ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದ ದಿನದಂದು ಕಾಂಗ್ರೆಸ್‌ನ ಅಭ್ಯರ್ಥಿ ನಾಸೀರ್ ಆಯ್ಕೆಯಾಗುತ್ತಿದ್ದಂತೆ ಪಾಕ್ ಪರ ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿತ್ತು. ಆದರೂ ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ಹೊರಹಾಕಿದರು.
ಬೆಳಗಾವಿ (ಮಾ.06): ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದ ದಿನದಂದು ಕಾಂಗ್ರೆಸ್‌ನ ಅಭ್ಯರ್ಥಿ ನಾಸೀರ್ ಆಯ್ಕೆಯಾಗುತ್ತಿದ್ದಂತೆ ಪಾಕ್ ಪರ ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿತ್ತು. ಆದರೂ ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ಹೊರಹಾಕಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಸ್ಪಷ್ಟವಾಗಿತ್ತು.
ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿರುವವರ ನಡೆ ಆತಂತಕ್ಕೆ ಕಾರಣವಾಗಿದೆ. ಎಫ್ಎಸ್ಎಲ್ ವರದಿ ಬಂದು ನಾಲ್ಕು ದಿನಗಳು ಕಳೆದಿವೆ. ಎರಡು ದಿನಗಳ ಹಿಂದೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಎಫ್ಐಆರ್ ಮಾಡಿಕೊಂಡಿದ್ದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತ್ತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದ್ದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಆಡಳಿತಕ್ಕೆ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನೀರಾವರಿ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಿದೆ. ಹಳೆ ಯೋಜನೆಗೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದು, ಸಿಎಂ ಇದನ್ನು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಪಾಪ ಕುಮಾರಣ್ಣ ಹೆದರಿ ಮಂಡ್ಯಕ್ಕೆ ಓಟ: ಶಾಸಕ ಬಾಲಕೃಷ್ಣ ಲೇವಡಿ
ಬೆಳಗಾವಿಯಲ್ಲೇ ಬಿಜೆಪಿ, ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಲ್ಲ, ದೆಹಲಿಯಲ್ಲಿ ಆಗಲಿದೆ ಎಂದರು. ಹಾವೇರಿಯಿಂದ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿ, ನಾನು ಈಗಾಗಲೇ ಈ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದಷ್ಟೇ ಹೇಳಿದರು.