ಕಾಂಗ್ರೆಸ್-ತಮಿಳುನಾಡಿನ ನಂಟಿಂದ ರಾಜ್ಯಕ್ಕೆ ನಷ್ಟ: ಕುಮಾರಸ್ವಾಮಿ ಹೇಳಿದ್ದೇನು?

By Kannadaprabha News  |  First Published Sep 22, 2023, 12:17 PM IST

ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯ ವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 


ಬೆಂಗಳೂರು (ಸೆ.22): ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯ ವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಗುರುವಾರ ಕಾವೇರಿ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ  ಬಳಿಕ ಟ್ವಿಟರ್‌ನಲ್ಲಿ ರಾಜ್ಯ ಸರ್ಕಾರ ವಿರುದ್ಧ  ಟೀಕಾಪ್ರಹಾರ ನಡೆಸಿದ್ದಾರೆ.  ಡಿಎಂಕೆ ಅಂಗಪಕ್ಷವಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಉದ್ದೇಶದಿಂದ  ರಾಜ್ಯದ ಹಿತವನ್ನು ಬಲಿಗೊಟ್ಟಿದೆ. 

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ  ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ  ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆಹೆಜ್ಜೆಗೂ  ರಾಜ್ಯ ಸರ್ಕಾರ ತಪ್ಪು ಮಾಡಿದೆ ಎಂದು  ವಾಗ್ದಾಳಿ ನಡೆಸಿದ್ದಾರೆ.  ಆ.೧೦ರಂದು ಕಾವೇರಿ ಜನ ನಿಯಂತ್ರಣ ಸಭೆ ನಡೆದಿದ್ದು, ಮರುದಿನ ಕಾವೇರಿ  ಜಲನಿರ್ವಹಣಾ ಪ್ರಾಧಿಕಾರ ಸಭೆ ಜರುಗಿತು.  ಪ್ರಾಧಿಕಾರವು ಐದು ಸಾವಿರ ಕ್ಯೂಸೆಕ್ ನೀರು  ಬಿಡಿ ಎಂದು ಸೂಚಿಸಿದ ತಕ್ಷಣವೇ  ಸುಪ್ರೀಂಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ  ಮಾಡಿಕೊಡಬೇಕಿತ್ತು.

Tap to resize

Latest Videos

ರಾಜ್ಯದಲ್ಲಿ ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಘಟಕ: ಸಚಿವ ಜಾರ್ಜ್‌

ನಿಯಂತ್ರಣ ಸಮಿತಿ,  ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ  ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ  ಪ್ರತಿಪಕ್ಷಗಳ ನಾಯಕರ ಸಲಹೆಗಳನ್ನು ಗಾಳಿಗೆ  ತೂರಿತು ಎಂದು ಕಿಡಿಕಾರಿದ್ದಾರೆ.  ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ  ಎಂದು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದ್ದು,  ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು  ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ.  ಪ್ರಾಧಿಕಾರದ ಆದೇಶವನ್ನು ಸುಪ್ರೀಂಕೋರ್ಟ್ ಹೇಳಿದೆ.  ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಾಲಯಕ್ಕೆ  ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.  

Chikkamagaluru: ಪ್ರಸಿದ್ಧ ಪ್ರವಾಸಿ ತಾಣ ವಸಿಷ್ಠ ತೀರ್ಥಕ್ಕೆ ಹೋಗಲುಬೇಕು ಡಬಲ್ ಗುಂಡಿಗೆ!

ಸರ್ಕಾರ ಅನುಸರಿಸಿದ ವಿಳಂಬ ರಾಜಕಾರಣ ರಾಜ್ಯದ  ಹಿತಕ್ಕೆ ಪೆಟ್ಟು ನೀಡಿದೆ. ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಹೋದ ಕೂಡಲೇ ರಾಜ್ಯವೂ ಮೊರೆ ಹೋಗಬೇಕಿತ್ತು.  ಮೀನಾಮೇಷ ಎಣಿಸುತ್ತಾ ತಡ ಮಾಡಿತು. ತಡ ಮಾಡಿದ್ದಕ್ಕೆ  ತಕ್ಕ ಶಾಸ್ತಿ ಆಗಿದೆ. ವಿನಾಕಾರಣ ಕನ್ನಡಿಗರಿಗೆ ಶಿಕ್ಷೆ ಆಗಿದೆ.  ಕೆಆರ್‌ಎಸ್ ನಲ್ಲಿ ಈಗ 20 ಟಿಎಂಸಿಗೂ ಕಡಿಮೆ ನೀರು ಇದೆ. ಮೂರು ದಿನಕ್ಕೆ ಒಂದು ಟಿಎಂಸಿ ಹರಿದು  ಹೋಗುತ್ತದೆ. 15 ದಿನಕ್ಕೆ ಏಳು ಟಿಎಂಸಿ ಖಾಲಿಯಾಗಲಿದೆ. 13 ಟಿಎಂಸಿ ಉಳಿಯಯಲಿದ್ದು, ಇದರಲ್ಲಿ ಡೆಡ್ ಸ್ಟೋರೇಜ್  ಏಳು ಟಿಎಂಸಿ ಇರಬೇಕು. ಬೆಂಗಳೂರಿಗೆ ಇನ್ನೂ ಒಂಭತ್ತು  ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ ೧೩ ಟಿಎಂಸಿ ಬೇಕು. ಎಲ್ಲಿಂದ  ಬರುತ್ತೆ ಆ ನೀರು? ರೈತರ ಬೆಳೆಗಳ ಕಥೆ ಏನು? ಇದಕ್ಕೆಲ್ಲ  ಸರಕಾರವೇ ನೇರ ಕಾರಣ ಎಂದು ಕುಮಾರಸ್ವಾಮಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

click me!