ರಾಷ್ಟ್ರದ್ರೋಹಿ ಹೇಳಿಕೆ: ಈಶ್ವರಪ್ಪನವರ ಮಾತಿಗೆ ಅಪಾರ್ಥ ಕಲ್ಪಿಸಲಾಗುತ್ತಿದೆ: ಬಿ.ಎಸ್‌.ಯಡಿಯೂರಪ್ಪ

Published : Feb 11, 2024, 06:57 AM IST
ರಾಷ್ಟ್ರದ್ರೋಹಿ ಹೇಳಿಕೆ: ಈಶ್ವರಪ್ಪನವರ ಮಾತಿಗೆ ಅಪಾರ್ಥ ಕಲ್ಪಿಸಲಾಗುತ್ತಿದೆ: ಬಿ.ಎಸ್‌.ಯಡಿಯೂರಪ್ಪ

ಸಾರಾಂಶ

ಈಶ್ವರಪ್ಪನವರು ರಾಷ್ಟ್ರದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ‌ ಕೊಲ್ಲಿ ಎಂದಿದ್ದಾರೆ. ಅವರ ಮಾತನ್ನು ಅಪಾರ್ಥ ಕಲ್ಪಿಸುವ ರೀತಿ ಕಾಂಗ್ರೆಸ್‌ನವರು ಮಾತನಾಡುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. 

ಶಿವಮೊಗ್ಗ (ಫೆ.11): ಈಶ್ವರಪ್ಪನವರು ರಾಷ್ಟ್ರದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ‌ ಕೊಲ್ಲಿ ಎಂದಿದ್ದಾರೆ. ಅವರ ಮಾತನ್ನು ಅಪಾರ್ಥ ಕಲ್ಪಿಸುವ ರೀತಿ ಕಾಂಗ್ರೆಸ್‌ನವರು ಮಾತನಾಡುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆ ಬಗ್ಗೆ ಟೀಕೆ ಮಾಡುವುದು, ಅಪಾರ್ಥ ಕಲ್ಪಿಸುವುದು ಬೇಡ. ಒಂದು ವೇಳೆ, ಅವರ ವಿರುದ್ಧ ಎಫ್‌ಐಆರ್ ಹಾಕಿದರೂ ಅದನ್ನು ನಾವು ಎದುರಿಸುತ್ತೇವೆ ಎಂದು ಯಡಿಯೂರಪ್ಪ ತಿರುಗೇಟು ನೀಡಿದರು.

ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯುತ್ತಾರೆ: ಗ್ಯಾರಂಟಿ ಯೋಜನೆ ಭರವಸೆ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಮಿತಿ ಮೀರಿದ್ದು, ಇದೆಲ್ಲದರಿಂದ ರೋಸಿ ಹೋಗಿರುವ ಜನತೆ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಬೇಕೆನ್ನುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯ ಸಂಪೂರ್ಣ ಮರೆತಿದೆ: ಬಿ.ಎಸ್.ಯಡಿಯೂರಪ್ಪ

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಲ್ಲೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಒಂದು ಕಡೆ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನೂ ಜಾರಿಗೆ ತಂದಿಲ್ಲ. ಗ್ಯಾರಂಟಿ ನೆಪದಲ್ಲಿ ಮತ್ತೊಂದು ಕಡೆ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಂಡಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಕೇಂದ್ರ ಸಮರ್ಪಕ ಅನುದಾನ ನೀಡಿಲ್ಲವೆಂದು ಸುಳ್ಳು ಹೇಳಿಕೊಂಡು ದೆಹಲಿ ಜಂತರ್ ಮಂತರ್ ಮುಂದೆ ಹೋದ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಕಳೆಯುತ್ತಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ. ಸರ್ಕಾರದ ದುಡ್ಡಿನಲ್ಲಿ ಜಾಹೀರಾತು ನೀಡಿ, ಸುಳ್ಳು ಹೇಳಿ ಸಿಕ್ಕಿ ಹಾಕಿಕೊಳ್ಳುವ ಹೀನಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಲುಪಿದೆ ಎಂದು ಹರಿಹಾಯ್ದರು.

ಭಾರತ್ ಬ್ರಾಂಡ್ ಪಂಚ ಗ್ಯಾರಂಟಿಗೂ ಮಿಗಿಲಾದದ್ದು: ಯಡಿಯೂರಪ್ಪ

ಕಾಂಗ್ರೆಸ್‌ ಅಪ್ರಸ್ತುತವಾಗಿದೆ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಲೋಕಸಭೆ, ರಾಜ್ಯಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಆರೋಪಗಳಿಗೆ ಸರಿಯಾದ ಉತ್ತರವನ್ನೇ ನೀಡಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನೇ ಪ್ರಶ್ನಿಸುವ, ದೇಶ ವಿಭಜನೆ ಮಾತುಗಳನ್ನಾಡುವವರನ್ನು ಇನ್ನು ಕೆಲವೇ ಕೆಲ ದಿನಗಳಲ್ಲಿ ಜನರೇ ಅಪ್ರಸ್ತುತ ಮಾಡಲಿದ್ದಾರೆ. ರಾಷ್ಟ್ರ ರಾಜಧಾನಿಗೂ ಹೋಗಿ ಸುಳ್ಳು ಹೇಳಿ ರಾಜ್ಯದ ಜನರ ಮರ್ಯಾದೆ ತೆಗೆಯುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿದೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!