ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಮೋದಿ ಹಾಗೂ ಶಾ ರಾಜ್ಯಕ್ಕೆ ಆಗಮಿಸಿದಾಗೆಲ್ಲ ರಾಜ್ಯದಲ್ಲಿ ಸಾವಿರಾರು ಕೋಟಿ ರು. ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ (ಫೆ.27): ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಮೋದಿ ಹಾಗೂ ಶಾ ರಾಜ್ಯಕ್ಕೆ ಆಗಮಿಸಿದಾಗೆಲ್ಲ ರಾಜ್ಯದಲ್ಲಿ ಸಾವಿರಾರು ಕೋಟಿ ರು. ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿ, ಕಳೆದ ಬಾರಿ ನಾರಾಯಣಪುರ ನೀರಾವರಿ ಯೋಜನೆ ಉದ್ಘಾಟನೆಗೆ ಬಂದಿದ್ದರು. ಬಂಜಾರ ಜನಾಂಗಕ್ಕೆ ಹಕ್ಕುಪತ್ರ ವಿತರಣೆಗೆ, ಕಾಪ್ಟರ್ ಕಾರ್ಖಾನೆ ಉದ್ಘಾಟನೆ, ಜಲಜೀವನ್ ಮಿಷನ್ ಉದ್ಘಾಟನೆ ಹೀಗೆ ಪ್ರತಿಸಲ ಬಿಜೆಪಿ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಚಾಲನೆಗೆ ಬಂದಿದ್ದಾರೆ. ಈಗ ಮತ್ತೆ ಬೆಳಗಾವಿಯಲ್ಲಿ ರೈಲ್ವೆ ನಿಲ್ದಾಣ ಮತ್ತು ರೈಲ್ವೆ ಲೈನ್ ಲೋಕಾರ್ಪಣೆಗೆ ಬರಲಿದ್ದಾರೆ ಎಂದರು.
ಈ ಬಾರಿ ಬಜೆಟ್‌ನಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಅತಿ ಹೆಚ್ಚು ನೆರವು ಬಂದಿದೆ. ಅದಕ್ಕೆ ಸರಿ ಸಮಾನವಾಗಿ ರಾಜ್ಯ ಬಜೆಟ್‌ನಲ್ಲಿಯೂ ಅನುದಾನ ಇರಿಸಿದ್ದೇವೆ. ಈಗ ರಾಜ್ಯದಲ್ಲಿ ನಡೆಯುತ್ತಿರೋದು ಬಿಜೆಪಿ ಸರ್ಕಾರದ ಅಭಿವೃದ್ಧಿ ಪರ್ವ ಎಂದು ಹೇಳಿದರು. ರಾಜ್ಯದ ಜನ ಈಗಾಗಲೇ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಪಕ್ಷದ ಎಲ್ಲ ನಾಯಕರನ್ನು ಪರೀಕ್ಷಿಸಿ ಕೈಬಿಟ್ಟಿದ್ದಾರೆ. ಹೀಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಇದೇ ವೇಳೆ ಬೊಮ್ಮಾಯಿ ವ್ಯಂಗ್ಯವಾಡಿದರು. ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಯಾರು ಮರೆತಿಲ್ಲ. ಕಾಂಗ್ರೆಸ್ ಮರೆತಿರಬಹುದು. ಆದರೆ, ಮತದಾರರು ಮರೆತಿಲ್ಲ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.
undefined
ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರೋ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬದ್ಧ: ನಾನು ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಸಸಾಲಟ್ಟಿಯ ಶ್ರೀ ಶಿವಲಿಂಗೇಶ್ವರ ಏತ ನೀರಾವರಿ ಸೇರಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷ್ಣಾ ಜಲಾನಯನ ಕಾರ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಕೇವಲ ಭರವಸೆಗಳನ್ನೇ ಹರಿಸಿ ಇಲ್ಲಿನ ಜನತೆಗೆ ಮೋಸ ಮಾಡಿದ್ದಾರೆ. ಯುಕೆಪಿಗೆ .50 ಸಾವಿರ ಕೋಟಿ ನೀಡುವುದಾಗಿ ಬೊಗಳೆ ಬಿಟ್ಟವರು ನೀಡಿದ್ದ ಕಾಸೆಷ್ಟು ಎಂಬುದನ್ನು ಮೊದಲು ಮನವರಿಕೆ ಮಾಡಿಕೊಳ್ಳಲಿ. ಬರೀ ದುರಹಂಕಾರ ಮತ್ತು ಉಡಾಫೆ ಮಾತಾಡೋದನ್ನು ಬಿಟ್ಟು ಕೆಲಸ ಮಾಡಬೇಕು. ಅಂದಾಗ ಮಾತ್ರ ಜನ, ನಾಡು ಮೆಚ್ಚುವುದು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ವಿಧಾನಸೌಧದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಪ್ರತಿಮೆ ಅನಾವರಣ
ದಾರಿ ತಪ್ಪಿಸುವ ಕೆಲಸ ದೇವರು ಮೆಚ್ಚನು: ದುಡ್ಡೇ ದೊಡ್ಡಪ್ಪವೆಂಬ ಶಾಸ್ತ್ರವನ್ನು ಅಳಿಸಿ ಹಾಕುವ ಮೂಲಕ ಬಿಜೆಪಿ ಸರ್ಕಾರ ದುಡಿಮೆಯೇ ದೊಡ್ಡಪ್ಪವೆಂದು ತೋರಿಸಿಕೊಟ್ಟು ಅದರಂತೆ ಕೆಲಸ ಮಾಡಿದೆ. ಹುಸಿ ಭರವಸೆ ನೀಡಿ, ದಾರಿ ತಪ್ಪಿಸುವ ಕಾರ್ಯವನ್ನು ದೇವರು ಎಂದಿಗೂ ಮೆಚ್ಚುವುದಿಲ್ಲ. ಕಳೆದ ಮೂರು ಅವಧಿಯ ಸಿದ್ದು ಸವದಿ ಆಡಳಿತದಲ್ಲಿನ ಅಭಿವೃದ್ಧಿ ಬಗ್ಗೆ ಪ್ರಶ್ನಿಸುವ ಕಾಂಗ್ರೆಸ್ ನಾಯಕರು ಉಳಿದ 60 ವರ್ಷಗಳ ಕಾಲ ತಾವೇ ಆಡಳಿತದಲ್ಲಿದ್ದರೂ ಅಭಿವೃದ್ಧಿ ಮಾಡದೇ ಉತ್ತರ ಕರ್ನಾಟಕದ ಪ್ರಗತಿಗೆ ಶ್ರಮಿಸದೇ ಏನು ಕಡಿದು ಕಟ್ಟೆಹಾಕಿದ್ದಾರೆ? ಎಂಬುವುದನ್ನು ಕ್ಷೇತ್ರದ ಜನತೆಗೆ ಉತ್ತರಿಸಬೇಕೆಂದು ಆಗ್ರಹಿಸಿದ ಸಿಎಂ ನಾನು ಕೆಲಸ ಮಾಡಿ ಭಾಷಣದಲ್ಲಿ ಮಾತಾಡುತ್ತೇನೆ. ಭಾಷಣಗಳೇ ಕೆಲಸವಲ್ಲವೆಂದು ವಿಪಕ್ಷಗಳನ್ನು ಸಿಎಂ ಬೊಮ್ಮಾಯಿ ತಿವಿದರು.