
ಬೆಂಗಳೂರು (ಆ.25): ಆಧುನಿಕ ಕಾಲಘಟ್ಟಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಅಳವಡಿಕೆ ಅಗತ್ಯ. ಆದರೆ, ಎಐ ಅನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಲು ಮಾನವ ಬುದ್ಧಿಶಕ್ತಿ ಅತ್ಯವಶ್ಯಕ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಇಲ್ಲಿನ ರಾಜಾಜಿನಗರದ ಆರ್.ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ -ಅನ್ವಯಿಕೆಗಳು ಮತ್ತು ಪರಿಣಾಮಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಧಾಟಿಸಿ ಮಾತನಾಡಿದರು.
ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಮಿಷನ್ ಲರ್ನಿಂಗ್) ಭವಿಷ್ಯದ ಪರಿವರ್ತಕಗಳು. ಪ್ರೌಢಶಾಲಾ ಶಿಕ್ಷಣದಲ್ಲೇ ಇದರ ಅಳವಡಿಕೆ ಮಕ್ಕಳ ಜ್ಞಾನವರ್ಧನೆಗೆ ಇಂಬು ನೀಡುತ್ತದೆ. ಶಿಕ್ಷಣ ಕ್ಷೇತ್ರದ ಎಲ್ಲಾ ಆಯಾಮಗಳಿಗೂ ಕೃತಕ ಬುದ್ಧಿಮತ್ತೆ (ಎಐ) ವ್ಯಾಪಿಸುತ್ತಿರುವುದರಿಂದ ಈಗಿರುವ ಸಾಂಪ್ರದಾಯಿಕ ತರಗತಿ ಬೋಧನೆ, ಕಲಿಕಾ ವ್ಯವಸ್ಥೆ ಪರಿವರ್ತಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಸಂಶೋಧಕ ಶಿವರಾಂ ಕೆ.ಆರ್., ಆರ್.ವಿ. ಶಿಕ್ಷಣ ಸಂಸ್ಥೆಗಳ ಯೋಜನೆಗಳ ನಿರ್ದೇಶಕ ಪ್ರೊ.ಟಿ.ವಿ. ರಾಜು, ರಾಜಾಜಿನಗರ ಪೇರೆಂಟ್ಸ್ಸ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಮೃತ್ಯುಂಜಯ್, ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ತೇಜಸ್ವಿನಿ ಉಪಸ್ಥಿತರಿದ್ದರು.
ಪಾಲಿಕೆ ಆಯುಕ್ತರ ವಿರುದ್ಧ ದೂರು ದಾಖಲಿಸಿ: ಹು-ಧಾ ಮಹಾನಗರ ವ್ಯಾಪ್ತಿಯಲ್ಲಿನ ಕೆರೆಗಳಿಗೆ ನಿಯಮ ಪಾಲಿಸದೇ ಚರಂಡಿ ನೀರು ಬಿಡುತ್ತಿರುವ ಬಗ್ಗೆ ಪಾಲಿಕೆ ಕಮಿಷನರ್ ಮೇಲೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿ ಅನುಸಾರ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು. ಮಹಾನಗರ ವ್ಯಾಪ್ತಿಯಲ್ಲಿ ಎಷ್ಟು ಕೆರೆಗಳಿವೆ ಮತ್ತು ಎಷ್ಟು ಕೆರೆಗಳು ಮಲೀನವಾಗಿವೆ ಎಂದು ಕೇಳಿದ ಅವರು ಎಸ್‌ಟಿಪಿ (ತ್ಯಾಜ್ಯ ನೀರು ಶುದ್ಧೀಕರಣ ಘಟಕ) ಸ್ಥಾಪನೆ ಮತ್ತು ಕೊಳಚೆ ನೀರು ಮಾರ್ಗ ಬದಲಾವಣೆಗೆ ಪಾಲಿಕೆ ಯಾವ ಕ್ರಮ ವಹಿಸಿದೆ. ಒಂದು ವೇಳೆ ಕ್ರಮ ವಹಿಸದಿದ್ದರೆ, ಬೋರ್ಡ್‌ನಿಂದ ಯಾವ ಕ್ರಮ ವಹಿಸಿದ್ದೀರಿ ಎಂದು ಪ್ರಶ್ನಿಸಿದರು.
ಪ್ಲಾಸ್ಟಿಕ್ ಬಳಕೆ ವಿರುದ್ಧ ಕ್ರಮ ಏನು?: ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಜತೆಗೆ ಜಾನುವಾರುಗಳು ಪ್ಲಾಸ್ಟಿಕ್ ತಿಂದು ಜೀವಕ್ಕೆ ಸಂಚಕಾರ ತಂದುಕೊಳ್ಳುತ್ತಿವೆ. ಹೀಗಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಬಗ್ಗೆ ಜನರಲ್ಲಿ ಜಾಗೃತಿ ಅಭಿಯಾನ ನಿರಂತರಗೊಳಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಸಭೆಗೆ ಮಾಹಿತಿ ನೀಡಿದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ, ಮಹಾನಗರ ವ್ಯಾಪ್ತಿಯಲ್ಲಿ ಒಟ್ಟು 9 ಕೆರೆಗಳು ಮಲೀನವಾಗಿವೆ. ಈ ಬಗ್ಗೆ ಎಚ್ಚರಿಕೆ ನೀಡಿ ಪಾಲಿಕೆಗೆ ನೋಟಿಸ್ ನೀಡಲಾಗಿದೆ. ಅಲ್ಲದೇ, 5 ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ವರ್ಷದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಕಾರರ ವಿರುದ್ಧ ಒಟ್ಟು 252 ಪ್ರಕರಣ ದಾಖಲಿಸಿದ್ದು, ₹3.86 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಸ್ಥಳೀಯ ಪಾಲಿಕೆ ಅಧಿಕಾರಿಗಳಿಂದ ದಂಡ ವಿಧಿಸಲಾಗುತ್ತಿದೆ. ಹೀಗಾಗಿ ನಿರೀಕ್ಷಿತ ಮಟ್ಟದ ದಂಡ ಬಂದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.