ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತೆಗೆದುಕೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು (ಆ.15): ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತೆಗೆದುಕೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಬೋಡಿಯಾ ಪ್ರವಾಸ ಮುಗಿಸಿ ಹಿಂತಿರುಗಿದ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ’ ಎಂಬ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಕಿಡಿಕಾರಿದರು.
ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನು ಬಿಟ್ಟುಬಿಡಿ, ನೀವು ವಿದೇಶದಲ್ಲಿರಿ ಎಂಬ ಸಲಹೆ ಕೊಟ್ಟಂತೆ ಇದೆ. ಯಾಕೆಂದರೆ ಮಾನ ಮಾರ್ಯಾದೆ ಇಲ್ಲದೆ, ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಅಡ್ಡಿಯಾಗುತ್ತೇನೆ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಅಧಿಕಾರಿಗಳು ರಾಜ್ಯಪಾಲರ ಬಗ್ಗೆ ಬರೆದಿರುವ ಪತ್ರದ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಯಾಕೆ ಹೋದರು? ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಎಲ್ಲಿಯೂ ಆ ಬಗ್ಗೆ ಪ್ರಸ್ತಾಪಿಸಿಲ್ಲ.
ಮಂಗಳೂರು: ಬಿಜೆಪಿ ಶಾಸಕರ ಪ್ರತಿಭಟನೆಗೆ ಮಣಿದ ಸರ್ಕಾರ: ಅಮಾನತು ಆದೇಶ ವಾಪಾಸ್!
ನನ್ನ ಹೆಸರು ಯಾಕೆ ತಳುಕು ಹಾಕುತ್ತಿದ್ದಾರೆ? ಅವರಿಗೆ ಅಲ್ಲಿಯೂ ನನ್ನ ಹೆಸರೇ ಬೇಕು. ಯಾಕೆಂದರೆ ನನ್ನದೇ ಭಯ ಇದೆ. ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ ಇಂತಹ ಪರಿಸ್ಥಿತಿ ಯಾವ ಕಾರಣಕ್ಕಾಗಿ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಎಂದು ಹಗಲು ದರೋಡೆ ಮಾಡುವುದಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಎಂದು ಹೇಳಿದ ಅವರು, ಈಗ ಮಧ್ಯಪ್ರದೇಶದಲ್ಲಿಯೂ 40 ಪರ್ಸೆಂಟ್ ಎಂದು ಹೇಳಿ ಪೋಸ್ಟರ್ ಹಾಕಿಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿದ್ದು ನನ್ನ ಕೆಣಕಬೇಡಿ: ‘ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿಯಲ್ಲ. ನಡೆದಿರುವುದನ್ನು ಹೇಳಿದ್ದೇನೆ. ಮಿಸ್ಟರ್ ಸಿದ್ದರಾಮಯ್ಯ, ನಿಮ್ಮಂತೆ ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಮ್ಮ ವಿರುದ್ಧ ಟೀಕೆಗಳನ್ನು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದರು.
ಮಳೆಗಾಗಿ ಪ್ರಾರ್ಥಿಸಿ ಬಾಲಕರಿಗೆ ಮದುವೆ: ಹಾಡು-ಕುಣಿತದ ಮೂಲಕ ಪ್ರಾರ್ಥನೆ
ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್, ಪೇ ಸಿಎಂ ಆರೋಪ ಮಾಡಲಾಗಿತ್ತು. ಆ ಆರೋಪಗಳ ಕಥೆ ಏನು? ಒಂದು ದಾಖಲೆಯನ್ನಾದರೂ ಹೊರಗೆ ಬಿಟ್ಟರಾ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? ಈಗ ನಿಮ್ಮದೇ ಸರ್ಕಾರವಿದೆ, ದಾಖಲೆ ಏಕೆ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ ಅವರು, ಕುಮಾರಸ್ವಾಮಿಯವರು ಖಷಿಯಿಂದ ಮಾತಾನಾಡುತ್ತಾರೆ. ಅಣ್ಣ ಮಾತನಾಡಲಿ, ತಮ್ಮ ಕೇಳುತ್ತೇನೆ ಎಂದಿದ್ದಾರೆ. ಸದ್ಯಕ್ಕೆ ಅಂತಹ ತಮ್ಮ ನನಗಿಲ್ಲ. ಈ ಜನ್ಮದಲ್ಲಂತೂ ಅವರಿಗೆ ನಾನು ಅಣ್ಣನಾಗಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.