ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ

Published : Sep 10, 2025, 07:34 PM IST
ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ

ಸಾರಾಂಶ

ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದರು.

ಶಿವಮೊಗ್ಗ (ಸೆ.10): ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದರು. ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ಮುಸಲ್ಮಾನ್ ರಾಜ್ಯ ಮಾಡಲು ಹೊರಟಿದೆ. ಭದ್ರಾವತಿಯ ಶಾಸಕ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದು ಸುಳ್ಳು, ತನಿಖೆ ಆಗಲಿ ಎಂದು ಹೇಳಿಕೆ ನೀಡಿದ್ದಾರೆ. ಈ ರೀತಿಯ ಓಲೈಕೆಯಿಂದಲೇ ಇಂದು ಈ ರೀತಿ ಕೂಗುತ್ತೀರೋದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳು ಗಣೇಶೋತ್ಸವ ಮೆರವಣಿಗೆ ಮಾಡಿದರೆ ಮಸೀದಿಯಿಂದ ಕಲ್ಲು ಹೊಡಿತಾರೆ. ರಾಷ್ಟ್ರ ಭಕ್ತರ ಜೊತೆ ಪೊಲೀಸರಿಗೂ ಕಲ್ಲು ಹೊಡೆಯುತ್ತಾರೆ. ಹುಬ್ಬಳ್ಳಿಯಲ್ಲಿ ನಾಲ್ಕು ಜನ ಯುವಕರಿಗೆ ಚಾಕು ಇರಿದಿದ್ದಾರೆ. ರಾಜ್ಯದ ಮುಸಲ್ಮಾನರು ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದರು.

ಮಂಡ್ಯದ ಹೆಣ್ಣು ಮಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ನಾಲ್ಕೈದು ಜನ ಮುಸ್ಲಿಮರನ್ನ ಬಂಧನ ಮಾಡಿದರೆ ಸಾಕಾ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಗಂಡುಗಲಿ ರೀತಿ ನಿರ್ಧಾರ ಕೈಗೊಳ್ಳಬೇಕಿತ್ತು. ಸಿಎಂ ಹಾಗೂ ಗೃಹ ಸಚಿವರು ಇವರು ಮುಸಲ್ಮಾನರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.

ಹಿಂದೂಗಳು ಜಾತಿ ಜಾತಿ ಅಂತಾರೇ. ಮುಸ್ಲಿಮರು ಒಟ್ಟಾಗಿ ನಮಗೆ ವೋಟ್ ಕೊಡ್ತಾರೆ ಎಂದು ಕಾಂಗ್ರೆಸ್ ಬೆಂಬಲ ಕೊಡುತ್ತಿದೆ. ರಾಜ್ಯದಲ್ಲಿ ಮುಸಲ್ಮಾನರ ಸಂತೃಪ್ತಿ ಮಾಡಲು ಸರ್ಕಾರ ಹೊರಟಿದೆ. ಅದಕ್ಕಾಗಿಯೇ ಹೀಗೆ ರಾಷ್ಟ್ರದ್ರೋಹಿ ಘೋಷಣೆ ಕೂಗ್ತಾರೆ. ತಕ್ಷಣವೇ ಕಾಂಗ್ರೆಸ್ ಸರ್ಕಾರ ಜಾಗೃತಿಯಾಗಬೇಕು. ಪಾಕಿಸ್ತಾನ ಜಿಂದಾಬಾದ್ ಕೂಗಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಸಾಧ್ಯವಾದ್ರೇ ಅವರನ್ನು ಗಲ್ಲಿಗೇರಿಸಬೇಕು ಎಂದು ಕಿಡಿಕಾರಿದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ, ಹುಟ್ಟುತ್ತೇನೆ ಎಂಬ ಭದ್ರಾವತಿ ಶಾಸಕ ಸಂಗಮೇಶ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಾಬರಿಗಾದ್ರೂ ಹುಟ್ಟಲಿ, ಅವರು ಯಾರಿಗಾದ್ರೂ ಹುಟ್ಟಲಿ ಎಂದು ಹರಿಹಾಯ್ದರು. ಮಂಡ್ಯದ ಗಲಾಟೆ ಹಾಗೂ ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಖಂಡಿಸಿ, ರಾಷ್ಟ್ರಭಕ್ತರ ಬಳಗದಿಂದ ಶಿವಮೊಗ್ಗ ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!