ಈ ಬಾರಿಯ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯಕ್ಕೆ ದಿಕ್ಸೂಚಿಯಾಗಿದೆ ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿದೆ.
ಚಿಕ್ಕಮಗಳೂರು (ಮೇ.19): ಈ ಬಾರಿಯ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯಕ್ಕೆ ದಿಕ್ಸೂಚಿಯಾಗಿದೆ ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿದೆ. ನಿಶ್ಚಳ ಬಹುಮತ ಬರುವಂತೆ ಸ್ಥಿರ ಸರ್ಕಾರ ರಚನೆಗೆ ಅನುಕೂಲವಾಗುವಂತೆ ತೀರ್ಪು ನೀಡಿರುವ ರಾಜ್ಯದ ಎಲ್ಲಾ ಮತದಾರರಿಗೆ ಅಭಿನಂದಿಸುವುದಾಗಿ ತಿಳಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಧರ್ಮಾಧಾರಿತ ರಾಜಕಾರಣ ಮಾಡಿದ ಪರಿಣಾಮ ದೇಶದಲ್ಲಿ ಅಶಾಂತಿ ವಾತಾವರಣ ಸೃಷ್ಠಿಯಾಯಿತು. ಬೆಲೆ ಏರಿಕೆ, ಭ್ರಷ್ಟಾಚಾರ, ಜನ ವಿರೋಧಿ ನೀತಿ ಯಿಂದ ಆಡಳಿತ ವಿರೋಧಿ ಅಲೆ ಎದ್ದಿದ್ದು, ಈ ಜನ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದರಿಂದ ಈ ಚುನಾವಣೆಯಲ್ಲಿ ಗೆಲುವು ತಂದುಕೊಟ್ಟಿರುವುದು ಕಾಂಗ್ರೆಸ್‌ನ ಹೋರಾಟಕ್ಕೆ ಸಂದ ಜಯ ಎಂದರು.
undefined
ಚಾಮರಾಜನಗರ ಮೌಢ್ಯ ಅಳಿಸಿದ್ದ ಸಿದ್ದರಾಮಯ್ಯಗೆ ಮತ್ತೆ ಸಿಎಂ ಪಟ್ಟ!
ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಯನಾ ಮೋಟಮ್ಮ ಅವರಿಗೆ 50843 ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರಿಗೆ 50121 ಮತಗಳು ಲಭಿಸಿವೆ. 722 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು.
ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ 26038 ಮತಗಳು ಬಂದಿವೆ. ಹಿಂದಿನ ಚುನಾವಣೆಯಲ್ಲಿ ಎಂ.ಪಿ ಕುಮಾರಸ್ವಾಮಿಗೆ 56000 ಮತಗಳು ಬಂದಿದ್ದವು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಬರಬೇಕಾದ ಎಲ್ಲಾ ಸಂಪೂರ್ಣ ಮತಗಳು ಬಿಜೆಪಿ ಪರವಾಗಿ ಬಂದಿವೆ. ತಾವು ಕಾಂಗ್ರೆಸ್ ಪಕ್ಷ ಸೇರಿದ ಹಿನ್ನೆಲೆಯಲ್ಲಿ ತಮ್ಮಿಂದ ಸೋಲಿನ ಕೊರತೆಯನ್ನು ತುಂಬುವಷ್ಟುಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು, ಈ ಬಾರಿಯ ಗೆಲುವಿನಲ್ಲಿ ತಮ್ಮದು ಪ್ರಮುಖ ಪಾತ್ರವಿದೆ ಎಂದು ಹೇಳಿದರು.
ರಾಮನಗರ ಕ್ಷೇತ್ರದಲ್ಲಿಯೇ ರಾಜಕೀಯ ಮರು ಜನ್ಮ: ನಿಖಿಲ್ ಕುಮಾರಸ್ವಾಮಿ
ಇನ್ನಾದರೂ ಬಿಜೆಪಿಯವರು ಧರ್ಮಾಧಾರಿತ ರಾಜಕಾರಣ ಮಾಡಿ ಜನರ ಮನಸ್ಸನ್ನು ಒಡೆಯುವ ಬದಲು ಜನಪರವಾಗಿ ಕೆಲಸ ಮಾಡಿ ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದ ನಿಂಗಯ್ಯ ಅವರು, ಜಿಲ್ಲೆಯಲ್ಲಿ 5 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿರುವುದರಿಂದ ಯಾರಿಗಾದರೂ ಒಬ್ಬರಿಗೆ ಈ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮಾಡಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಲಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಲಕ್ಷ್ಮಣ್, ಜಗದೀಶಾಚಾರ್, ಸತೀಶ್, ಪುಟ್ಟಸ್ವಾಮಿ ಉಪಸ್ಥಿತರಿದ್ದರು.