
ಬೆಂಗಳೂರು (ಜ.15): ನಗರದಲ್ಲಿ ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಸುಗಮ ಸಂಚಾರ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಹೈಕೋರ್ಟ್ ಆದೇಶದ ಮೇರೆಗೆ ಪಾದಚಾರಿ ಮಾರ್ಗಗಳ ವ್ಯಾಪಾರಿಗಳ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಂಚಾರಕ್ಕೆ ಸಮಸ್ಯೆ ಆಗದಂತೆ ಬೀದಿ ಬದಿ ವ್ಯಾಪಾರಿಗಳು ಒಂದು ಬದಿಗೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಿದ್ಧವಿದ್ದೇವೆ. ಅವರಿಗೆ ಹಣಕಾಸು ಸಹಾಯವನ್ನೂ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಜಯನಗರದಲ್ಲಿ ಬೀದಿ ವ್ಯಾಪಾರಿಗಳ ತೆರವು ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಾದಚಾರಿಗಳು ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ವ್ಯಾಪಾರ ಮಾಡಿದರೆ ಅನುಕೂಲ ಮಾಡಬಹುದು. ಆದರೆ ಪಾದಚಾರಿ ಮಾರ್ಗದಲ್ಲೇ ಶಾಶ್ವತ ಟೆಂಟ್ ಹಾಕಿಕೊಂಡರೆ ಪಾದಚಾರಿಗಳು ಎಲ್ಲಿ ಓಡಾಡಬೇಕು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರ ರೈತರ ಬೆನ್ನಿಗೆ ನಿಂತಿದೆ: ಸಚಿವ ಡಿ.ಸುಧಾಕರ್
ಜನರಿಗೆ ಸಮಸ್ಯೆ ಆಗದ ಹಾಗೆ ವ್ಯಾಪಾರ ಮಾಡಿದರೆ ನೆರವು: ಬೀದಿ ಬದಿ ವ್ಯಾಪಾರಿಗಳು ಮುಖ್ಯ ರಸ್ತೆಗಳ ಪಾದಚಾರಿ ಮಾರ್ಗದಲ್ಲೇ ವ್ಯಾಪಾರ ಮಾಡುತ್ತಾರೆ. ಅಡ್ಡ ರಸ್ತೆಗಳಲ್ಲಿನ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡಲು ಮನೆಗಳ ಮಾಲೀಕರು ಅವಕಾಶ ನೀಡುವುದಿಲ್ಲ. ಜನರಿಗೆ ಸಮಸ್ಯೆಯಾಗದ ಕಡೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಆರ್ಥಿಕ ಸಹಾಯ ಮಾಡಬಹುದು ಎಂದರು.
ಮಂಡಳಿ ಮೊದಲ ಪಟ್ಟಿ: ನಿಗಮ-ಮಂಡಳಿ ನೇಮಕದ ಮೊದಲ ಪಟ್ಟಿ ಜ.14ರ ಬಳಿಕ ಪ್ರಕಟಿಸಲಾಗುವುದು. ಜತೆಗೆ ಈ ನಿಗಮ-ಮಂಡಳಿಗ ಅಧ್ಯಕ್ಷರು, ಸದಸ್ಯರ ಅಧಿಕಾರ ಅವಧಿ ಎರಡು ವರ್ಷಗಳಿಗೆ ಸೀಮಿತವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಿಂಗಳಾಂತ್ಯದ ಒಳಗಾಗಿ ಎಲ್ಲಾ ರೀತಿಯ ನೇಮಕಾತಿಗಳನ್ನು ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ನಿಗಮ-ಮಂಡಳಿ ನೇಮಕದ ಬಗ್ಗೆ ಹಲವು ಹಂತದಲ್ಲಿ ಚರ್ಚಿಸಿ ಸಂಭವನೀಯರ ಪಟ್ಟಿ ಅಂತಿಮಗೊಳಿಸಲಾಗಿದೆ.
ರಾಮನ ಜನ್ಮಪತ್ರ ಕೇಳಿದ್ದ ಕಾಂಗ್ರೆಸ್‌ಗೆ ಜ್ಞಾನೋದಯ: ಎಂ.ಪಿ.ರೇಣುಕಾಚಾರ್ಯ ಲೇವಡಿ
ಜ.14ರ ಬಳಿಕ ನಿಗಮ ಮಂಡಳಿಗಳ ನೇಮಕಾತಿಯ ಮೊದಲ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು. ಇನ್ನು ಹೆಚ್ಚು ಮಂದಿ ಕಾರ್ಯಕರ್ತರು, ಮುಖಂಡರಿಗೆ ಅವಕಾಶ ನೀಡುವ ಸಲುವಾಗಿ ನಿಗಮ ಮಂಡಳಿಗಳ ಅಧ್ಯಕ್ಷರು, ಸದಸ್ಯರುಗಳಿಗೆ 2 ವರ್ಷಗಳ ಕಾಲಾವಧಿ ನೀಡಲಾಗುತ್ತದೆ. ಇದರಿಂದ ಹೆಚ್ಚು ಕಾರ್ಯಕರ್ತರಿಗೆ ಅವಕಾಶ ದೊರೆಯಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.