ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ. ಮಳೆ ಬಿದ್ರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಜೊತೆಗೆ ಬೀಜದ ದರ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಮುಂಗಾರು ಸಿದ್ಧತೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಹಾವೇರಿ (ಜೂ.01): ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ. ಮಳೆ ಬಿದ್ರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಜೊತೆಗೆ ಬೀಜದ ದರ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಮುಂಗಾರು ಸಿದ್ಧತೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ, ಅನ್ನ ಭಾಗ್ಯ ಅಂತಾ ಹೇಳ್ತಾರೆ ಅನ್ನಕ್ಕೆ ಮೊದಲು ಬೇಕಾಗಿರೋದು ಬಿತ್ತನೆ ಬೀಜ. ರೈತರಿಗೆ ಏನು ಗ್ಯಾರಂಟಿ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ ಅವರು, ರೈತರಿಗೆ ಮುಖ್ಯವಾಗಿ ಬೇಕಾಗಿದ್ದ ಬಿತ್ತನೆ ಬೀಜದ ಗ್ಯಾರಂಟಿ ಇಲ್ಲ. ಹೆಕ್ಟೇರ್‌ಗೆ 25 ಸಾವಿರ ಪ್ರೋತ್ಸಾಹ ಧನ ಕೊಡಬೇಕು.
ಡಿಎಪಿ ಗೊಬ್ಬರದ ಅಭಾವವಿದೆ. ರೈತರಿಗೆ ಬೇಕಾಗಿದ್ದನ್ನು ಬಿಟ್ಟು ಉಳಿದಿದ್ದೆಲ್ಲ ಇದೆ. ಈ ವರ್ಷ ಮಾರ್ಕೆಟಿಂಗ್ ಫೆಡರೇಷನ್‌ಗೆ ಒಂದು ನಯಾ ಪೈಸೆ ಕೊಟ್ಟಿಲ್ಲ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶ ಮಾಡಬೇಕು, ಫೆಡರೇಶನ್‌ಗೆ ಅನುದಾನ ಕೊಡಬೇಕು ಎಂದು ಒತ್ತಾಯಿಸಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರ ಕಾಲದಲ್ಲಿ ಯಾರ ಡೈರೆಕ್ಷನ್‌ನಲ್ಲಿ ಅವ್ಯವಹಾರ ಆಗಿದೆ ಎನ್ನೋದು ಮುಖ್ಯ. ಡೆತ್‌ನೋಟ್‌ನಲ್ಲಿ ಸಚಿವರ ಹೆಸರು ಹೇಳಿದ್ದಾನೆ. ಈ ಬಗ್ಗೆ ತನಿಖೆ ಆಗಲಿ, ಇದರಲ್ಲಿ ಪಾತ್ರ ಇಲ್ಲ ಅಂದ್ರೆ ಮತ್ತೆ ಸಚಿವರಾಗಲಿ, ಸಚಿವರ ತಲೆದಂಡವಾಗಬೇಕು ಎಂದು ಹೇಳಿದರು.
undefined
ಚಂದ್ರಶೇಖರನ್ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಿ, ಪ್ರಕರಣ ಸಿಬಿಐಗೆ ಒಪ್ಪಿಸಿ: ಕೆ.ಎಸ್.ಈಶ್ವರಪ್ಪ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಯಾದರೂ ಸರ್ಕಾರ ಕೇರ್ ಮಾಡುತ್ತಿಲ್ಲ ಮತ್ತು ಹಗರಣವಾದರೂ ಸರಿಯಾಗಿ ಕ್ರಮ ವಹಿಸುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದ ಗವಿಮಠಕ್ಕೆ ಭೇಟಿ ನೀಡಿ, ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು. ನೇಹಾ ಪ್ರಕರಣ ಸೇರಿದಂತೆ ಅನೇಕ ಕೊಲೆ ಪ್ರಕರಣಗಳು ನಡೆದಿವೆ. ಗೂಂಡಾಗಳ ದಾಂಧಲೆ ನಡೆದಿವೆ. ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ಕುರಿತು ಸರಿಯಾದ ಕ್ರಮವಹಿಸುತ್ತಿಲ್ಲ. ಸಚಿವರು ಮೌಖಿಕ ಆದೇಶ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿಯೇ ಇದ್ದರೂ ಸಚಿವರ ರಾಜೀನಾಮೆ ಪಡೆಯುತ್ತಿಲ್ಲ. ಅದನ್ನು ಸಹಿಸಿಕೊಂಡು ಸುಮ್ಮನೇ ಇರಲು ಆಗುವುದಿಲ್ಲ. ಸಚಿವರ ರಾಜೀನಾಮೆ ನೀಡುವಂತೆ ಹೋರಾಟ ಮಾಡಲಾಗುವುದು ಎಂದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಸ್ಪಷ್ಟವಾಗಿದೆ. ಈಗಾಗಲೇ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗಬೇಕು ಎಂದು ಆಗ್ರಹಿಸಿದ್ದೇವೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಎಸ್‌ಐಟಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿದಂತೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಬಿಜೆಪಿಯಲ್ಲಿ ಗಾಡ್ ಫಾದರ್ ಸಂಸ್ಕೃತಿ ತಡೆಯಲು ನನ್ನ ಸ್ಪರ್ಧೆ: ರಘುಪತಿ ಭಟ್
ಬಿತ್ತನೆ ಬೀಜಗಳ ದರ ಹೆಚ್ಚಳವಾಗಿದೆ. ಆದರೂ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ರೈತರ ನೆರವಿಗೆ ಧಾವಿಸುತ್ತಿಲ್ಲ. ಸಬ್ಸಿಡಿ ಹೆಚ್ಚಳ ಮಾಡುವ ಮೂಲಕ ದರ ಏರಿಕೆ ನಿಯಂತ್ರಿಸಿ, ರೈತರಿಗೆ ಅನುಕೂಲ ಮಾಡಿಕೊಡುವ ಅವಕಾಶ ಇದ್ದರೂ ರಾಜ್ಯ ಸರ್ಕಾರ ಮಾಡಲಿಲ್ಲ ಎಂದರು. ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದೆ. ಆದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಹದಿನೈದು ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಿದ್ದೇವೆ. ಅದನ್ನು ಪೂರ್ಣಗೊಳಿಸುತ್ತಿಲ್ಲ. ಕಲ್ಯಾಣ ಕರ್ನಾಟಕದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೂ ಕ್ರಮ ವಹಿಸಿದ್ದೇವೆ. ಈಗಿನ ರಾಜ್ಯ ಸರ್ಕಾರ ಏನೂ ಮಾಡುತ್ತಿಲ್ಲ ಎಂದರು.