ಸುಪ್ರೀಂ ಕೋರ್ಟ್‌ ಆದೇಶ ನೀಡಿದರೆ ನಾವೇನು ಮಾಡಬೇಕು: ಬೊಮ್ಮಾಯಿ ವಿರುದ್ಧ ಡಿಕೆಶಿ ಗರಂ

By Kannadaprabha News  |  First Published Sep 20, 2023, 10:11 AM IST

ಕಾವೇರಿ ನೀರು ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಸಲಹೆ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಸಲಹೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.


ಬೆಂಗಳೂರು (ಸೆ.20): ಕಾವೇರಿ ನೀರು ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಸಲಹೆ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಸಲಹೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

‘ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ನೀರು ಬಿಡದೆ ಮೇಲ್ಮನವಿ ಸಲ್ಲಿಸಬೇಕಿತ್ತು ಎಂದು ಬೊಮ್ಮಾಯಿ ಅವರು ಸಲಹೆ ನೀಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ನೀರು ಬಿಡಬೇಡಿ ಎಂದು ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ? ನಾವೇನು ತಮಿಳುನಾಡಿಗೆ ನೀರು ಬಿಡಲು ತಯಾರಿಲ್ಲ, ಹಾಗಾಗಿಯೇ ಕಾನೂನು ಹೋರಾಟ ನಡೆಸುತ್ತೇವೆ. ಆದರೆ, ಸವೋಚ್ಚ ನ್ಯಾಯಾಲಯದ ಆದೇಶವನ್ನೂ ಗಮನದಲ್ಲಿಟ್ಟುಕೊಳ್ಳಬೇಕಲ್ಲ’ ಎಂದರು.

Tap to resize

Latest Videos

‘ಬೊಮ್ಮಾಯಿ ಅವರು ತಮ್ಮದೇ ಸರ್ಕಾರ ಇದ್ದಾಗ ರಾತ್ರೋ ರಾತ್ರಿ ತಮಿಳುನಾಡಿಗೆ ನೀರು ಹರಿಸಿದ್ದೇಕೆ? ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆ ನಮ್ಮ ಬಳಿ ಇದೆ ಎಂದರು. ಹಾಗಾಗಿ ಅವರು ರಾಜಕಾರಣ ಬದಿಗಿಟ್ಟು ಕೂಡಲೇ ಪ್ರಧಾನಿಗಳಿಗೆ ಮಧ್ಯಸ್ಥಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ’ ಎಂದು ತಿರುಗೇಟು ನೀಡಿದರು.

Hassan: ಎಣ್ಣೆ ಕುಡಿಯುವ ಬೆಟ್ ಕಟ್ಟಿ ಯಮರಾಜನ ಫ್ಲೈಟ್‌ ಹತ್ತಿದ ವ್ಯಕ್ತಿ!

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿ ಕಾವೇರಿ ನೀರು ಬಿಕ್ಕಟ್ಟನ್ನು ‘ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ’ ಎಂದು ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳಿಗೆ ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಅವರು ಮಾತನಾಡಿದ್ದಾರೆ. ಅವರ ಸಲಹೆ ಸ್ವೀಕಾರಾರ್ಹವಾಗಿದೆ.
- ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

click me!