗೆ ಸಿದ್ದರಾಮಯ್ಯ ಯಾಕೆ ಹೋಗಲಿಲ್ಲ. ಹೇಮಂತ್ ನಿಂಬಾಳ್ಕರ್ ಇರುವ ಸಾಕ್ಷವನ್ನು ನಾಶ ಮಾಡಿದ್ದರು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.