
ಬೆಂಗಳೂರು (ಸೆ.23): ರಾಜ್ಯದ ಪ್ರಾದೇಶಿಕ ಪಕ್ಷ ಜೆಡಿಎಸ್, ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಗೊಂಡಿರುವುದನ್ನು ಬಿಜೆಪಿಯ ಹಿರಿಯ ನಾಯಕರು ಸ್ವಾಗತಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರರು ಸ್ವಾಗತಿಸಿ, ಜೆಡಿಎಸ್, ಎನ್‌ಡಿಎ ಭಾಗವಾಗುತ್ತಿರುವುದಕ್ಕೆ ಟ್ವಿಟರ್‌ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್ ಡಿಎ ದೇಶಾದ್ಯಂತ ಬಲಶಾಲಿ ಮತ್ತು ಅತ್ಯಂತ ವಿಶ್ವಾಸಾರ್ಹ ರಾಜಕೀಯ ಒಕ್ಕೂಟವಾಗಿ ಬೆಳೆಯುತ್ತಲೇ ಇದೆ. ಎನ್‌ಡಿಎ ಕುಟುಂಬಕ್ಕೆ ಜೆಡಿಎಸ್ ಸೇರ್ಪಡೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನಾವು ಒಟ್ಟಾಗಿ ಬಲಿಷ್ಠ ಎನ್‌ಡಿಎ ಮತ್ತು ನವಭಾರತವನ್ನು ನಿರ್ಮಿಸುತ್ತೇವೆ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಯ ಭಾಗವಾಗಿರುವುದು ಸ್ವಾಗತಾರ್ಹ ಎಂದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿ ಜೆಡಿಎಸ್ ಪಕ್ಷವು ಎನ್ ಡಿ ಎ ಭಾಗವಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ಜೆಡಿಎಸ್ ನಾಯಕರಾದ ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರಿಗೂ ಸ್ವಾಗತ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಮಾರ್ಗದರ್ಶನ ಮತ್ತು ಆಶೀರ್ವಾದ ದೊರಕುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.
ವಿದ್ಯುತ್ ಉತ್ಪಾದನೆ ಕುಸಿತ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ
ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕುಮಾರಸ್ವಾಮಿ ಅವರು ಅಮಿತ್ ಶಾ ಹಾಗೂ ಜೆ.ಪಿ.ನಡ್ಜಾ ಅವರ ಸಮ್ಮುಖದಲ್ಲಿ ಎನ್‌ಡಿಎ ಮೈತ್ರಿಕೂಟ ಸೇರಿದ್ದನ್ನು ಸಂತಸದಿಂದ ಸ್ವಾಗತಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ದಕ್ಷ ಆಡಳಿತವನ್ನು ಮೆಚ್ಚಿ ಜೆಡಿಎಸ್ ''ನವ ಭಾರತ, ಬಲಿಷ್ಠ ಭಾರತ''ಕ್ಕಾಗಿ ನಮ್ಮ ಎನ್‌ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ಹರ್ಷದ ವಿಷಯ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.