ಏನ್‌ ಗ್ರೇಟರ್ ಬೆಂಗಳೂರು ಮಾಡ್ತಾರೋ ಮಾಡಲಿ: ಡಿಕೆಶಿಗೆ ಎಚ್ಡಿಕೆ ಟಾಂಗ್

By Kannadaprabha News  |  First Published Nov 11, 2023, 3:30 AM IST

ನನ್ನ ಜಿಲ್ಲೆಯ ಅಭಿವೃದ್ಧಿ ಕುರಿತು ಯಾವುದೇ ತಕರಾರು ಇಲ್ಲ. ಬಿಡದಿ ಗ್ರೇಟರ್ ಬೆಂಗಳೂರು ಸೇರ್ಪಡೆ ಸೇರಿ ಇಂಥ ಇನ್ನೂ ಇಪ್ಪತ್ತು ಘೋಷಣೆ ಮಾಡಲಿ. ಏನ್‌ ಗ್ರೇಟರ್ ಬೆಂಗಳೂರು ಮಾಡುತ್ತಾರೋ ಮಾಡಲಿ. 


ಚನ್ನಪಟ್ಟಣ (ನ.11): ನನ್ನ ಜಿಲ್ಲೆಯ ಅಭಿವೃದ್ಧಿ ಕುರಿತು ಯಾವುದೇ ತಕರಾರು ಇಲ್ಲ. ಬಿಡದಿ ಗ್ರೇಟರ್ ಬೆಂಗಳೂರು ಸೇರ್ಪಡೆ ಸೇರಿ ಇಂಥ ಇನ್ನೂ ಇಪ್ಪತ್ತು ಘೋಷಣೆ ಮಾಡಲಿ. ಏನ್‌ ಗ್ರೇಟರ್ ಬೆಂಗಳೂರು ಮಾಡುತ್ತಾರೋ ಮಾಡಲಿ. ಈಗ ನಾವು ಬೆಂಗಳೂರನ್ನೇ ನೋಡುತ್ತಿಲ್ವಾ? ಮಳೆ ಬಂದಾಗ ಬೆಂಗಳೂರು ಏನಾಗುತ್ತಿದೆ ಗೊತ್ತಿಲ್ವಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಿಡದಿ ಗ್ರೇಟರ್ ಬೆಂಗಳೂರು ಸೇರ್ಪಡೆ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, 2004ರಲ್ಲಿ ಬೆಂಗಳೂರನ್ನು ಸಿಂಗಾಪುರ ಮಾಡುತ್ತೇವೆ ಅಂದಿದ್ರು. 

ಮಳೆ ಆದಾಗ ಏನಾಯ್ತು ಅಂತ ನೀವೇ ತೋರಿಸಿದ್ದೀರಿ. ಕಂದಾಯ ಸಚಿವರ ಕ್ಷೇತ್ರದಲ್ಲೇ ಏನಾಯಿತು ಅಂತ ನೋಡಿದ್ದೇವೆ. ಇದೇ ಗ್ರೇಟರ್ ಬೆಂಗಳೂರು. ನಾನ್ ಕಾಣದೇ ಇರೋದಾ ಇದೆಲ್ಲ ಎಂದು ವ್ಯಂಗ್ಯವಾಡಿದರು. ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಸರ್ಕಾರದಲ್ಲೂ ಅಧಿಕಾರಿಗಳ ಮಟ್ಟದಲ್ಲಿ ಇದೆಲ್ಲ ನಡೆಯುತ್ತದೆ. ಫೋನ್ ಕದ್ದಾಲಿಕೆ ಮಾಡಿ ಏನು ಪ್ರಯೋಜನ? ಅವರಿಗೆ ಅನುಕೂಲ ಆಗುತ್ತದೆ ಅಂದರೆ ಮಾಡಲಿ ಬಿಡಿ ಎಂದರು.

Tap to resize

Latest Videos

ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವುದೇ ಬಿಜೆಪಿ-ಜೆಡಿಎಸ್ ಮೈತ್ರಿ ಆದ್ಯತೆ: ಎಚ್‌ಡಿಕೆ

ರಾಮನಗರಕ್ಕೆ ಬೇಕಿದ್ರೆ ದೆಹಲಿ, ದುಬೈ ಹೆಸರಿಡಿ-ಎಚ್‌ಡಿಕೆ ವ್ಯಂಗ್ಯ: ಶೀಘ್ರದಲ್ಲೇ ರಾಮನಗರಕ್ಕೆ ಮರುನಾಮಕರಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಬೆಂಗಳೂರು ದಕ್ಷಿಣ ಅಲ್ಲದಿದ್ರೆ ದೆಹಲಿ ಅಂತ ಮಾಡಲಿ. ದೆಹಲಿ ಅಂತ ಮಾಡಿದರೆ ಪ್ರಪಂಚದ ಮೂಲೆಮೂಲೆಯಿಂದ ಎಲ್ಲರೂ ಬರುತ್ತಾರೆ. ರಾಮನಗರವನ್ನು ಬೆಂಗಳೂರು ಮಾಡುವುದು ಬೇಡ. ದೆಹಲಿ ಅಥವಾ ದುಬೈ ಅಂತಾನೆ ಮಾಡಿ. ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ. ನೀವೇನು ಮೂಲ ಸೌಕರ್ಯ ಕೊಡುತ್ತೀರಿ, ಅಭಿವೃದ್ಧಿ ಮಾಡುತ್ತೀರಿ ಅದರ ಮೇಲೆ ಜನಬರೋದು. ಅವರಿಗೆ ಬೇರೆ ಕೆಲಸ ಇಲ್ಲ, ಜನರ ಕೆಲಸ ಮಾಡಲ್ಲ. ಜನರ ಗಮನಸೆಳೆಯಲು ಹೀಗೆ ಮಾತನಾಡುತ್ತಾರೆ ಎಂದು ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದರು.

click me!