ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ: ಒಟ್ಟು 3632 ಮಂದಿ ಕಣಕ್ಕೆ

Published : Apr 21, 2023, 05:22 AM IST
ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ: ಒಟ್ಟು 3632 ಮಂದಿ ಕಣಕ್ಕೆ

ಸಾರಾಂಶ

ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಕೊನೆ ದಿನವಾದ ಗುರುವಾರದಂದು ಗಾಲಿ ಕರುಣಾಕರರೆಡ್ಡಿ, ಪ್ರಕಾಶ್‌ ಖಂಡ್ರೆ, ಡಿ.ಕೆ.ಸುರೇಶ್‌, ಕಿಮ್ಮನೆ ರತ್ನಾಕರ್‌ ಸೇರಿದಂತೆ 1691 ಅಭ್ಯರ್ಥಿಗಳಿಂದ ಒಟ್ಟು 1934 ನಾಮಪತ್ರಗಳು ಸಲ್ಲಿಕೆಯಾಗಿವೆ. 

ಬೆಂಗಳೂರು (ಏ.21): ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಕೊನೆ ದಿನವಾದ ಗುರುವಾರದಂದು ಗಾಲಿ ಕರುಣಾಕರರೆಡ್ಡಿ, ಪ್ರಕಾಶ್‌ ಖಂಡ್ರೆ, ಡಿ.ಕೆ.ಸುರೇಶ್‌, ಕಿಮ್ಮನೆ ರತ್ನಾಕರ್‌ ಸೇರಿದಂತೆ 1691 ಅಭ್ಯರ್ಥಿಗಳಿಂದ ಒಟ್ಟು 1934 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಧಿಸೂಚನೆ ಪ್ರಕಟವಾದ ದಿನದಿಂದ ಈವರೆಗೆ 3632 ಅಭ್ಯರ್ಥಿಗಳಿಂದ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆಯಾದಂತಾಗಿದೆ. ಗುರುವಾರ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದ್ದರಿಂದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಗಳ ದಂಡೇ ಸೇರಿತ್ತು. ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಿದ್ದರಿಂದ ಅದಕ್ಕಿಂತ ಮುನ್ನ ಕಚೇರಿಯಿಂದ ಚೀಟಿ ಪಡೆದು ಸರದಿ ಸಾಲಿನಲ್ಲಿ ನಿಂತಿರುವುದು ಸಾಮಾನ್ಯವಾಗಿತ್ತು. 

ತಡರಾತ್ರಿಯವರೆಗೆ ನಾಮಪತ್ರಗಳು ಸಲ್ಲಿಕೆಯಾಗಿವೆ. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ತಿಪಟೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಬಿ.ಸಿ.ನಾಗೇಶ್‌, ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್‌, ಬಸವನಬಾಗೇವಾಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್‌.ಕೆ.ಬೆಳ್ಳುಬ್ಬಿ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಟ್ಟಾಜಗದೀಶ್‌ ಸೇರಿದಂತೆ ಹಲವು ಹುರಿಯಾಳುಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕನ​ಕ​ಪು​ರ​ದ ಜನರಿಗೆ ಸ್ವಾತಂತ್ರ್ಯ ಸಿಗಬೇಕಿದೆ: ಸಚಿವ ಅಶ್ವತ್ಥ ನಾರಾ​ಯಣ

ಬಿಜೆಪಿಯಿಂದ ಶ್ರೀಧರ್‌ ರೆಡ್ಡಿ, ಕರುಣಾಕರ ರೆಡ್ಡಿ, ಹರೀಶ್‌ ಪೂಂಜಾ, ಕಾಂಗ್ರೆಸ್‌ನಿಂದ ಕಿಮ್ಮನೆ ರತ್ನಾಕರ್‌, ಖನೀಜ್‌ ಫಾತೀಮಾ, ಡಾ.ಎಚ್‌.ಸಿ.ಮಹದೇವಪ್ಪ, ಎಚ್‌.ಆಂಜನೇಯ, ಅಲ್ಲಂಪ್ರಭು ಪಾಟೀಲ್‌, ಎನ್‌. ಕೊಟ್ರೇಶ್‌, ಜೆಡಿಎಸ್‌ನಿಂದ ಮಾಲಕರೆಡ್ಡಿ, ಶಿವಪ್ಪ ಬೋಳಿ, ಸೂರ್ಯಕಾಂತ ನಾಗಮಾರಪಲ್ಲಿ, ಶಿವಮೂರ್ತಿ, ಇಮ್ರಾನ್‌ ಪಾಷಾ, ಡಾ.ವಿ.ನಾರಾಯಣಸ್ವಾಮಿ, ಕೆ.ಸಿ.ರಾಜಣ್ಣ, ಎ.ಉತ್ಕಷ್‌ರ್‍, ಆಮ್‌ ಆದ್ಮಿ ಪಾರ್ಟಿಯಿಂದ ಸತ್ಯಲಕ್ಷ್ಮೇ, ರಮೇಶ್‌ ಬೆಲ್ಲಂಕೊಂಡ, ಕೀರ್ತನ್‌ ಕುಮಾರ್‌ ಮಂಜಪ್ಪ, ಮಹಮ್ಮದ್‌ ಇಬ್ರಾಹಿಂ ನಾಮಪತ್ರ ಸಲ್ಲಿಸಿದರು.

ಒಬ್ಬರು ಇತರ ಅಭ್ಯರ್ಥಿ: ಕೊನೆಯ ದಿನದಂದು 1691 ಅಭ್ಯರ್ಥಿಗಳಿಂದ 1934 ನಾಮಪತ್ರಗಳು ಸಲ್ಲಿಕೆಯಾಗಿವೆ. 1544 ಪುರುಷ ಅಭ್ಯರ್ಥಿಗಳಿಂದ 1771 ನಾಮಪತ್ರಗಳು, 146 ಮಹಿಳಾ ಅಭ್ಯರ್ಥಿಗಳಿಂದ 162 ಉಮೇದುವಾರಿಕೆ ಸಲ್ಲಿಕೆಯಾಗಿವೆ ಮತ್ತು ಒಬ್ಬರು ಇತರರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ 162, ಕಾಂಗ್ರೆಸ್‌ 157, ಜೆಡಿಎಸ್‌ 150, ಎಎಪಿ 138, ಬಿಎಸ್‌ಪಿ 95, ಸಿಪಿಐಎಂ 1, ಎನ್‌ಪಿಪಿಯಿಂದ 2 ನಾಮಪತ್ರಗಳು ಸಲ್ಲಿಕೆಯಾಗಿವೆ. ನೋಂದಾಯಿತ ಪಕ್ಷಗಳೆಂದು ಗುರುತಿಸಿರುವ ಪಕ್ಷಗಳಿಂದ 337 ನಾಮಪತ್ರಗಳನ್ನು ಸಲ್ಲಿಕೆ ಮಾಡಲಾಗಿದೆ. ಇನ್ನು, 892 ನಾಮಪತ್ರಗಳು ಪಕ್ಷೇತರರಿಂದ ಸಲ್ಲಿಕೆಯಾಗಿವೆ.

ಅಧಿಸೂಚನೆ ಹೊರಡಿಸಿದ ದಿನದಿಂದ ಈವರೆಗೆ 3632 ಅಭ್ಯರ್ಥಿಗಳಿಂದ 5102 ನಾಮಪತ್ರಗಳು ಸಲ್ಲಿಕೆಯಾಗಿವೆ. 3327 ಪುರುಷ ಅಭ್ಯರ್ಥಿಗಳಿಂದ 4710, 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಬ್ಬರು ಇತರರು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ 707, ಕಾಂಗ್ರೆಸ್‌ 651, ಜೆಡಿಎಸ್‌ 455, ಎಎಪಿ 373, ಬಿಎಸ್‌ಪಿ 179, ಸಿಪಿಐಎಂ 5, ಎನ್‌ಪಿಪಿ 5 ನಾಮಪತ್ರಗಳನ್ನು ಸಲ್ಲಿಕೆಯಾಗಿವೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಕಾರ್ಯಕರ್ತರು, ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಹಲವು ಅಭ್ಯರ್ಥಿಗಳು 2-3 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸದ ಕುಮಾರಸ್ವಾಮಿ: ಸಿ.ಪಿ.ಯೋಗೇಶ್ವರ್‌

ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಗಳನ್ನು ಆಯೋಗ ಕೈಗೊಂಡಿದೆ. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಸೇರಿದಂತೆ ಒಟ್ಟು ಐವರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. 100 ಮೀಟರ್‌ ವ್ಯಾಪ್ತಿಯಲ್ಲಿ ಮೂರು ವಾಹನಗಳ ಪ್ರವೇಶಕ್ಕೆ ಅನುಮತಿ ಒದಗಿಸಲಾಗಿತ್ತು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ