
ಬೆಂಗಳೂರು (ಮಾ.29): ಪ್ರಜಾಪ್ರಭುತ್ವದ ಹಬ್ಬಕ್ಕೆ ಅದರ ತಾರೀಕು ನಿಗದಿ ಮಾಡಿದ್ದಾರೆ. ಮೇ 10ನೇ ತಾರೀಕು ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬದ ದಿನ. ಇದು ಸರಿಯಾದ ಸಮಯದಲ್ಲಿ ಬಂದಿದೆ. ಮತ ಎಣಿಕೆ ಕೂಡ ಜಾಸ್ತಿ ಸಮಯ ಕೊಡದೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಒಂದೇ ದಿನ ಮತದಾನ ನಡೆಸುವಂಥದ್ದು ಕೂಡ ಬಹಳಷ್ಟು ಒಳ್ಳೆಯ ನಿರ್ಣಯ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದೆ. ವೋಟಿಂಗ್ ಲಿಸ್ಟ್ ನಲ್ಲಿ ಹೆಚ್ಚು ಕಡಿಮೆ ಆಗಿರುವುದನ್ನು ನಾವು ನೋಡಿದ್ದೇವೆ. ಚುನಾವಣಾ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುತ್ತಾರೆ ಎಂದು ನಂಬಿಕೊಂಡಿದ್ದೇವೆ. ಚಿಲುಮೆ ಕೇಸ್‌ನಲ್ಲಿ ಬಿಜೆಪಿ ಪಾತ್ರ ಇತ್ತು. ಯಾರ ಮೇಲೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ಎಲೆಕ್ಷನ್ ಕಮಿಷನ್ ನಿಷ್ಪಕ್ಷಪಾತವಾಗಿ ಎಲೆಕ್ಷನ್ ಮಾಡ್ತಾರೆ ಅನ್ನೋದು ನನ್ನ ಭಾವನೆ ಎಂದು ಬಿ ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಫ್ಲೆಕ್ಸ್ ಗಳನ್ನ ಹಾಕಲು ಬಿಡುತ್ತಿದ್ದಾರೆ. ಕಾಂಗ್ರೆಸ್‌ನವರು ಹಾಕಿದ್ರೆ ಒಂದು ದಿನ ಬಿಡದೆ ಕಿತ್ತು ಹಾಕಿದ್ದಾರೆ. ಬಹಳಷ್ಟು ನಿರೀಕ್ಷೆ ಮಾಡುತ್ತಿದ್ದರು ಕಾಂಗ್ರೆಸ್ ಪಕ್ಷದಲ್ಲಿ ಅಲ್ಲೋಲ ಕಲ್ಲೋಲಾಗುತ್ತೆ. 124 ಅಭ್ಯರ್ಥಿಗಳನ್ನ ಘೋಷಣೆ ಮಾಡಿದಾಗ ಯಾವುದೇ ಬಂಡಾಯ ಇರಲಿಲ್ಲ. ಕರ್ನಾಟಕ ಶಾಂತಿ ಪ್ರಿಯರು ಕಾನೂನು ವ್ಯವಸ್ಥೆ ಚೆನ್ನಾಗಿದೆ. ಒಂದೇ ದಿನ ಘೋಷಣೆ ಮಾಡಿರುವಂಥದ್ದು ಅನುಕೂಲಕರ ಒಳ್ಳೆ ನಿರ್ಣಯ. ಇವಿಎಂ, ಸಿಬಿಐ, ಇಡಿ ಇದು ಚುನಾವಣೆ ಸಂದರ್ಭದಲ್ಲಿ ದುರ್ಬಳಕೆ ಆಗಬಾರದು ಎಂದಿದ್ದಾರೆ.
Karnataka Assembly Election 2023: ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ, ಜಿಲ್ಲಾವಾರು ಕ್ಷೇತ್ರ ಮಾಹಿತಿ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ ವಾಗಿದೆ.
KARNATAKA ELECTIONS 2023: ಪ್ರತಿಪಕ್ಷಗಳ ಮನವಿ ಒಪ್ಪಿದ ಆಯೋಗ, ರಾಜ್ಯದಲ್ಲಿ ಒಂದೇ ಹಂತದಲ್ಲಿ 'ಮೇ'ಗಾ ಎಲೆಕ್ಷನ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.