ಎಲ್ರೂ ‘ನಾನೇ ಸಿಎಂ’ ಎನ್ನುತ್ತಿರೋದು 2028ರ ಚುನಾವಣೆಗೆ: ಸಚಿವ ರಾಮಲಿಂಗಾರೆಡ್ಡಿ

Published : Sep 12, 2024, 05:18 PM IST
ಎಲ್ರೂ ‘ನಾನೇ ಸಿಎಂ’ ಎನ್ನುತ್ತಿರೋದು 2028ರ ಚುನಾವಣೆಗೆ: ಸಚಿವ ರಾಮಲಿಂಗಾರೆಡ್ಡಿ

ಸಾರಾಂಶ

ತಾವೂ ಮುಖ್ಯಮಂತ್ರಿ ಆಗಬೇಕು ಎಂದು ಕೆಲ ಹಿರಿಯರು ಸೇರಿದಂತೆ ಏಳೆಂಟು ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. 

ಶನಿವಾರಸಂತೆ (ಕೊಡಗು) (ಸೆ.12): ತಾವೂ ಮುಖ್ಯಮಂತ್ರಿ ಆಗಬೇಕು ಎಂದು ಕೆಲ ಹಿರಿಯರು ಸೇರಿದಂತೆ ಏಳೆಂಟು ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೊಡಗಿನ ಶನಿವಾರಸಂತೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷ ಅವಧಿ ಪೂರೈಸುತ್ತಾರೆ ಅಂತಲೂ ಹೇಳುತ್ತಾರೆ, ತಾವು ಮುಖ್ಯಮಂತ್ರಿ ಆಗಬೇಕು ಅಂತಲೂ ಹೇಳಿಕೆ ನೀಡುತ್ತಾರೆ. ಆ ರೀತಿ ಮಾತನಾಡುವುದಕ್ಕೆ ಅರ್ಥವೇ ಇಲ್ಲ. ಹಾಗೆ ಮಾತನಾಡಬೇಡಿ ಎಂದು ಅವರಿಗೆ ನಾನು ಮನವಿ ಮಾಡುತ್ತೇನೆ. 

ಅಷ್ಟಕ್ಕೂ ಅವರೆಲ್ಲರೂ ಸಿಎಂ ಆಗುತ್ತೇನೆ ಎನ್ನುತ್ತಿರುವುದು 2028ರ ಚುನಾವಣೆಗೆ ಎಂದರು. ದೀಪಾವಳಿ ಬಳಿಕ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮ ಸರ್ಕಾರಕ್ಕೆ ಬಹುಮತ ಇಲ್ವ?, 136 ಶಾಸಕರು ನಮ್ಮ ಜೊತೆಗಿದ್ದಾರೆ. ಸರ್ಕಾರ ಏಕೆ ಬೀಳುತ್ತೆ ಎಂದರು. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರಕ್ಕೆ ಸ್ವಂತ ಬಲವಿಲ್ಲ. ಬೇರೆ, ಬೇರೆ ಪಕ್ಷಗಳನ್ನು ನಂಬಿಕೊಂಡು ರಾಜ್ಯಭಾರ ಮಾಡುತ್ತಿದ್ದಾರೆ. ಹೀಗಾಗಿ, ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ಕೇಂದ್ರ ಸರ್ಕಾರದ ಬಗ್ಗೆ ಯೋಚಿಸಲಿ. ವಿಜಯೇಂದ್ರ ಅವರು ಸಿಎಂ ಆದಂತೆ ಕನಸು ಕಾಣುತ್ತಿರಬಹುದು, ಕಾಣಲಿ ಬಿಡಿ ಎಂದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಇಲ್ಲ: ತಾವೂ ಮುಖ್ಯಮಂತ್ರಿ ಆಗಬೇಕು ಎಂದು ಕೆಲ ಹಿರಿಯ ಸಚಿವರು ಸೇರಿದಂತೆ ಏಳೆಂಟು ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಶನಿವಾರಸಂತೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಐದು ವರ್ಷ ಅವಧಿ ಪೂರೈಸುತ್ತಾರೆ ಅಂತಲೂ ಹೇಳುತ್ತಾರೆ. ನಾನು ಮುಖ್ಯಮಂತ್ರಿ ಆಗಬೇಕು ಅಂತಲೂ ಹೇಳಿಕೆ ನೀಡುತ್ತಾರೆ. ಆದರೆ ಆ ರೀತಿ ಮಾತನಾಡುವುದಕ್ಕೆ ಅರ್ಥವೇ ಇಲ್ಲ. ಹಾಗೆ ಮಾತನಾಡುವುದಕ್ಕೆ ಹೋಗಬಾರದು ಅಂತ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.

ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರಲಿದೆ: ಸಚಿವ ಸತೀಶ್‌ ಜಾರಕಿಹೊಳಿ

ಅವರೆಲ್ಲರೂ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಿರುವುದು 2028 ರ ಚುನಾವಣೆಗೆ, ಆ ಚುನಾವಣೆಗೆ ನಾನೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಷನ್ ಒಪ್ಪಿಗೆ ಹೈಕೋರ್ಟಿನಲ್ಲಿ ಇರುವ ವಿಚಾರ. ಈ ಬಗ್ಗೆ ಕೋರ್ಟ್ ತೀರ್ಪು ನೀಡುತ್ತದೆ. ಮುಡಾದಲ್ಲಿ ಆಗಿರುವ ಹಗರಣದಲ್ಲಿ ಮುಖ್ಯಮಂತ್ರಿ ಪಾತ್ರ ಇದೆಯೋ ಇಲ್ಲವೋ ಎನ್ನುವುದನ್ನು ಕೋರ್ಟ್ ಹೇಳಬೇಕು ಎಂದರು. ರಾಮೇಶ್ವರ ಕೆಫೆಯಲ್ಲಿ ಸ್ಫೋಟ ನಡೆದ ದಿನವೇ ಬಿಜೆಪಿ ಕಚೇರಿ ಸ್ಫೋಟಿಸುವ ಸಂಚು ಇತ್ತೆಂದು ಎನ್ಐಎ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಇರಬಹುದೇನೋ, ಆ ಮಾಹಿತಿ ಅವರಿಗೆ ಇರುತ್ತದೆ ಅಲ್ಲವೇ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ