ಶೆಟ್ಟರ್ ಬೇರೆ ಟೀಂ ಸೇರಿದ್ರೂ ಈ ಸಲವೂ ಕಪ್‌ ನಮ್ದೆ; ಪ್ರಲ್ಹಾದ್ ಜೋಶಿ

By Kannadaprabha News  |  First Published Apr 25, 2023, 2:47 AM IST

ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪಕ್ಷ ತೊರೆದಿರುವುದರಿಂದ ಬಿಜೆಪಿಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಹಳೇ ಪ್ಲೇಯರ್‌ ರಿಟೈರ್ಡ್‌ ಆಗಿ ಅಂದ್ವಿ. ಆದರೆ, ಅವರು ಮತ್ತೊಂದು ಟೀಮ್‌ನಲ್ಲಿ ಆಡುವುದಕ್ಕೆ ಹೋಗಿದ್ದಾರೆ. ಇದರಿಂದ ನಮ್ಮ ಟೀಮ್‌ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ ಕಪ್‌ ನಮ್ಮದೇ. ಸೆಂಟ್ರಲ್‌ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ಜೋಶಿ ಭರವಸೆ ವ್ಯಕ್ತಪಡಿಸಿದರು.


ಹುಬ್ಬಳ್ಳಿ (ಏ.25) : ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪಕ್ಷ ತೊರೆದಿರುವುದರಿಂದ ಬಿಜೆಪಿಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಹಳೇ ಪ್ಲೇಯರ್‌ ರಿಟೈರ್ಡ್‌ ಆಗಿ ಅಂದ್ವಿ. ಆದರೆ, ಅವರು ಮತ್ತೊಂದು ಟೀಮ್‌ನಲ್ಲಿ ಆಡುವುದಕ್ಕೆ ಹೋಗಿದ್ದಾರೆ. ಇದರಿಂದ ನಮ್ಮ ಟೀಮ್‌ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ ಕಪ್‌ ನಮ್ಮದೇ. ಸೆಂಟ್ರಲ್‌ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ಜೋಶಿ(Pralhad joshi) ಭರವಸೆ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯವನ್ನು ಬಿಜೆಪಿ ಎಂದಿಗೂ ಅಸ್ತ್ರವಾಗಿ ಬಳಸಿಕೊಂಡಿಲ್ಲ. ನಾವು ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಯಾವಾಗಲೂ ಹೇಳಿಲ್ಲ. ಕಾಂಗ್ರೆಸ್ಸಿನವರಿಗೆ, ರಾಹುಲ್‌ ಗಾಂಧಿಗೆ ಪ್ರೀತಿ ಇದ್ದರೆ ಮುಂದೆ ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಘೋಷಣೆ ಮಾಡಲಿ ನೋಡೋಣ. ನಾವು ಈಗಾಗಲೇ ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಚುನಾವಣೆಯ ನಂತರ ನಮ್ಮ ಮುಖ್ಯಮಂತ್ರಿ ಯಾರು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಬಿ.ಎಸ್‌. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಈ ಚುನಾವಣೆಗೆ ಹೋಗ್ತೀವಿ. ಖಂಡಿತಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Tap to resize

Latest Videos

ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಪ್ರಲ್ಹಾದ ಜೋಶಿ

ಆಪರೇಶನ್‌ ಕಮಲ:

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul gandhi) ಆಪರೇಶನ್‌ ಕಮಲ ಮಾಡಲು ಬಿಡುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್‌ ಗಾಂಧಿ ಸರಿಯಾಗಿಯೇ ಹೇಳಿದ್ದಾರೆ. ನಾವೇ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತ. ಹೀಗಾಗಿ ಆಪರೇಷನ್‌ ಕಮಲ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತರಿಗೆ ಅವಮಾನ ಮಾಡಿದ್ದಾರೆ. ಈವರೆಗೂ ಕ್ಷಮೆ ಕೇಳಿಲ್ಲ. ಈಗಲಾದರೂ ಜನರ ಮುಂದೆ ಬಹಿರಂಗವಾಗಿ ಕ್ಷಮೆ ಕೋರಲಿ ಎಂದ ಅವರು, ಈ ಕುರಿತು ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.

 

ನನ್ನ ವಿಚಾರದಲ್ಲಿ ಪ್ರಲ್ಹಾದ್ ಜೋಶಿ ಗಟ್ಟಿಯಾಗಿ ಧ್ವನಿ ಎತ್ತಲಿಲ್ಲ : ಶೆಟ್ಟರ್

29ಕ್ಕೆ ಕುಡಚಿಗೆ ಪ್ರಧಾನಿ:

ಏ. 29ರಂದು ಪ್ರಧಾನಿ ಮೋದಿ(Narendra Modi) ಕುಡಚಿಗೆ ಬರಲಿದ್ದು, ಅಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಇದಾದ ಮೇಲೆ ಈ ಭಾಗದಲ್ಲೂ ಇನ್ನೊಂದು ಕಾರ್ಯಕ್ರಮ ನೀಡುವಂತೆ ವಿನಂತಿ ಮಾಡಿದ್ದೇನೆ. ಬೆಳಗಾವಿ ಜಿಲ್ಲೆಗೆ ಮೋದಿ ಇನ್ನೊಂದು ಕಾರ್ಯಕ್ರಮ ಕೊಡಲು ವಿನಂತಿಸಿದ್ದೇನೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಾ ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಿತ್ತೂರ ಕರ್ನಾಟಕ ಭಾಗದಲ್ಲಿ ಮತದಾರರ ಒಲವು ಬಿಜೆಪಿ ಪರ ಇದ್ದು, ಉತ್ತರಾಖಂಡಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸುವುರೊಂದಿಗೆ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುತ್ತೇವೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

click me!