ಈಶಾನ್ಯದ ಮೂರು ರಾಜ್ಯಗಳಾದ ತ್ರಿಪುರ, ಮೇಘಾಲಯ ಹಾಗೂ ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿಯಲ್ಲಿ ಚುನಾವಣೆ ನಡೆದಿತ್ತು. ತ್ರಿಪುರದಲ್ಲಿ ಫೆ. 16ಕ್ಕೆ ಚುನಾವಣೆ ನಡೆದಿದ್ದರೆ, ನಾಗಾಲ್ಯಾಂಡ್ ಹಾಗೂ ಮೇಘಾಲಯಕ್ಕೆ ಫೆ. 27 ರಂದು ಚುನಾವಣೆ ನಡೆದಿತ್ತು. ಪ್ರಸ್ತುತ ತ್ರಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದರೆ, ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಜೊತೆ ಕೈಜೋಡಿಸಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ. ಇನ್ನು ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಧಿಕಾರದಲ್ಲಿದೆ.
ನವದೆಹಲಿ (ಫೆ.2): ಈಶಾನ್ಯ ಭಾರತದ ಮೂರು ಪ್ರಮುಖ ರಾಜ್ಯಗಳಾದ ಮೇಘಾಲಯ, ತ್ರಿಪುರ ಹಾಗೂ ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ತ್ರಿಪುರದಲ್ಲಿ ಬಿಜೆಪಿಯ ಲೆಕ್ಕಾಚಾರ ಉಲ್ಟಾ ಆಗುವ ಲಕ್ಷಣ ತೋರಿತ್ತಾದರೂ, ಪ್ರಸ್ತುತ ಬಹುಮತ ಸಾಧಿಸುವ ಲಕ್ಷಣ ತೋರಿದೆ. ಹಾಗಿದ್ದರೂ ಸರ್ಕಾರ ರಚಿಸಲು ಸರ್ಕಸ್ ಅನಿವಾರ್ಯ ಎನ್ನುವ ಸಾಧ್ಯತೆ ಇದೆ. ಇನ್ನೊಂದೆಡೆ ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟದ ಎನ್‌ಡಿಪಿಪಿ ಮುನ್ನಡೆ ಸಾಧಿಸಿದೆ. ಅದೇ ಸಮಯದಲ್ಲಿ, ಮೇಘಾಲಯದಲ್ಲಿ ಪ್ರಸ್ತುತ ಸಿಎಂ ಕೊನ್ರಾಡ್ ಸಂಗ್ಮಾ ಅವರ ಎನ್‌ಪಿಪಿ ಮುನ್ನಡೆ ಸಾಧಿಸಿದೆ. ಮೂರೂ ರಾಜ್ಯಗಳಲ್ಲಿ ತಲಾ ಸೀಟುಗಳಿವೆ. ಫೆಬ್ರವರಿ 16 ರಂದು ತ್ರಿಪುರಾದಲ್ಲಿ ಮತ್ತು ಫೆಬ್ರವರಿ 27 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಚುನಾವಣೆಗಳು ನಡೆದಿದ್ದವು. ಪ್ರಸ್ತುತ, ತ್ರಿಪುರಾದಲ್ಲಿ ಬಿಜೆಪಿ ಸರ್ಕಾರವಿದ್ದು, ನಾಗಾಲ್ಯಾಂಡ್‌ನಲ್ಲಿ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಮತ್ತು ಬಿಜೆಪಿಯ ಮೈತ್ರಿ ಕೂಟ ಅಧಿಕಾರದಲ್ಲಿದೆ. ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಧಿಕಾರದಲ್ಲಿದೆ. ಮೂರೂ ರಾಜ್ಯಗಳಲ್ಲಿ ಬಹುಮತಕ್ಕಾಗಿ 31 ಸೀಟ್ ಗೆಲ್ಲಬೇಕಿದೆ.
ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಸಮೀಪದ ಪ್ರತಿಸ್ಪರ್ಧಿ ಎಡರಂಗ ಹಾಗೂ ಕಾಂಗ್ರೆಸ್ ಮೈತ್ರಿಕೂಟಕ್ಕಿಂತ ಭಾರಿ ಮುನ್ನಡೆ ಸಾಧಿಸಿತ್ತು. ಆರಂಭದಲ್ಲಿ 35 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದರೂ, ಪ್ರಸ್ತುತ 31 ಸ್ಥಾನಕ್ಕೆ ಕುಸಿಸಿದೆ. ಎಡ-ಕಾಂಗ್ರೆಸ್ ಮೈತ್ರಿಕೂಟ 16 ಸ್ಥಾನಗಳಲ್ಲಿ ಮುಂದಿದೆ.
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ-ಬಿಜೆಪಿ ಮೈತ್ರಿಕೂಟ 36 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಆರಂಭಿಕ ಟ್ರೆಂಡ್ ತಿಳಿಸಿದೆ. ಎನ್‌ಡಿಪಿಪಿ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಹೊಂದಿದ್ದು, 40:20 ಸೀಟು ಹಂಚಿಕೆ ಆಧಾರದ ಮೇಲೆ ಚುನಾವಣೆ ಎದುರಿಸಿದ್ದವು. 60 ಸ್ಥಾನಗಳ ಮೇಘಾಲಯ ಅಸೆಂಬ್ಲಿಯಲ್ಲಿ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ ಪ್ರಸ್ತುತ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.