ಪ್ರತಿ ಶಾಲೆಯಲ್ಲಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್‌: ಡಿ.ಕೆ.ಶಿವಕುಮಾರ್‌

Kannadaprabha News   | Kannada Prabha
Published : Jun 18, 2025, 06:50 AM IST
DK Shivakumar

ಸಾರಾಂಶ

ಮಕ್ಕಳಲ್ಲಿ ಪರಿಸರ ಮತ್ತು ಹವಾಮಾನ ಬದಲಾವಣೆ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದ ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್‌ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು (ಜೂ.18): ಮಕ್ಕಳಲ್ಲಿ ಪರಿಸರ ಮತ್ತು ಹವಾಮಾನ ಬದಲಾವಣೆ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದ ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್‌ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವಿಶ್ವ ಪರಿಸರ ದಿನದ ಅಂಗವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಂಗಳವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಶಾಲಾ ಸಮಯದಲ್ಲಿಯೇ ಪರಿಸರ ಸಂರಕ್ಷಣೆ ಕುರಿತಂತೆ ಅರಿವು ಮೂಡಿಸಬೇಕು.

ಅದಕ್ಕಾಗಿ ಪ್ರತಿ ಶಾಲೆಯಲ್ಲೂ ಕನಿಷ್ಠ 25 ವಿದ್ಯಾರ್ಥಿಗಳನ್ನೊಳಗೊಂಡ ಜಾಗೃತಿ ಕ್ಲಬ್‌ ರಚಿಸಬೇಕು. ಪ್ರಕೃತಿ ಉಳಿಸಲು ದೊಡ್ಡ ಹೋರಾಟದ ಕುರಿತಂತೆ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಆದೇಶಿಸಲಾಗಿದೆ. ಜತೆಗೆ ಒಂದೊಂದು ಶಾಲೆಯೂ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು ಎಂದು ಹೇಳಿದರು. ರಾಜ್ಯದ ಪ್ರತಿ ವಿದ್ಯಾರ್ಥಿಯೂ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ತಿಳಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚಿನ ಮಕ್ಕಳು ಈ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯದ ವಾತಾವರಣವೇ ನಮ್ಮ ಆಸ್ತಿ. ಅದನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಐಷಾರಾಮಿ ಜೀವನಕ್ಕಾಗಿ ಅತಿಯಾಗಿ ಸಂಪನ್ಮೂಲ ಬಳಸುತ್ತಿದ್ದು, ಅದರಿಂದ ಪರಿಸರ ನಾಶವಾಗುತ್ತಿದೆ. ಪ್ರಕೃತಿ ನಮಗೆ ನೀಡಿರುವ ಸಕಲ ಸಂಪನ್ಮೂಲವನ್ನೂ ಹಿತ-ಮಿತವಾಗಿ ಬಳಸಬೇಕು. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆ ಜಗತ್ತಿನ ಮುಂದಿರುವ ದೊಡ್ಡ ಸವಾಲು. ಅರಣ್ಯ ನಾಶ ಹಾಗೂ ನಮ್ಮ ಜೀವನ ಶೈಲಿಯೇ ಅದಕ್ಕೆ ಕಾರಣವಾಗಿದೆ. ಮರಗಳನ್ನು ಹೆಚ್ಚಾಗಿ ಬೆಳೆಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸಿದರೆ ಹವಾಮಾನದಲ್ಲಾಗುತ್ತಿರುವ ಬದಲಾವಣೆಯ ಪರಿಣಾಮ ತಗ್ಗಿಸಬಹುದು ಎಂದು ಹೇಳಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಶಾಸಕ ರಿಜ್ವಾನ್‌ ಅರ್ಷದ್‌ ಇದ್ದರು.

ಸಿಎಸ್‌ಆರ್‌ ಪಬ್ಲಿಕ್‌ ಶಾಲೆ ಆಗದ್ದಕ್ಕೆ ಚಾಟಿ: ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಸಿಎಸ್‌ಆರ್‌ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾರಣದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಡಿ.ಕೆ. ಶಿವಕುಮಾರ್‌, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ