ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಲು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಬರ ಘೋಷಣೆಗೆ ಮುಹೂರ್ತ ನೋಡುತ್ತಿದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ
ಹಾವೇರಿ (ಸೆ.09): ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಲು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಬರ ಘೋಷಣೆಗೆ ಮುಹೂರ್ತ ನೋಡುತ್ತಿದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದ ಬಳಿ ನಡೆದಿದ್ದ ಪಟಾಕಿ ದುರಂತದ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಿ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಬರಗಾಲ ಘೋಷಣೆ ಮಾಡುತ್ತೇವೆ ಎಂದು ಹೇಳಿ, ಇಲ್ಲಿಯವರೆಗೂ ಬರಗಾಲ ಘೋಷಣೆ ಮಾಡಿಲ್ಲ. ನಾವು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದೆವೆ ಅಂತ ಕೇಂದ್ರದ ಮೇಲೆ ನೆಪ ಹೇಳುತ್ತಿದ್ದಾರೆ.
undefined
ಈ ಸಬೂಬು ಹೇಳಿ ಬರಗಾಲ ಘೋಷಣೆ ಮಾಡುತ್ತಿಲ್ಲ. ಮಳೆಗಾಲ ಮುಗಿಯುತ್ರ ಬಂತು ಈಗೇನು ಘೋಷಣೆ ಮಾಡುತ್ತಾರೆ ಎಂದರು. ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕೊರತೆಯಿಂದ ತೊಂದರೆಯಾಗಿದೆ.ಹಣಕಾಸಿನ ನೇರವು ನೀಡಿ ವಿದ್ಯುತ್ ಖರೀದಿ ಮಾಡಬೇಕು. ಬರಗಾಲ ಘೋಷಣೆ ಮಾಡದೆ ಸುಮ್ಮನೆ ಮುಂದಕ್ಕೆ ಹಾಕುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿ ಇರುವ ಹಣ ಬಳಕೆ ಮಾಡುತ್ತಿಲ್ಲ. ಬರ ಘೋಷಣೆಗೂ ಮೂಹರ್ತ ನೋಡುತ್ತಿದ್ದೀರಾ? ಅಂಗೈ ಹುಣ್ಣಿಗೆ ಕನ್ನಡಿ ಬೇಕಾ? ಇನ್ನೂ ಯಾವಾಗ ಬರಗಾಲ ಘೋಷಣೆ ಮಾಡುವುದು? ಎಂದು ಪ್ರಶ್ನಿಸಿದರು.
ಪ್ರೀತಿಗೆ ವಯಸ್ಸಿನ ಗಡಿ ಇಲ್ಲ: 75ರ ವಯಸ್ಸಿನಲ್ಲೂ 35ರ ಯುವತಿಗೆ ತಾಳಿ ಕಟ್ಟಿದ ಅಜ್ಜ!
ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ಪರಿಹಾರ: ಇತ್ತೀಚೆಗೆ ನಡೆದ ಪಟಾಕಿ ದುರಂತದಲ್ಲಿ ಅನಾಹುತ ಆಗಿದೆ. ದಸರಾ- ದೀಪಾವಳಿ ಹಬ್ಬಕ್ಕೆ ಸ್ಟಾಕ್ ಮಾಡಿರುವ ಪಟಾಕಿ ಸ್ಪೋಟವಾಗಿದೆ. ಇದರಲ್ಲಿ ನಾಲ್ವರು ಸಾವಾಗಿದ್ದು ದುರ್ದೈವದ ಸಂಗತಿ. ಇಷ್ಟೊಂದು ದೊಡ್ಡ ಪ್ರಮಾಣದ ಪಟಾಕಿ ಸಂಗ್ರಹ ಮಾಡಿದ್ದು ತಪ್ಪು. ಮುಂಜಾಗ್ರತಾ ಮಾರ್ಗಗಳನ್ನು ಇಟ್ಟಿರಬೇಕು, ಆದರೆ ಯಾವುದು ಮುಂಜಾಗ್ರತ ಕ್ರಮ ಕೈಗೊಂಡಿರುವುದು ಕಾಣಿಸುತ್ತಿಲ್ಲ. ಮೆಲ್ನೋಟಕ್ಕೆ ಹಲವಾರು ಲೋಪದೋಷಗಳು ಕಾಣಿಸುತ್ತಿವೆ.ಜಿಲ್ಲಾಧಿಕಾರಿಗಳು ಬಿಗಿಯಾದ ನಿಯಮಗಳನ್ನು ಜಾರಿಗೊಳಿಸಬೇಕು.
ಕಠಿಣ ಕ್ರಮ ತೆಗೆದುಕೊಳ್ಳದೆ ಹೋದರೆ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ. ಇಂತಹ ಘಟನೆಗಳಲ್ಲಿ ಗಾಯಕ್ಕಿಂತ ಸಾವುಗಳೆ ಹೆಚ್ಚಾಗುತ್ತವೆ. ಈ ದುರಂತ ನಡೆದಾಗ ಮೃತರ ಕುಟುಂಬಗಳಿಗೆ ತಲಾ ಒಂದೊಂದು ಲಕ್ಷ ಪರಿಹಾರ ಕೊಡುವುದಾಗಿ ಹೇಳಿದ್ದೇವು, ಅದರಂತೆ ಇಂದು ಪಕ್ಷದಿಂದ ಪರಿಹಾರ ನೀಡಿದ್ದೇವೆ ಎಂದು ಹೇಳಿದರು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಹಾವೇರಿ ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಈ ಬಗ್ಗೆ ನಾನು ಅಧಿವೇಶನದಲ್ಲಿ ಹೇಳಿದರೂ ಕೃಷಿ ಸಚಿವರು ಅಲ್ಲಗಳೆದಿದ್ದರು.
ಕಾಂಗ್ರೆಸ್ಗೆ ಜನಪ್ರಿಯತೆ ಇದೆ ಎಂಬ ಕಾರಣಕ್ಕೆ ಜೆಡಿಎಸ್-ಬಿಜೆಪಿಗೆ ಆತಂಕ: ಸಚಿವ ಬೈರೇಗೌಡ
ಮಾದ್ಯಮಗಳಲ್ಲಿ ರೈತರ ಆತ್ಮಹತ್ಯೆಗಳ ಸುದ್ದಿ ಬಂದ ನಂತರ ಒಪ್ಪಿಗಡ ಕೊಡಲು ಆರಂಭಿಸಿದ್ದಾರೆ. ಆತ್ಮಹತ್ಯೆ ಪ್ರಕರಣಗಳಲ್ಲಿ FSL ರಿಪೋರ್ಟ್ ಬರುವುದು ವಿಳಂಬವಾಗುತ್ತದೆ. ಕನಿಷ್ಠ 15-20 ದಿನ ಸಮಯ ಬೇಕಾಗುತ್ತದೆ. ರೈತರು ವಿವಿಧ ರೂಪದಲ್ಲಿ ಸಾಲ ಮಾಡಿರುತ್ತಾರೆ. ಮೃತರ ಕುಟುಂಬಗಳಿಗೆ ಕೂಡಲೇ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು. ಆತ್ಮ ಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಬಿಜೆಪಿಯಿಂದ ಸಾಂತ್ವನ ಹೇಳುವುದರ ಜೊತೆಗೆ ಸಕಾರಣ ತಿಳಿದುಕೊಂಡು ಆರ್ಥಿಕ ಸಹಾಯ ಮಾಡುವುದಕ್ಕೆ ತಿರ್ಮಾನ ಮಾಡಲಾಗಿದೆ. ಇದಕ್ಕೆ ಸಭೆ ಮಾಡಿ ನಿರ್ಣಯ ಮಾಡುವುದಾಗಿ ಮಾತುಕತೆ ಆಗಿದೆ ಎಂದು ಹೇಳಿದರು.