
ರಾಯಚೂರು, (ಮಾ,13): ಮಸ್ಕಿ ವಿಧಾನಸಭೆ ಉಪ ಚುನಾವಣೆಯ ದಿನಾಂಕ ಘೋಷಣೆಗೆ ತಯಾರಿ ನಡೆದಿದೆ. ಇದಕ್ಕೆ ಪೂರಕವೆಂಬಂತೆ ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಕಾರಿಯನ್ನ ನೇಮಿಸಿದೆ.
ಲಿಂಗಸುಗೂರು ಸಹಾಯಕ ಆಯುಕ್ತರನ್ನು ಚುನಾವಣಾ ಅಧಿಕಾರಿಯನ್ನಾಗಿ ನಿಯುಕ್ತಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಮೂಲಕ ಸದ್ಯ ಮತದಾರರ ಪಟ್ಟಿ, ಗುರುತಿನ ಚೀಟಿ ಹಾಗೂ ಮತಗಟ್ಟೆಗಳ ಮಾಹಿತಿಗಳನ್ನ ಕ್ರೋಢೀಕರಿಸಿ ಚುನಾವಣಾ ದಿನಾಂಕ ಘೋಷಣೆಗೆ ಸಿದ್ಧತೆ ನಡೆಸಿದೆ.
ವಿಜಯೇಂದ್ರನ ಆಪರೇಷನ್ ಕಮಲ ಸಕ್ಸಸ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ
ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿವೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಬಿಜೆಪಿ ಪಕ್ಷಗಳು ತಮ್ಮ ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿವೆ. ಇನ್ನು ಇದೇ ಮಾರ್ಚ್ 20ರಂದು ಮಸ್ಕಿಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಮೂಲಕ ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆಲುವಿಗೆ ಸಿಎಂ ಬಿಎಸ್ವೈ ಮೆಗಾ ಪ್ಲಾನ್ ಮಾಡಿದ್ದಾರೆ.
ಇತ್ತ ಕಾಂಗ್ರೆಸ್, ತನ್ನ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವಿಗಾಗಿ ಕಾರ್ಯತಂತ್ರ ಶುರುಮಾಡಿದೆ. ವಿರೂಪಾಕ್ಷಪ್ಪ ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡುವಂತೆ ಕೋರಿ ಬಸನಗೌಡ ತುರುವಿಹಾಳ್ ಸಿದ್ದರಾಮಯ್ಯರ ಮೊರೆ ಹೋಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.