ಜಾತಿ ಜನಗಣತಿ ವರದಿಯಲ್ಲೇನಿದೆ ಎಂದು ವಿರೋಧ ಮಾಡೋರಿಗೂ ಗೊತ್ತಿಲ್ಲ: ಸಿದ್ದರಾಮಯ್ಯ

Published : Nov 24, 2023, 04:45 AM IST
ಜಾತಿ ಜನಗಣತಿ ವರದಿಯಲ್ಲೇನಿದೆ ಎಂದು ವಿರೋಧ ಮಾಡೋರಿಗೂ ಗೊತ್ತಿಲ್ಲ: ಸಿದ್ದರಾಮಯ್ಯ

ಸಾರಾಂಶ

ಜಾತಿ ಜನಗಣತಿ ವರದಿ ಕುರಿತು ರಾಜ್ಯದಲ್ಲಿ ಶುರುವಾಗಿರುವ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಕಿಡಿಕಾರಿದ್ದಾರೆ. ಜಾತಿ ಗಣತಿ ವರದಿ ಸಲ್ಲಿಕೆಯಾಗುವ ಮೊದಲೇ ಅದರ ಕುರಿತು ರಾಜ್ಯದಲ್ಲಿ ಚರ್ಚೆ ಶುರುವಾಗಿದೆ. 

ಬಾಗಲಕೋಟೆ (ನ.24): ಜಾತಿ ಜನಗಣತಿ ವರದಿ ಕುರಿತು ರಾಜ್ಯದಲ್ಲಿ ಶುರುವಾಗಿರುವ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಕಿಡಿಕಾರಿದ್ದಾರೆ. ಜಾತಿ ಗಣತಿ ವರದಿ ಸಲ್ಲಿಕೆಯಾಗುವ ಮೊದಲೇ ಅದರ ಕುರಿತು ರಾಜ್ಯದಲ್ಲಿ ಚರ್ಚೆ ಶುರುವಾಗಿದೆ. ವರದಿಯಲ್ಲೇನಿದೆ ಎಂಬುದು ಅದನ್ನು ಬೇಡ ಎನ್ನುತ್ತಿರುವವರಿಗೂ ಗೊತ್ತಿಲ್ಲ. ಸುಮ್ಮನೆ ಊಹೆಯ ಮೇಲೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರವಾಗಿ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ. 

ಹಾಗಾಗಿ ಅದರ ಕುರಿತು ವರದಿ ಸಲ್ಲಿಕೆಯಾದ ನಂತರ ಮಾತನಾಡೋಣ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇದೇ ವೇಳೆ ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೆ ವರದಿಯಲ್ಲಿ ಏನಿದೆ ಎಂಬುದು ಗೊತ್ತಿದೆಯೇ? ಯಾರೇ ಆಗಲಿ ವಿಷಯ ಗೊತ್ತಿಲ್ಲದೆ ಮಾತನಾಡಬಾರದು. ಅವರದ್ದು ರಾಜಕೀಯ ಹೇಳಿಕೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಜಾತಿಗಣತಿ ವರದಿ ಸ್ವೀಕರಿಸಿದ್ದಾರೆ. 

ಸಮಾಜ ಒಡೆಯುವುದು ಕಾಂಗ್ರೆಸ್ ಸರ್ಕಾರದ ಉದ್ದೇಶ: ಎಚ್.ಡಿ.ಕುಮಾರಸ್ವಾಮಿ

ಹಾಗಿದ್ದರೆ ಅವರು ಸಮಾಜ ಒಡೆದಿದ್ದಾರೆಯೇ? ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು. ಇನ್ನು, ಜಾತಿ ಜನಗಣತಿ ಮೂಲ ವರದಿ ಕಳೆದುಹೋಗಿದೆ ಎಂಬ ಹಿಂದುಳಿದ ವರ್ಗಗಳ ಆಯೋಗದ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ, ಅವರನ್ನು ಕರೆದು ಮಾತನಾಡುತ್ತೇನೆ ಎಂದಷ್ಟೇ ಪ್ರತಿಕ್ರಿಯಿಸಿದರು.

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ: ಅರವಿಂದ್ ಲಿಂಬಾವಳಿ ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಮಾತನಾಡಿ, ವಿ.ಸೋಮಣ್ಣ 6ನೇ ತಾರೀಖಿನ ನಂತರ ತಮ್ಮ ಅಭಿಪ್ರಾಯ ತಿಳಿಸುವ ಬಗ್ಗೆ ಹೇಳಿದ್ದಾರೆ. ಬಿಜೆಪಿಯಲ್ಲಿ ವಿಜಯೇಂದ್ರನನ್ನು ಅಧ್ಯಕ್ಷ ಹಾಗೂ ಆರ್.ಅಶೋಕ್ ರನ್ನು ಪ್ರಕ್ಪದ ನಾಯಕರಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಮುಂದೆ ಏನಾಗುತ್ತದೆ ಎಂಬುವುದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತಿಕೊಳ್ಳುತ್ತದೆಯೋ ಕಾದು ನೋಡಬೇಕಿದೆ. ಬೆಂಕಿ ಅಂತೂ ಹತ್ತಿಕೊಂಡಿದೆ ಎಂದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಅಧಿಕಾರದಲ್ಲಿರುವುದು ಅನುಮಾನ: ಆರ್‌.ಅಶೋಕ್‌

ಪಕ್ಷದ ಸಿದ್ಧಾಂತಕ ಒಪ್ಪಿ ಬರೋವ್ರಿಗೆ ಸ್ವಾಗತ: ನಾವು ಯಾರನ್ನೂ ಕಾಂಗ್ರೆಸಿಗೆ ಬನ್ನಿ ಎಂದು ಕರೆಯಲ್ಲ. ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನಮ್ಮ ನಾಯಕತ್ವ ಒಪ್ಪಿಕೊಂಡು ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ. ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತ ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!