
ತುಮಕೂರು (ಮಾ.02): ರಾಜ್ಯದಲ್ಲಿ ಅಧಿಕಾರದ ಆಸೆಗಾಗಿ ನಡೆಯುತ್ತಿರುವ ಜೆಡಿಎಸ್‌ನ ಪಂಚರತ್ನ ಯಾತ್ರೆ, ಪಂಚರ್ ಆಗಿದೆ. ಕಾಂಗ್ರೆಸ್‌ನ ಪ್ರಜಾಧ್ವನಿಗೆ ಉಸಿರೇ ಇಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊನ್ನುಡಿಕೆ ಮತ್ತು ಹೆಬ್ಬೂರು ಹೋಬಳಿಗಳ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಬುಧವಾರ ಉದ್ಘಾಟಿಸಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರದ್ದು ಒಂದೊಂದು ದನಿಯಾದರೆ, ಮಲ್ಲಿಕಾರ್ಜುನ ಖರ್ಗೆ ಅವರದ್ದೇ ಬೇರೆ ಆಲೋಚನೆ. ದೇಶ, ನಾಡಿನ ಅಭಿವೃದ್ಧಿ ಪರಿಕಲ್ಪನೆಯಲ್ಲಿ ದುಡಿಯುತ್ತಿರುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ ಮಾತ್ರ.
ಒಂದು ಕಾಲದಲ್ಲಿ ಹೊರದೇಶಗಳಿಂದ ಬೇಡುವ ಸ್ಥಿತಿಯಲ್ಲಿದ್ದ ಭಾರತ, ಇಂದು ಬೇರೆ ರಾಷ್ಟ್ರಗಳಿಗೆ ನೀಡುವ ಸ್ಥಿತಿಯಲ್ಲಿದೆ ಅಂದರೆ ಅದಕ್ಕೆ ಪ್ರಧಾನಿ ಮೋದಿ ಅವರ ಆಡಳಿತ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಭಿವೃದ್ಧಿ ಮತ್ತು ಒಳ್ಳೆಯ ಆಡಳಿತ ಬಿಜೆಪಿಯ ಎರಡು ಪ್ರಮುಖ ಸಿದ್ಧಾಂತಗಳಾಗಿದ್ದು ದ್ವೇಷ ರಹಿತ, ಜಾತಿ, ಧರ್ಮ ರಹಿತ ಆಡಳಿತಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಸಿರುವ, ಸರ್ವರನ್ನೂ ಒಳಗೊಳ್ಳುವ 2023-24ನೇ ಸಾಲಿನ ಬಜೆಟ್ ಸಾಕ್ಷಿ. ನಾವು ಮಾತನಾಡುವುದನ್ನೇ ಕೆಲಸ ಮಾಡಿಕೊಂಡಿಲ್ಲ. ಇಂದು ನಮ್ಮ ಕೆಲಸಗಳು ಮಾತನಾಡುತ್ತಿವೆ ಎಂದರು. ಈ ಬಾರಿ ಧರ್ಮ ಸಂಸ್ಥಾಪನಾರ್ಥವಾಗಿ ನಡೆಯಲಿರುವ ವಿಧಾನಸಭಾ ಚುನಾವಣೆ ಎಂಬ ಅಶ್ವಮೇಧಯಾಗಕ್ಕೆ ಸುರೇಶ್‌ಗೌಡ ಎಂಬ ಕುದುರೆಯನ್ನು ಬಿಜೆಪಿಯಿಂದ ಬಿಡಲಾಗಿದ್ದು, ತಾಕತ್ತಿದ್ದರೆ ವಿರೋಧಪಕ್ಷಗಳು ಕಟ್ಟಿಹಾಕಲಿ ಎಂದು ಸವಾಲು ಹಾಕಿದರು.
ಬಿಜೆಪಿಯವರು ತಮ್ಮ ಕೋಟೆ ಫೌಂಡೇಷನ್ ಭದ್ರಪಡಿಸಿಕೊಳ್ಳಲಿ: ಎಚ್.ಡಿ.ಕುಮಾರಸ್ವಾಮಿ
ಧರ್ಮ ಸಂಸ್ಥಾಪನಾರ್ಥವಾಗಿ 2023ರ ಚುನಾವಣೆ: ಈ ಬಾರಿ ಧರ್ಮ ಸಂಸ್ಥಾಪನಾರ್ಥವಾಗಿ ನಡೆಯಲಿರುವ ವಿಧಾನಸಭಾ ಚುನಾವಣೆ ಎಂಬ ಅಶ್ವಮೇಧಯಾಗಕ್ಕೆ ಸುರೇಶ್‌ಗೌಡ ಎಂಬ ಕುದುರೆಯನ್ನು ಬಿಜೆಪಿಯಿಂದ ಬಿಡಲಾಗಿದ್ದು, ತಾಕತ್ತಿದ್ದರೆ ವಿರೋಧಪಕ್ಷಗಳು ಕಟ್ಟಿಹಾಕಲಿ ಎಂದು ಮಾಜಿ ಸಿಎಂ, ಬಿಜೆಪಿ ಮುಖಂಡ ಸದಾನಂದಗೌಡ ಸವಾಲು ಹಾಕಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊನ್ನುಡಿಕೆ ಮತ್ತು ಹೆಬ್ಬೂರು ಹೋಬಳಿಗಳ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 10 ವರ್ಷಗಳ ಕಾಲ ಕ್ಷೇತ್ರಕ್ಕೆ ಅಭಿವೃದ್ಧಿ ಹೊಳೆಯನ್ನೇ ಹರಿಸಿದ ಬಿ.ಸುರೇಶಗೌಡ, 2018ರ ಚುನಾವಣೆಯಲ್ಲಿ ಕಾರ್ಯಕರ್ತರ ಅತಿಯಾದ ಆತ್ಮವಿಶ್ವಾಸದಿಂದ ಕೂದಲೆಳೆಯ ಅಂತರದಲ್ಲಿ ಸೋಲು ಕಂಡಿದ್ದಾರೆ. ಆದರೆ ಈ ಬಾರಿ ಅದು ಸಾಧ್ಯವಿಲ್ಲ. ಶೇ.100ಕ್ಕೆ ನೂರರಷ್ಟು ಗೆಲುವು ಖಚಿತ ಎಂದರು.
ಈಗಿನ ಶಾಸಕರು ಕೆಲಸ ಮಾಡಲು ಬಿಡುತ್ತಿಲ್ಲ: ತಮ್ಮ ಹತ್ತು ವರ್ಷಗಳ ಶಾಸಕ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ 2000 ಕೋಟಿಗೂ ಅಧಿಕ ಅನುದಾನವನ್ನು ತಂದು ರಸ್ತೆ, ಚರಂಡಿ, ಸಮುದಾಯ ಭವನ, ವಿದ್ಯುತ್ ಸಂಪರ್ಕ, ಪ್ರಾಥಮಿಕ ಶಾಲೆಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿದ್ದಾರೆ. ಈಗಿನ ಶಾಸಕರು ಕೇಂದ್ರದಿಂದ ಬಿಡುಗಡೆಯಾದ 10 ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆದಾರರು ಕಮಿಷನ್ ನೀಡಿಲ್ಲ ಎಂಬ ಕಾರಣಕ್ಕೆ ಕೆಲಸ ಮಾಡಲೇ ಬಿಟ್ಟಿಲ್ಲ. ಇಂತಹ ಶಾಸಕರ ಅಗತ್ಯ ಕ್ಷೇತ್ರಕ್ಕೆ ಇದೆಯೇ ಎಂಬುದನ್ನು ಮತದಾರರು ತೀರ್ಮಾನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಪ್ರಶ್ನಿಸಿದರು.
ಪಕ್ಷ ಸೇರ್ಪಡೆ, ಸ್ಪರ್ಧೆ ಬಗ್ಗೆ ಜನರ ಅಭಿಪ್ರಾಯ ಕೇಳುವೆ: ಸುಮಲತಾ ಅಂಬರೀಶ್
ಅಭಿವೃದ್ಧಿ ಮತ್ತು ಒಳ್ಳೆಯ ಆಡಳಿತ ಬಿಜೆಪಿ ಪಕ್ಷದ ಎರಡು ಪ್ರಮುಖ ಸಿದ್ದಾಂತಗಳಾಗಿದ್ದು, ದ್ವೇಷ ರಹಿತ, ಜಾತಿ, ಧರ್ಮ ರಹಿತ ಆಡಳಿತಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ, ಸರ್ವರನ್ನು ಒಳಗೊಳ್ಳುವ 2023-24ನೇ ಸಾಲಿನ ಬಜೆಟ್ ಸಾಕ್ಷಿಯಾಗಿದೆ. ರೈತರಿಗೆ 5 ಲಕ್ಷ ರು. ವರೆಗೆ ಬಡ್ಡಿರಹಿತ ಸಾಲ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ಅನುದಾನ, ವಿದ್ಯಾಸಿರಿ ಯೋಜನೆ ವಿಸ್ತರಣೆ ನಾಡಿನ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿವೆ. ನಾವು ಮಾತನಾಡುವುದನ್ನೇ ಕೆಲಸ ಮಾಡಿಕೊಂಡಿಲ್ಲ. ಇಂದು ನಮ್ಮ ಕೆಲಸಗಳು ಮಾತನಾಡುತ್ತಿವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೋಸ್ಕರ ಬಿ.ಸುರೇಶಗೌಡರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.