ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾದರೂ ನನ್ನ ಬೆಂಬಲ: ಸಚಿವ ಈಶ್ವರ್‌ ಖಂಡ್ರೆ

Published : Apr 08, 2025, 07:07 AM ISTUpdated : Apr 08, 2025, 07:32 AM IST
ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾದರೂ ನನ್ನ ಬೆಂಬಲ: ಸಚಿವ ಈಶ್ವರ್‌ ಖಂಡ್ರೆ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಯಾರಿಗೆ ಅವಕಾಶ ಕೊಟ್ಟರೂ ಬೆಂಬಲಿಸುತ್ತೇವೆ. ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. 

ಬೆಂಗಳೂರು (ಏ.08): ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಯಾರಿಗೆ ಅವಕಾಶ ಕೊಟ್ಟರೂ ಬೆಂಬಲಿಸುತ್ತೇವೆ. ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಅಲ್ಲದೆ ಇನ್ನು ನಾನು ಹಾಗೂ ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರಾಗಿದ್ದವರು. ನಮ್ಮ ನಡುವೆ ಸಮನ್ವಯತೆ ಇದೆ. ಯಾರಿಗೆ ಅವಕಾಶ ನೀಡಿದರೂ ಬೆಂಬಲಿಸುತ್ತೇವೆ ಎಂದೂ ಹೇಳಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ವರಿಷ್ಠರನ್ನು ಆಗಾಗ ಭೇಟಿ ಮಾಡುತ್ತೇನೆ. ಪ್ರತಿ ಬಾರಿ ಭೇಟಿ ಆದಾಗ ವಿಶೇಷ ಇರುತ್ತದೆ. ಈಗಲೂ ಅಭಿವೃದ್ಧಿ ವಿಚಾರಗಳನ್ನು ಮಾತನಾಡಿದ್ದೇನೆ. ಅದನ್ನು ಬಿಟ್ಟು ಬೇರೇನೂ ಚರ್ಚೆ ಮಾಡಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಪ್ರಶ್ನೆಗೆ, ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಮುಂದೆ ಹೈಕಮಾಂಡ್‌ ಈ ಬಗ್ಗೆ ತೀರ್ಮಾನ ಮಾಡಲಿದೆ. ನಾವು ಯಾವುದೇ ಬೇಡಿಕೆಯನ್ನೂ ಹೈಕಮಾಂಡ್‌ ಮುಂದೆ ಇಟ್ಟಿಲ್ಲ. ಇನ್ನು ನಾನು ಹಾಗೂ ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರಾಗಿದ್ದವರು. 

ನಮ್ಮ ನಡುವೆ ಸಮನ್ವಯತೆ ಇದೆ. ಯಾರಿಗೆ ಅವಕಾಶ ನೀಡಿದರೂ ಬೆಂಬಲಿಸುತ್ತೇವೆ. ಎಲ್ಲರೂ ಸಹ ಇದನ್ನೇ ಹೇಳಿದ್ದಾರೆ ಎಂದು ಹೇಳಿದರು. ಬಿಜೆಪಿ ಜನಾಕ್ರೋಶ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ನೈತಿಕ ಕಳಕಳಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು. ಪೆಟ್ರೊಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿದೆ. ಕೇಂದ್ರದಿಂದ ಯಾವುದೇ ಬೆಲೆ ಇಳಿಕೆ ಆಗಿಲ್ಲ. ಅದನ್ನು ಖಂಡಿಸದೆ ಇಲ್ಲಿ ನಾಟಕ ಮಾಡಿದರೆ ಪ್ರಯೋಜನವಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷತೆಗೆ ಸತೀಶ್‌, ಖಂಡ್ರೆ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ?

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!: ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಹಾಗೂ ಸತೀಶ್‌ ಜಾರಕಿಹೊಳಿ ಹೆಸರು ಸೂಚಿಸಿದ್ದಾರೆ ಎಂದು ಏ.4ರಂದು ‘ಕನ್ನಡಪ್ರಭ’ ಮಾತ್ರ ವರದಿ ಪ್ರಕಟಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!