ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ: ಬಿಎಸ್‌ವೈ

By Kannadaprabha News  |  First Published Sep 18, 2023, 11:01 PM IST

ರಾಜ್ಯ ಸರ್ಕಾರ ಇದ್ದರೂ ಸತ್ತಂತಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಹಾಗಾಗಿ ಎಚ್ಚರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.


ಕೋಲಾರ (ಸೆ.18): ರಾಜ್ಯ ಸರ್ಕಾರ ಇದ್ದರೂ ಸತ್ತಂತಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಹಾಗಾಗಿ ಎಚ್ಚರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಅವರು ಮತ್ತೊಮ್ಮೆ ಪ್ರಧಾನಿ ಆಗಲೆಂದು ಪ್ರಾರ್ಥನೆ ಮಾಡಲಿದ್ದೇವೆ ಎಂದರು.

ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ, ಮುಳಬಾಗಿಲಿನಿಂದ ಹೋರಾಟ ಪ್ರಾರಂಭ ಮಾಡಲಿದ್ದೇವೆ. ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತ ಸಭೆಗಳನ್ನು ನಡೆಸಿ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ೨೫ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮೋದಿಯವರಿಗೆ ಉಡುಗೊರೆ ನೀಡಲಿದ್ದೇವೆ. ಮೈತ್ರಿ ಇನ್ನೂ ಮಾತುಕತೆ ನಡೆಯುತ್ತಿದೆ ಹಾಗಾಗಿ ಅದರ ಬಗ್ಗೆ ಈಗಲೇ ಮಾತನಾಡುವುದು ಬೇಡ ಎಂದು ತಿಳಿಸಿದರು. ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಲಾಗುತ್ತಿದೆ. 

Tap to resize

Latest Videos

100 ಜನ ಒಂದಾದ್ರೂ ಮೋದಿ ಸೋಲಿಸಲು ಆಗಲ್ಲ: ಸಂಸದ ಮುನಿಸ್ವಾಮಿ

ಕಾಂಗ್ರೆಸ್ ಪಕ್ಷದಲ್ಲಿ ಅವರ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುತ್ತಿಲ್ಲ. ಸರ್ಕಾರದಲ್ಲಿ ಯಾರು ಮುಖ್ಯಮಂತ್ರಿ ಎಂದು ಹುಡುಕುತ್ತಿದ್ದಾರೆ. ಹೀಗಿರುವಾಗ ಆಪರೇಷನ್ ಹಸ್ತ ಅಲ್ಲ ಅವರ ಪಕ್ಷದಲ್ಲೇ ಆಪರೇಷನ್ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ, ರೈತರು ಆತ್ಮಹತ್ಯೆಗೆ ಹೋಗುತ್ತಿದ್ದಾರೆ. ಕಾಂಗ್ರೆಸ್‌ನವರು ಆಡಳಿತ ನಡೆಸಿದೆ, ರಾಜಕಾರಣ ಮಾಡುತ್ತಿದ್ದಾರೆ ಎಂದರು. ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದರು. ಸಂಸದ ಮುನಿಸ್ವಾಮಿ, ಮಾಜಿ ಸಚಿವ ಕಟ್ಟಾ ಸುಬ್ರಮಣಿ ನಾಯ್ಡು, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ಮಾಜಿ ಶಾಸಕ ವೈ.ಸಂಪಂಗಿ ಇದ್ದರು.

click me!