ಮುಡಾ ಕೇಸ್‌ನಲ್ಲಿ ಸಾಕ್ಷ್ಯನಾಶ: ಸಿದ್ದರಾಮಯ್ಯ ವಿರುದ್ಧ ಇ.ಡಿ.ಗೆ 2ನೇ ಕಂಪ್ಲೇಂಟ್

Published : Oct 04, 2024, 08:42 AM IST
ಮುಡಾ ಕೇಸ್‌ನಲ್ಲಿ ಸಾಕ್ಷ್ಯನಾಶ: ಸಿದ್ದರಾಮಯ್ಯ ವಿರುದ್ಧ ಇ.ಡಿ.ಗೆ 2ನೇ ಕಂಪ್ಲೇಂಟ್

ಸಾರಾಂಶ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ.)ದ ಆರಂಭಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟಎದುರಾಗಿದ್ದು, ಇ.ಡಿ.ಗೆ ಎರಡನೇ ದೂರು ದಾಖಲಾಗಿದೆ.  

ಬೆಂಗಳೂರು (ಅ.04): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ.)ದ ಆರಂಭಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟಎದುರಾಗಿದ್ದು, ಇ.ಡಿ.ಗೆ ಎರಡನೇ ದೂರು ದಾಖಲಾಗಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾಗೆ ನಿವೇಶನ ವಾಪಸ್ ನೀಡಿರುವುದು ಸಾಕ್ಷ್ಯನಾಶಕ್ಕೆ ಸಮ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಗುರುವಾರ ವಕೀಲ ಪ್ರದೀಪ್ ಕುಮಾರ್ ದಾಖಲಿಸಿದ್ದಾರೆ. ಮುಡಾ ದೂರು ಹಗರಣ ವಿಚಾರವಾಗಿ ಇ.ಡಿ. ಪ್ರಕರಣ ದಾಖಲಿಸಿದ ಬೆನ್ನಲ್ಲೇ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಅದನ್ನು ಮುಡಾ ಕೂಡ ಸ್ವೀಕರಿಸಿದೆ. ಮುಖ್ಯಮಂತ್ರಿಗಳು ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿಎಂ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ಮುಡಾ ಹಗರಣದಲ್ಲಿ ಈಗಾಗಲೇ ಎಫ್ಐಆರ್ ಆಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಂಡತನ ಪ್ರದರ್ಶನ ಮಾಡದೆ ಕೂಡಲೇ ರಾಜೀನಾಮೆ ನೀಡುವಂತೆ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಆಗ್ರಹಿಸಿದ್ದಾರೆ. ನಗರದ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇನ್ನೊಂದು ವರ್ಷದವರೆಗೂ ಚಾಮುಂಡೇಶ್ವರಿ ಆಶೀರ್ವಾದ ಇರಲಿ: ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ!

ಈ ಹಿಂದೆ ದುಬಾರಿ ವಾಚ್ ಗಿಫ್ಟ್‌ ಪಡೆದುಕೊಂಡ ಸಮಯದಲ್ಲಿಯೂ ಇದೇ ರೀತಿ ನಡೆದುಕೊಂಡಿದ್ದೀರಿ, ಈಗಲೂ ಅದೇ ರೀತಿ ಮಾಡುವುದನ್ನು ಬಿಟ್ಟು, ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ಮುಡಾ ಹಗರಣದಲ್ಲಿ ಯಾವುದೇ ತಪ್ಪಾಗಿಲ್ಲ, ಹಗರಣ ಆಗಿಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ವಾದಿಸುತ್ತಿದ್ದರು. ಆದರೆ, ಈಗ ಏಕಾಏಕಿ ಅವರ ಪತ್ನಿಯವರೇ ಸೈಟ್ ವಾಪಸ್ಸು ನೀಡಿರುವುದಕ್ಕೆ ಏನು ಕಾರಣ ಎಂದು ಪ್ರಶ್ನಿಸಿ, ತಪ್ಪಾಗದಿದ್ದರೆ ಸೈಟ್ ವಾಪಸ್ಸು ನೀಡಿದ್ದು ಯಾಕೆ ಎಂದು ಕಿಡಿಕಾರಿದರು.

ದ್ವೇಷದ ರಾಜಕಾರಣ: ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಈ ಹಿಂದಿನ ಯಾವ ಸರ್ಕಾರವೂ ಈ ರೀತಿಯಾಗಿ ನಡೆದುಕೊಂಡಿರಲಿಲ್ಲ. ಇಲ್ಲಸಲ್ಲದ ಕೇಸ್ ಹಾಕಿ, ತಮ್ಮ ಅಕ್ರಮ ಮುಚ್ಚಿಕೊಳ್ಳಲು ನೋಡುತ್ತದೆ. ನಾವು ದ್ವೇಷದ ರಾಜಕಾರಣ ಮಾಡಲ್ಲ ಎನ್ನುತ್ತಲೇ ಪ್ರತಿಪಕ್ಷದವರ ಮೇಲೆ ನಿತ್ಯವೂ ಒಂದಿಲ್ಲೊಂದು ಕೇಸ್ ಹಾಕುತ್ತಿದ್ದಾರೆ ಎಂದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬೆಳಗಾವಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಯ ಬಗ್ಗೆ ಹೈಕಮಾಂಡ್ ಒಪ್ಪಿಗೆ ಇದ್ದಂತೆ ಇಲ್ಲ. ಒಪ್ಪಿಗೆಯಾದರೆ ರಾಜ್ಯಾಧ್ಯಕ್ಷ ವಿಜೇಯಂದ್ರ ಭಾಗವಹಿಸುತ್ತಾರೆ. ಭಿನ್ನಮತದ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತದೆ. ಹೈಕಮಾಂಡ್ ನಾಯಕರು ಈ ಕುರಿತು ನಿರ್ಧಾರ ಮಾಡುತ್ತಾರೆ ಎಂದರು.

ಸರ್ಕಾರ ಬೀಳಿಸೋ ದುರಾಲೋಚನೆ ಬರದಿರಲಿ: ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ

ಗಂಗಾವತಿ ವಿಭಾಗದ ಬದಲಿಗೆ ಕುಷ್ಟಗಿಯನ್ನೇ ವಿಭಾಗ ಮಾಡಲಿ ಎನ್ನುವುದು ನಮ್ಮ ಬೇಡಿಕೆ. ಈ ಕುರಿತು ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ, ಇದಕ್ಕೆ ನಮ್ಮ ವಿರೋಧ ಇದ್ದು, ಕುಷ್ಟಗಿಯನ್ನೇ ವಿಭಾಗ ಮಾಡಿ, ಇಲ್ಲ ಕೊಪ್ಪಳ ವಿಭಾಗದಲ್ಲಿಯೇ ಇರಲಿ ಎಂದು ಹೇಳಿದರು. ಜಿಲ್ಲಾದ್ಯಂತ ರಸ್ತೆಗಳು ಹದಗೆಟ್ಟು ಹೋಗಿವೆ. ಎಲ್ಲಿಯೂ ಸಹ ರಸ್ತೆ ಸರಿಯಾಗಿಲ್ಲ. ದುರಸ್ತಿ ಮಾಡುವುದಕ್ಕೆ ಸರ್ಕಾರದ ಬಳಿ ಹಣವೇ ಇಲ್ಲ. ಬಾಕಿ ಇರುವ ಬಹುತೇಕ ಕಾಮಗಾರಿಗಳ ಹಣ ನೀಡಲು ಆಗುತ್ತಿಲ್ಲ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ