ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಣಿಬೆನ್ನೂರು (ಮಾ.22): ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಅಂದರೆ ಭಾವನೆ, ಕಾಂಗ್ರೆಸ್ ಅಂದರೆ ಬದುಕು ಎಂಬ ಸಚಿವ ಎಚ್.ಕೆ. ಪಾಟೀಲ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಅವರು ಹೇಳಿದ್ದಕ್ಕೆಲ್ಲ ಉತ್ತರ ಕೊಡುವ ಅಗತ್ಯ ಇಲ್ಲ.
ಜನರಿಗೆ ಗೊತ್ತಿದೆ ಯಾವುದು ಬದುಕು ಯಾವುದು ಭಾವನೆ ಅಂತ ಎಂದು ಹೇಳಿದರು. ಕರ್ನಾಟಕ ಬಿಜೆಪಿ ಶುದ್ಧೀಕರಣ ಮಾಡುತ್ತೇನೆ ಎಂಬ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸದಾನಂದಗೌಡ ಅವರು ಹಿರಿಯರಿದ್ದಾರೆ. ಅವರು ಅವರದೇ ಆದ ನಿಲುವು ತೆಗೆದುಕೊಂಡಿದ್ದಾರೆ. ಅವರಿಗೆ ಪಕ್ಷದ ಮೇಲಿನ ಬದ್ಧತೆ ಹಾಗೂ ಅಭಿಮಾನ ಎಂದೂ ಕಡಿಮೆ ಆಗುವುದಿಲ್ಲ ಎಂದರು.
undefined
ಸೋನು ಗೌಡ ಬಂಧನ: ಪಾಸಿಟಿವೋ ಅಥವಾ ನೆಗೆಟಿವೋ ಒಟ್ನಲ್ಲಿ ಪ್ರಚಾರದಲ್ಲಿದ್ದೀನಿ ಎಂದ ನಟಿ
ತಂದೆ ಮಕ್ಕಳಿಂದ ಬಿಜೆಪಿ ಉಳಿಸುತ್ತೇವೆ ಎಂಬ ಈಶ್ವರಪ್ಪ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಶ್ವರಪ್ಪ ಭಾವನಾತ್ಮಕವಾಗಿ ಮಾತಾಡಿದ್ದಾರೆ. ಕೆಲವೇ ದಿನಗಳಲ್ಲಿ ನಮ್ಮ ವರಿಷ್ಠರು ಗಂಭೀರವಾಗಿ ಅವರೊಂದಿಗೆ ಮಾತನಾಡುತ್ತಾರೆ. ನಾಳೆ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ಇದೆ. ನಾಳೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ ಮತ್ತಿತರರು ಇದ್ದರು.
ಭಾವುಕರಾಗಿ ಕಣ್ಣೀರು ಸುರಿಸಿದ ಬೊಮ್ಮಾಯಿ: ಚುನಾವಣಾ ಪ್ರಚಾರ ಸಭೆಯಲ್ಲಿ ಶಿಗ್ಗಾಂವಿ ಕ್ಷೇತ್ರದ ಜನರ ಮುಂದೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಒಂದರೆಕ್ಷಣ ಭಾವುಕರಾಗಿ ಕಣ್ಣೀರು ಹಾಕಿದ ಪ್ರಸಂಗ ಭಾನುವಾರ ನಡೆದಿದೆ. ಶಿಗ್ಗಾಂವಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನನ್ನ ರಾಜಕೀಯ ಬದುಕಿಗೆ ಶಕ್ತಿ ನೀಡಿದ ದೇವರು ಕ್ಷೇತ್ರದ ಜನ, ನೀವೆಲ್ಲ ನನಗೆ ಪರಮಾತ್ಮರಿದ್ದಂತೆ. ಯಾರನ್ನು ಮರೆತರೂ ದೇವರನ್ನು ಮರೆಯಲು ಸಾಧ್ಯವಿಲ್ಲ, ರೊಟ್ಟಿ, ಅನ್ನ, ನವಣಕ್ಕಿ ಅನ್ನ ಮಾಡಿ ಪ್ರೀತಿಯಿಂದ ಉಣಿಸಿದ್ದೀರಿ, ನಿಮ್ಮ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ ಎಂದು ಭಾವುಕರಾಗಿ ನುಡಿದರು.
ಕಾಂಗ್ರೆಸ್ ಸೇರಲ್ಲ, ಆದರೆ ಬಿಜೆಪಿ ಶುದ್ದ ಮಾಡುವೆ: ಡಿ.ವಿ.ಸದಾನಂದಗೌಡ
ಈ ಸಭೆ ನನಗೆ ವಿದಾಯದ ಸಭೆಯಲ್ಲ, ಜೋಶಿ ಅವರಿಗೆ ಶಕ್ತಿ ನೀಡುವ ಸಭೆ, ನನ್ನನ್ನು ದೆಹಲಿಯಲ್ಲಿ ಪ್ರತಿನಿಧಿಯಾಗಿ ಮಾಡುವಂಥ ಸಭೆ, ಪರೋಕ್ಷವಾಗಿ ನಿಮ್ಮ ಪ್ರಾರ್ಥನೆಯಿಂದ ನಾನು ದೇಶದ ಪ್ರತಿನಿಧಿ ಆಗಬೇಕು ಎಂದು ಆಶೀರ್ವಾದ ಮಾಡಿ ಎಂದರು. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು. ವೇದಿಕೆ ಮೇಲೆ ಕೂತಿರುವವರು ನಮ್ಮ ನಾಯಕರು, ವೇದಿಕೆ ಮುಂಭಾಗದಲ್ಲಿ ನಾಯಕರನ್ನು ಸೃಷ್ಟಿಸುವ ಜನ ನಮ್ಮ ಮಹಾನಾಯಕರು ಎಂದು ಹೇಳಿದರು.