
ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾ ನಿಯಮ ಉಲ್ಲಂಘನೆಯಾಗಿದೆ ಎಂದು ಪಕ್ಷೇತರ ಪರಾಜಿತ ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ ಆರೋಪಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಆದರೆ, ತಮಗೆ ಮತ ಎಣಿಕೆ ಕೇಂದ್ರಕ್ಕೆ ಹೋಗಲು ಅವಕಾಶ ನೀಡಲಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಎರಡು ತಾಸು ಮೊಬೈಲ್ ಬಳಸಿದ್ದರು. ಈ ವೇಳೆ ಮತ ಎಣಿಕೆ ಕೊಠಡಿಯಲ್ಲಿ ಇವಿಎಂ ಬದಲಾವಣೆಯಾಗಿದ್ದು, ತಮಗೆ ಬರಬೇಕಿದ್ದ 60 ಸಾವಿರ ಮತಗಳು ಬೇರೆಯವರಿಗೆ ಹೋಗಿದೆ.
ಇದರಿಂದ ತಾವು ಸೋಲಬೇಕಾಯಿತು ಎಂದು ಹೇಳಿದರು. ಚುನಾವಣಾ ನೀತಿ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಈಗಾಗಲೇ ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ಹಾಗಾಗಿ ಈ ಅಕ್ರಮ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮರು ಚುನಾವಣೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.