
ಮಂಗಳೂರು (ಏ.11): ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಈ ವಿಚಾರಗಳ ಬಗ್ಗೆ ಸಿಎಂ, ಡಿಸಿಎಂ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾಯಕತ್ವ ಬದಲಾವಣೆ ಸೇರಿದಂತೆ ಮುಂತಾದ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾವು ಚರ್ಚೆ ಮಾಡುವ ಅಗತ್ಯ, ಅನಿವಾರ್ಯತೆ, ಅವಶ್ಯಕತೆ ಇಲ್ಲ. ಉಪ ಚುನಾವಣೆ ನಡೆದ ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ’ ಎಂದರು.
ಯುದ್ಧದ ಸನ್ನಿವೇಶದಿಂದಾಗಿ ಮಧ್ಯಪ್ರಾಚ್ಯದಿಂದ ಭಾರತಕ್ಕೆ ಬರುತ್ತಿದ್ದ ಕೆಲವು ಔಷಧಗಳ ಪೂರೈಕೆ ಆಗುತ್ತಿಲ್ಲ. ಔಷಧ ಪೂರೈಕೆಗೆ ಸ್ವಲ್ಪ ಸಮಯ ಕೇಳುತ್ತಿದ್ದಾರೆ. ಈ ಹಿಂದೆ ಕೊಟ್ಟಿರುವ ಆರ್ಡರ್‌ಗಳ ಡೆಲಿವರಿ ಮಾಡಲು ಆಗುತ್ತಿಲ್ಲ. 30 ದಿನ ಸಮಯ ಕೊಡಿ ಎಂದು ಕೇಳುತ್ತಿದ್ದಾರೆ. ಮೆಡಿಸಿನ್ ತಯಾರಿಕೆ ಮಾಡುವವರಿಗೂ ಕಚ್ಚಾವಸ್ತುಗಳು ಬರದೆ ಕೊರತೆ ಆಗಿದೆ. ಈ ಬಗ್ಗೆ ಅವರು ಸಹ ನಮಗೆ ಪತ್ರ ಬರೆದಿದ್ದಾರೆ. ಕೆಲವು ಔಷಧಗಳ ಬೆಲೆ ಏರಿಕೆಯಾಗಿದೆ. ಮೆಡಿಸಿನ್ ಉತ್ಪಾದನಾ ವೆಚ್ಚ ಕೂಡ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಬೇರೆ ಬೇರೆ ದೇಶದಿಂದ ಖರೀದಿ ಮಾಡುವ ವ್ಯವಸ್ಥೆ ಮಾಡಬೇಕು. ಬಹಳ ದೊಡ್ಡ ಜವಾಬ್ದಾರಿ ಕೇಂದ್ರದ ಮೇಲೆ ಇದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಇದೆ ಎಂದು ಸ್ಪಷ್ಟವಾಗಿ ಹೇಳಬೇಕು. ಸುಮ್ಮನೆ ಸಮಸ್ಯೆ ಇಲ್ಲ ಎಂದು ಹೇಳಬಾರದು. ಅನೇಕ ಕಡೆ ಆಹಾರ ತಯಾರಿಕೆ ಶೇ.50ಕ್ಕೆ ಇಳಿಸಿದ್ದಾರೆ. ಎಲ್ಲ ಕಡೆ ಕಮರ್ಷಿಯಲ್ ಗ್ಯಾಸ್‌ಗೆ ತೊಂದರೆ ಇದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.