ಡಿಕೆಶಿ ಬೆಳೆದ ಅಕ್ಕಿಯಲ್ಲಿ ಬಿಜೆಪಿ ಮಂತ್ರಾಕ್ಷತೆ ಹಂಚ್ತಿದ್ದಾರಾ: ಎಚ್‌.ಡಿ.ಕುಮಾರಸ್ವಾಮಿ

Published : Jan 09, 2024, 04:45 AM IST
ಡಿಕೆಶಿ ಬೆಳೆದ ಅಕ್ಕಿಯಲ್ಲಿ ಬಿಜೆಪಿ ಮಂತ್ರಾಕ್ಷತೆ ಹಂಚ್ತಿದ್ದಾರಾ: ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ‘ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ’ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಜ.09): ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ‘ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ’ ಎಂದು ತಿರುಗೇಟು ನೀಡಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ರಾಮ ಮಂದಿರಕ್ಕೆ ಆಹ್ವಾನ ನೀಡಿಲ್ಲ ಎಂದು ಶಿವಕುಮಾರ್‌ ದೂರಿದ್ದಾರೆ.

ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ? ಉದ್ಘಾಟನೆ ದಿನ ಗೊಂದಲವಾಗುವುದು ಬೇಡವೆಂದು ಪ್ರಧಾನಿಗಳು ಈಗಾಗಲೇ ಹೇಳಿದ್ದಾರೆ. ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಿದಾಗ ಎಲ್ಲರೂ ಶ್ರೀರಾಮನ ದರ್ಶನ ಪಡೆಯಬಹುದು. ಆಗ ಯಾರು ಬೇಕಾದರೂ ಹೋಗಬಹುದು ಎಂದರು. ಇನ್ನು, ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆರೋಗ್ಯದ ಪರಿಸ್ಥಿತಿಗಳ ಆಧಾರದ ಮೇಲೆ ಹೋಗುವ ಬಗ್ಗೆ ಮುಂದೆ ನಿರ್ಧಾರ ಮಾಡುತ್ತೇವೆ. ದೇವೇಗೌಡರು ಪ್ರಯಾಣ ಮಾಡುವುದಕ್ಕೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಸಲಹೆ ಪಡೆದು ನಿರ್ಧರಿಸುತ್ತೇವೆ ಎಂದರು.

ಶ್ರೀಕಾಂತ್‌ ಪೂಜಾರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ವಿಶೇಷ ಆಹ್ವಾನ?

ಜೆಡಿಎಸ್‌ ಶಾಸಕರಿಗೆ ಸಿಎಂ, ಡಿಸಿಎಂ ಮತ್ತೆ ಗಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್ ಪಕ್ಷದ ಶಾಸಕರಿಗೆ ಆಮಿಷ ಒಡ್ಡಿ ಸೆಳೆಯುವ ಪ್ರಯತ್ನ ಮುಂದುವರೆಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಬಗ್ಗೆ ಮುಖ್ಯಮಂತ್ರಿಗಳು ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಎನ್ನುವುದೇ ಅವರ ಅಜೆಂಡಾ. ಆ ಇಬ್ಬರು ನಾಯಕರ (ಸಿದ್ದು, ಡಿಕೆಶಿ) ಅಜೆಂಡಾ ಇದೆ ಆಗಿದೆ. 

ಈಗಲೂ ಸಹ ಅವರಿವರ ಮನೆ ಬಾಗಿಲು ತಟ್ಟುತ್ತಿದ್ದಾರೆ. ನಮ್ಮ ಪಕ್ಷವನ್ನು ಮುಗಿಸುವುದೇ ಅವರ ಉದ್ದೇಶವಾಗಿದೆ ಎಂದರು. ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಬನ್ನಿ. ಏನು ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡುತ್ತೇವೆ. ಪಕ್ಷಕ್ಕೆ ಬನ್ನಿ ಎನ್ನುತ್ತಾರೆ. ಯಾವ ಕಾರಣಕ್ಕೆ ಇದನ್ನು ಮಾಡುತ್ತೀರಿ. ವಿರೋಧ ಪಕ್ಷ ಉಳಿಸೋಕೆ ಮಾಡುತ್ತಿರುವುದಾ? ಜೆಡಿಎಸ್ ಮುಗಿಸಬೇಕು ಎಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಅಯೋಧ್ಯೆಯಲ್ಲಿ ವಾಲ್ಮೀಕಿ ದೇಗುಲ ನಿರ್ಮಾಣವಾಗಬೇಕು: ಸಚಿವ ಕೆ.ಎನ್.ರಾಜಣ್ಣ

ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡುತ್ತಾರೆ ಅಂತ ದೇವೇಗೌಡರು ಹೇಳಿದ್ದಾರೆ ಅಷ್ಟೆ. ಶಿವಕುಮಾರ್‌ ಅವರು ಕಾಂಗ್ರೆಸ್ 135 ವರ್ಷದ ಪಕ್ಷ ಎನ್ನುತ್ತಾರೆ. ಗಾಂಧೀಜಿ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ. ಇವರು ಮಾಡುತ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್