
ಬೆಂಗಳೂರು (ನ.13): ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪದೇಪದೆ ಹುಲಿ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ಹೆಚ್ಚುವರಿ ಕ್ಯಾಮೆರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ ನಿಗಾವಹಿಸಬೇಕು. ಹುಲಿ ಪ್ರತ್ಯಕ್ಷವಾದ ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕಾಡಂಚಿನ ಪ್ರದೇಶಗಳಲ್ಲಿ ಹುಲಿ ಸೇರಿ ವನ್ಯಜೀವಿಗಳ ದಾಳಿ ಹೆಚ್ಚುತ್ತಿವೆ.
ಅದನ್ನು ತಡೆಯಲು ಜನ ವಸತಿ ಪ್ರದೇಶ, ರೈತರ ಜಮೀನುಗಳ ಬಳಿ ಕ್ಯಾಮರಾ ಅಳವಡಿಸಿ ವನ್ಯಜೀವಿಗಳ ಸಂಚಾರದ ಕುರಿತು ನಿಗಾವಹಿಸಬೇಕು. ಥರ್ಮಲ್ ಕ್ಯಾಮರಾ ಅಳವಡಿಸಿ ನಿಗಾ ಇಡುವ ಜತೆಗೆ ಗಸ್ತು ಹೆಚ್ಚಳ ಮಾಡಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜೀವ ಹಾನಿ, ಬೆಳೆ ಹಾನಿ ತಪ್ಪಿಸಬೇಕು ಎಂದರು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಇತರರಿದ್ದರು.
ವನ್ಯಜೀವಿ ಕಂಡರೆ 1926ಕ್ಕೆ ಕರೆ ಮಾಡಿ: ಗ್ರಾಮಗಳಲ್ಲಿ ವನ್ಯಜೀವಿ ಕಂಡು ಬಂದರೆ ಸ್ಥಳೀಯರು ಕೂಡಲೇ 1926 ಸಂಖ್ಯೆಗೆ ಕರೆ ಮಾಡಿ, ದೂರು ದಾಖಲಿಸಬೇಕು. ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಕನಕದಾಸರು ತಮ್ಮ ಕಿರ್ತನೆಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದಿದ್ದಾರೆ ಎಂದು ತಿಳಿಸಿದರು. ಸಮಾಜದ ಅಂಕುಡೊಂಕು, ಅಸಮಾನತೆ ಜಾತಿ ವ್ಯವಸ್ಥೆಯನ್ನು ತಮ್ಮ ಕಿರ್ತನೆಗಳ ಮೂಲಕ ಕನಕದಾಸರು ಹೋಗಲಾಡಿಸಿದರು. ಹಳ್ಳಿಹಳ್ಳಿಗೆ ಸಂಚಾರ ಮಾಡುವುದರ ಮೂಲಕ ಜನರಿಗೆ ಸತ್ಯಾಸತ್ಯತೆ ಬಗ್ಗೆ ಅರಿವು ಮೂಡಿಸಿದ್ದಾರೆ. ಮಹಾತ್ಮರು ಯಾವುದೇ ಒಂದು ಜಾತಿಗೆ ಸಂಬಂಧಿಸಿದ ವರಲ್ಲ, ಅವರು ಇಡೀ ಸಮಾಜದ ಏಳಿಗೆಗೆ ದುಡಿವುದರ ಮೂಲಕ ಸಮಾಜದಲ್ಲಿ ಸುಧಾರಣೆ ತಂದು ಶಾಂತಿ ಸಮಾನತೆ, ಭಾತೃತ್ವ ಸಾರಿದ್ದಾರೆ.
ನಮ್ಮ ಸರ್ಕಾರ ರೈತರ ಪರವಾಗಿದ್ದು, ಆದಷ್ಟು ಬೇಗ ಸರ್ಕಾರದಿಂದ ಘೋಷಿಸಲ್ಪಟ ಹೆಚ್ಚುವರಿ 8500 ರು.ನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದರು. ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಮಾತನಾಡಿ, ಕನಕದಾಸರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಿ, ಜಾತಿ, ಕುಲ, ಮತ ಎನ್ನದೆ ಒಂದಾಗಿ ಬಾಳಬೇಕು ಎಂದರು. ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಜಾತಿ, ಕುಲಕ್ಕಿಂತ ಮಾನವ ಧರ್ಮ ದೊಡ್ಡದು ಎಂದು ವಿಶ್ವಕ್ಕೆ ಸಂದೇಶ ಸಾರಿದ ಕನಕದಾಸರು ನಮ್ಮೆಲ್ಲರಿಗೆ ಮಾದರಿಯಾಗಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.